ಇಂದಿನ ಜೀವನಶೈಲಿ, ಆಹಾರ ಪದ್ಧತಿ ಮತ್ತು ಹೆಚ್ಚುತ್ತಿರುವ ಮಾಲಿನ್ಯವು ಆರೋಗ್ಯದ ಮೇಲೆ ಮತ್ತು ಕೂದಲಿನ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಈ ಕಾರಣದಿಂದಾಗಿ, ಕೂದಲು ತೆಳ್ಳಗೆಗಾಗುವುದು, ಬಿಳಿಯಾಗುವುದು, ತಲೆಹೊಟ್ಟು ಮುಂದಾದ ಸಮಸ್ಯೆಗಳಿಗೆ ತುತ್ತಾಗುತ್ತದೆ.
ಇಂತಹ ಪರಿಸ್ಥಿತಿಯಲ್ಲಿ ಟೊಮೆಟೊ ಹೇರ್ ಮಾಸ್ಕ್ ಮಾಡುವ ವಿಧಾನವನ್ನು ತಂದಿದ್ದೇವೆ. ಟೊಮೆಟೊದಲ್ಲಿ ವಿಟಮಿನ್ ಸಿಯಂತಹ ಆಂಟಿ ಆಕ್ಸಿಡೆಂಟ್ʼಗಳು ಸಮೃದ್ಧವಾಗಿವೆ. ಇದು ಕೂದಲಿನಲ್ಲಿ ನೈಸರ್ಗಿಕ ಕಾಲಜನ್ ಬೂಸ್ಟರ್ ಆಗಿ ಕೆಲಸ ಮಾಡುತ್ತದೆ.
ಇದರೊಂದಿಗೆ, ಕೂದಲಿನ ಬೆಳವಣಿಗೆಯನ್ನು ಹೆಚ್ಚಿಸಲು ಸಹ ಸಹಾಯ ಮಾಡುತ್ತದೆ. ಟೊಮ್ಯಾಟೊ ಹೇರ್ ಮಾಸ್ಕ್ ಮಾಡುವುದು ಹೇಗೆ ಎಂಬುದನ್ನು ಮುಂದೆ ತಿಳಿಯೋಣ
ಮೊದಲು ಟೊಮೆಟೊ ತೆಗೆದುಕೊಳ್ಳಿ. ನಂತರ ಚೆನ್ನಾಗಿ ರುಬ್ಬಿ ರಸ ತೆಗೆಯಿರಿ. ಈ ರಸಕ್ಕೆ ನೀರು ಸೇರಿಸಿ. ಬಳಿಕ ನೆತ್ತಿಯ ಮೇಲೆ ಚೆನ್ನಾಗಿ ಹಚ್ಚಿ. ಸ್ವಲ್ಪ ಹೊತ್ತು ಮಸಾಜ್ ಮಾಡಿ. 10 ನಿಮಿಷಗಳ ಕಾಲ ಹಾಗೆ ಬಿಡಿ. ನಂತರ ಶಾಂಪೂ ಸಹಾಯದಿಂದ ಕೂದಲನ್ನು ತೊಳೆದು ಸ್ವಚ್ಛಗೊಳಿಸಿ.
ಈ ಟಿಪ್ಸ್ ಅನ್ನು ವಾರಕ್ಕೊಮ್ಮೆಯಾದರು ಅನುಸರಿಸಿದರೆ, ಕೂದಲಿನ ಬೆಳವಣಿಗೆಯನ್ನು ಉತ್ತೇಜಿಸುತ್ತದೆ. ಅಷ್ಟೇ ಅಲ್ಲದೆ, ಕೂದಲು ಉದುರುವ ಸ್ಥಳದಲ್ಲೇ ಮತ್ತೆ ಕೂದಲು ಬೆಳೆಯುವಂತೆ ಮಾಡುತ್ತದೆ.
ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಅದನ್ನು ಅಳವಡಿಸಿಕೊಳ್ಳುವ ಮೊದಲು, ದಯವಿಟ್ಟು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಿ. ZEE NEWS ಇದನ್ನು ಖಚಿತಪಡಿಸುವುದಿಲ್ಲ.