ದಾಳಿಂಬೆಯಲ್ಲಿ ಅಡಗಿದೆ ಸೌಂದರ್ಯದ ಗುಟ್ಟು!

Yashaswini V
Apr 01,2024

ದಾಳಿಂಬೆ

ದಾಳಿಂಬೆ ಸೇವನೆಯು ಆರೋಗ್ಯಕ್ಕೆ ಒಳ್ಳೆಯದು ಎಂದು ನಿಮಗೆ ತಿಳಿದೇ ಇದೆ. ಆದರೆ, ಇದು ನಿಮ್ಮ ಸೌಂದರ್ಯಕ್ಕೂ ವರದಾನವಿದ್ದಂತೆ.

ಚರ್ಮದ ಆರೋಗ್ಯ

ದಾಳಿಂಬೆಯಲ್ಲಿ ಫೈಬರ್, ವಿಟಮಿನ್ ಸಿ, ವಿಟಮಿನ್ ಕೆ, ಆ್ಯಂಟಿ ಆಕ್ಸಿಡೆಂಟ್‌ಗಳು ಸಮೃದ್ಧವಾಗಿದ್ದು ಇದು ಚರ್ಮವನ್ನು ಹಲವು ಸಮಸ್ಯೆಗಳಿಂದ ರಕ್ಷಿಸುತ್ತದೆ. ಅವುಗಳೆಂದರೆ...

ಸುಕ್ಕುಗಳಿಂದ ರಕ್ಷಣೆ

ದಾಳಿಂಬೆಯಲ್ಲಿ ವಿಟಮಿನ್ ಎ, ಇ ಮತ್ತು ಸಿ ಹೆಚ್ಚಿನ ಪ್ರಮಾಣದಲ್ಲಿದೆ. ಈ ಜೀವಸತ್ವಗಳು ಚರ್ಮದ ಸುಕ್ಕುಗಳನ್ನು ತಡೆಯುವಲ್ಲಿ ಪ್ರಯೋಜನಕಾರಿ ಆಗಿದೆ.

ಮಾಯಿಶ್ಚರೈಸ್

ದಾಳಿಂಬೆ ತ್ವಚೆಯ ತೇವಾಂಶವನ್ನು ಹಿಡಿದಿಡುವ ಕೆಲಸ ಮಾಡುತ್ತದೆ. ಇದರ ಬಳಕೆಯು ಚರ್ಮವನ್ನು ಮಾಯಿಶ್ಚರೈಸ್ ಮಾಡುವ ಮೂಲಕ ಚರ್ಮವನ್ನು ಮೃದುವಾಗಿಸುತ್ತದೆ.

ಮೊಡವೆ

ದಾಳಿಂಬೆ ವಿಟಮಿನ್ ಸಿ ಸಮೃದ್ಧ ಮೂಲವಾಗಿದೆ. ದಾಳಿಂಬೆ ಜ್ಯೂಸ್ ಕುಡಿಯುವುದರಿಂದ ಇದರಲ್ಲಿರುವ ಆ್ಯಂಟಿ ಆಕ್ಸಿಡೆಂಟ್ ಗುಣಗಳು ಮೊಡವೆಯಿಂದ ರಕ್ಷಣೆ ನೀಡುತ್ತದೆ.

ಯುವಿ ಕಿರಣಗಳಿಂದ ರಕ್ಷಣೆ

ದಾಳಿಂಬೆ ಬಳಕೆಯು ಸೂರ್ಯನ ಹಾನಿಕಾರಕ ಯುವಿ ಕಿರಣಗಳಿಂದ ಚರ್ಮವನ್ನು ರಕ್ಷಿಸುತ್ತದೆ.

ಸೂಚನೆ

ಸೂಚನೆ: ಪ್ರಿಯ ಓದುಗರೇ, ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ದಯವಿಟ್ಟು ಅದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಿ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ. 

VIEW ALL

Read Next Story