ಬೆಳಗಿನ ಉಪಹಾರದಲ್ಲಿ ಮೊಟ್ಟೆ ತಿಂದರೆ ಸುಲಭವಾಗಿ ತೂಕ ಇಳಿಕೆ ಆಗುತ್ತೆ. ಅಷ್ಟೇ ಅಲ್ಲ, ಇದರಿಂದ ದೇಹಕ್ಕೆ ಶಕ್ತಿಯೂ ದೊರೆಯುತ್ತದೆ. ಹೇಗೆಂದು ತಿಳಿಯಲು ಮುಂದೆ ಓದಿ...
ಮೊಟ್ಟೆ ಪೌಷ್ಟಿಕಾಂಶ ಭರಿತ ತೂಕ ನಷ್ಟ ಸ್ನೇಹಿ ಆಹಾರ. ಹಾಗಾಗಿಯೇ ಇದನ್ನು ಬೆಳಿಗ್ಗೆ ಬ್ರೇಕ್ಫಾಸ್ಟ್ ಸಮಯದಲ್ಲಿ ತಿನ್ನುವುದು ಹೆಚ್ಚು ಪರಿಣಾಮಕಾರಿ ಆಗಿದೆ.
ಮೊಟ್ಟೆಯ ಉತ್ತಮ ಗುಣಮಟ್ಟದ ಪ್ರೊಟೀನ್, ಅಗತ್ಯ ಪೋಷಕಾಂಶಗಳಿಂದ ಸಮೃದ್ಧವಾಗಿದ್ದು ಇದು ಸ್ನಾಯುಗಳನ್ನು ಬಲಗೊಳಿಸುವಲ್ಲಿ ಪರಿಣಾಮಕಾರಿ.
ಮೊಟ್ಟೆಯಲ್ಲಿ ಹೆಚ್ಚಿನ ಪ್ರೊಟೀನ್ ಇದ್ದು, ಕ್ಯಾಲೋರಿ ಕಡಿಮೆ ಇರುತ್ತದೆ. ಇದು ತೂಕ ನಷ್ಟದ ವೇಳೆ ಸ್ನಾಯುವಿನ ದ್ರವ್ಯರಾಶಿಯನ್ನು ನಿರ್ಮಿಸಲು ಸಹಕಾರಿ ಆಗಿದೆ.
ಮೊಟ್ಟೆ ತಿಂದರೆ ದೀರ್ಘ ಸಮಯದವರೆಗೆ ಹೊಟ್ಟೆ ತುಂಬಿರುವಂತೆ ಭಾಸವಾಗುತ್ತದೆ. ಇದು ಅತಿಯಾಗಿ ತಿನ್ನುವುದನ್ನು ತಪ್ಪಿಸುತ್ತದೆ.
ಮೊಟ್ಟೆಯು ಚಯಾಪಚಯವನ್ನು ಹೆಚ್ಚಿಸುತ್ತದೆ. ಇದರಲ್ಲಿರುವ ಕೊಬ್ಬು/ಕಾರ್ಬೋಹೈಡ್ರೆಟ್ ಗಳಿಗೆ ಹೋಲಿಸಿದರೆ ಇದರಲ್ಲಿರುವ ಪ್ರೊಟೀನ್ ದೇಹವು ಹೆಚ್ಚಿನ ಕ್ಯಾಲೋರಿಗಳನ್ನು ಬರ್ನ್ ಮಾಡಲು ಸಹಾಯಕವಾಗಿದೆ.
ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.