ಜೇನುತುಪ್ಪವನ್ನು ಸೇವಿಸುವುದರಿಂದ ದೇಹದ ಪ್ರತಿರಕ್ಷಣಾ ವ್ಯವಸ್ಥೆಯನ್ನು ಬಲಪಡಿಸುತ್ತದೆ. ಖಾಲಿ ಹೊಟ್ಟೆಯಲ್ಲಿ ಜೇನು ತುಪ್ಪವನ್ನು ಸೇವಿಸುವುದು ಉತ್ತಮ.
ತೂಕ ಇಳಿಸಿಕೊಳ್ಳಲು ಬಯಸುವವರಿಗೆ ಜೇನುತುಪ್ಪವು ತುಂಬಾ ಉಪಯುಕ್ತವಾಗಿದೆ.
ಚಳಿಗಾಲದಲ್ಲಿ ಪ್ರತಿದಿನ ಜೇನು ತುಪ್ಪವನ್ನು ಸೇವಿಸುವುದರಿಂದ ಒತ್ತಡ ಮತ್ತು ಆತಂಕದಿಂದ ಮುಕ್ತಿ ದೊರೆಯುತ್ತದೆ.
ಜೇನು ಹೊಟ್ಟೆಗೆ ಸಂಬಂಧಿಸಿದ ಕಾಯಿಲೆಗಳನ್ನು ಗುಣಪಡಿಸಲು ತುಂಬಾ ಸಹಕಾರಿ. ಒಂದು ಲೋಟ ನೀರಿಗೆ ಒಂದು ಚಮಚ ಜೇನುತುಪ್ಪ ಸೇರಿಸಿ ರಾತ್ರಿ ಕುಡಿದರೆ ಅಜೀರ್ಣ, ಮಲಬದ್ದತೆಯಂತಹ ಸಮಸ್ಯೆಗಳು ದೂರವಾಗುತ್ತದೆ.
ಜೇನುತುಪ್ಪವು ಉತ್ಕರ್ಷಣ ನಿರೋಧಕಗಳಲ್ಲಿ ಸಮೃದ್ಧವಾಗಿದೆ. ಇದು ಹೃದಯ ಸಂಬಂಧಿ ಕಾಯಿಲೆಗಳನ್ನು ತಡೆಯುತ್ತದೆ. ಮತ್ತು ಹೃದಯವನ್ನು ಆರೋಗ್ಯವಾಗಿಡಲು ಸಹಕಾರಿಸುತ್ತದೆ.