ಈ ಡ್ರೈ ಫ್ರೂಟ್‌ನ್ನು ತಿಂದರೆ ಬಿಳಿಕೂದಲು ಸೆಕೆಂಡುಗಳಲ್ಲಿ ಕಪ್ಪುಬಣ್ಣಕ್ಕೆ ತಿರುಗಲು ಪ್ರಾರಂಭಿಸುತ್ತದೆ!

Bhavishya Shetty
Dec 14,2024

ಪ್ರಯೋಜನ

ಕಪ್ಪು ಒಣದ್ರಾಕ್ಷಿಗಳು ಉತ್ತಮ ಪ್ರಮಾಣದ ಪೊಟ್ಯಾಸಿಯಮ್, ಫೈಬರ್, ಪಾಲಿಫಿನಾಲ್ಗಳು, ಪ್ರೋಟೀನ್ ಮತ್ತು ಉತ್ಕರ್ಷಣ ನಿರೋಧಕಗಳನ್ನು ಹೊಂದಿರುತ್ತವೆ. ಈ ಎಲ್ಲಾ ಅಂಶಗಳು ದೇಹಕ್ಕೆ ಪ್ರಯೋಜನವನ್ನು ನೀಡುತ್ತವೆ.

ಸದೃಢ ಕೂದಲು

ಕಪ್ಪು ಒಣದ್ರಾಕ್ಷಿಯನ್ನು ನಿಯಮಿತವಾಗಿ ತಿನ್ನುವುದರಿಂದ ಬಿಳಿ ಕೂದಲಿನ ಸಮಸ್ಯೆ ನಿವಾರಣೆಯಾಗುತ್ತದೆ ಮತ್ತು ಕೂದಲು ಕಪ್ಪಾಗಿ ಉಳಿಯುತ್ತದೆ. ಜೊತೆಗೆ ದೃಢವಾಗಿ ಮತ್ತು ಮೃದುವಾದ ಕೂದಲು ನಿಮ್ಮದಾಗುತ್ತದೆ

ಕೂದಲು ಉದುರುವಿಕೆ

ಕಪ್ಪು ಒಣದ್ರಾಕ್ಷಿಗಳು ಅನೇಕ ವಿಧದ ಜೀವಸತ್ವಗಳು ಮತ್ತು ಖನಿಜಗಳನ್ನು ಹೊಂದಿರುತ್ತದೆ. ಒಣದ್ರಾಕ್ಷಿಯಲ್ಲಿರುವ ಆಂಟಿಆಕ್ಸಿಡೆಂಟ್ ಮತ್ತು ಕಬ್ಬಿಣದ ಪ್ರಮಾಣವು ಕೂದಲು ಉದುರುವಿಕೆಯನ್ನು ತಡೆಯುತ್ತದೆ.

ಕಪ್ಪು ಕೂದಲು

ಚಿಕ್ಕ ವಯಸ್ಸಿನಲ್ಲೇ ಕೂದಲು ಬೂದು ಬಣ್ಣಕ್ಕೆ ತಿರುಗುತ್ತಿದ್ದರೆ, ಕಪ್ಪು ಒಣದ್ರಾಕ್ಷಿಗಳನ್ನು ಆಹಾರದಲ್ಲಿ ಸೇರಿಸಿಕೊಳ್ಳಬಹುದು. ಇದು ಕೂದಲನ್ನು ಕಪ್ಪಾಗಿಸಲು ಸಹಾಯ ಮಾಡುತ್ತದೆ.

ನೆತ್ತಿಯ ಪೋಷಣೆ

ಒಣದ್ರಾಕ್ಷಿ ಸೇವನೆಯಿಂದ ರಕ್ತ ಸಂಚಾರ ಸುಧಾರಿಸುತ್ತದೆ. ಇದನ್ನು ತಿನ್ನುವುದರಿಂದ ಕೂದಲು ಹೊಳಪು ಮತ್ತು ಮೃದುವಾಗಿರುತ್ತದೆ. ಹಾಗೆಯೇ ನೆತ್ತಿಯ ಪೋಷಣೆಯಾಗುತ್ತದೆ.

ಹೀಗೆ ತಿನ್ನಿ...

ಕಪ್ಪು ಒಣದ್ರಾಕ್ಷಿಯಲ್ಲಿ ವಿಟಮಿನ್ ಸಿ ಮತ್ತು ವಿಟಮಿನ್ ಇ ಇರುತ್ತದೆ. ಇದು ಕೂದಲಿನ ಬೆಳವಣಿಗೆಯನ್ನು ಉತ್ತೇಜಿಸುತ್ತದೆ. ಕಪ್ಪು ಒಣದ್ರಾಕ್ಷಿಗಳನ್ನು ರಾತ್ರಿಯಿಡೀ ನೆನೆಸಿ ಬೆಳಿಗ್ಗೆ ಅದನ್ನು ಸೇವಿಸಿ.

ಸೂಚನೆ

ಪ್ರಿಯ ಓದುಗರೇ, ಈ ಲೇಖನವು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಜೀ ಕನ್ನಡ ನ್ಯೂಸ್‌ ಇದನ್ನು ಖಚಿತಪಡಿಸುವುದಿಲ್ಲ. ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತಪ್ಪದೇ ತೆಗೆದುಕೊಳ್ಳಿ.

VIEW ALL

Read Next Story