ಬದಲಾಗುತ್ತಿರುವ ಜೀವನಶೈಲಿ ಮತ್ತು ಪ್ರಸ್ತುತ ಯುಗದ ಅನಾರೋಗ್ಯಕರ ಆಹಾರ ಪದ್ಧತಿಯಿಂದಾಗಿ, ಕೂದಲಿನ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತಿದೆ.
ಹೀಗಿರುವಾಗ ಕೂದಲಿನ ಆರೋಗ್ಯ ಕಾಪಾಡಲು, ಕೂದಲು ಉದುರುವಿಕೆ ತಡೆಯಲಿ ಕೆಲವೊಂದು ಆಹಾರಗಳನ್ನ ಪ್ರತೀ ದಿನ ಸೇವಿಸಬೇಕು.
ಅಗಸೆ ಬೀಜವನ್ನು ಆರೋಗ್ಯಕ್ಕೆ ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ, ಇದರಲ್ಲಿ ಹೇರಳವಾದ ಫೈಬರ್, ಪ್ರೋಟೀನ್, ಜೀವಸತ್ವಗಳು, ಖನಿಜಗಳು ಮತ್ತು ಹಲವಾರು ರೀತಿಯ ಮ್ಯಾಕ್ರೋನ್ಯೂಟ್ರಿಯೆಂಟ್ಗಳಿವೆ. ಇದನ್ನು ಸಾಮಾನ್ಯವಾಗಿ ಹುರಿದ ಅಥವಾ ಪುಡಿ ರೂಪದಲ್ಲಿ ಸೇವಿಸಿದರೆ ಉತ್ತಮ.
ಕರಿಬೇವಿನ ಎಲೆಗಳನ್ನು ದಕ್ಷಿಣ ಭಾರತದ ಖಾದ್ಯಗಳಲ್ಲಿ ವ್ಯಾಪಕವಾಗಿ ಬಳಸಲಾಗುತ್ತದೆ. ಈ ಎಲೆಗಳು ಉತ್ಕರ್ಷಣ ನಿರೋಧಕಗಳು ಮತ್ತು ಪ್ರೋಟೀನ್ ಗಳನ್ನು ಒಳಗೊಂಡಿರುತ್ತವೆ. ಹೀಗಾಗಿ ಕರಿಬೇವಿನ ಎಲೆಗಳ ರಸವನ್ನು ಕುಡಿದರೆ ಕೂದಲಿಗೆ ಉತ್ತಮ ಎಂದು ಪರಿಗಣಿಸಲಾಗಿದೆ.
ನೆಲ್ಲಿಕಾಯಿ ಹಲವಾರು ಪೋಷಕಾಂಶಗಳನ್ನು ಹೊಂದಿದೆ. ಇದರಲ್ಲಿರುವ ವಿಟಮಿನ್ ಸಿ ಕೂದಲು ವೇಗವಾಗಿ ಬೆಳೆಯಲು ಸಹಾಯ ಮಾಡುತ್ತದೆ, ಇದನ್ನು ಜ್ಯೂಸ್ ರೂಪದಲ್ಲಿ ಸೇವಿಸಬಹುದು.
ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಅದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಬೇಕು. ZEE NEWS ಅದನ್ನು ಖಚಿತಪಡಿಸುವುದಿಲ್ಲ.