ಆರೋಗ್ಯಕ್ಕಷ್ಟೇ ಅಲ್ಲ ತ್ವಚೆಗೂ ಲಾಭದಾಯಕ ಕೇಸರ್ ದೂದ್
ಕೇಸರಿ ಹಾಲು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ ಎಂದು ನಿಮಗೆ ತಿಳಿದೇಯಿದೆ. ಆದರೆ, ಇದು ಉತ್ತಮ ಸೌಂದರ್ಯವರ್ಧಕವೂ ಹೌದು.
ಕೇಸರಿ ಮತ್ತು ಹಾಲಿನ ಫೇಸ್ ಪ್ಯಾಕ್‌ನ್ನು ಬಳಸುವುದರಿಂದ ನೈಸರ್ಗಿಕವಾಗಿ ಸುಂದರವಾದ ತ್ವಚೆಯನ್ನು ನಿಮ್ಮದಾಗಿಸಬಹುದು. ಅವುಗಳೆಂದರೆ
ಕೇಸರ್ ದೂದ್ ಪ್ಯಾಕ್ ನಿಯಮಿತ ಬಳಕೆಯು ಕೊಲಾಜೆನ್ ಉತ್ಪಾದನೆಯನ್ನು ಹೆಚ್ಚಿಸುತ್ತದೆ. ಇದು ಚರ್ಮವನ್ನು ಯೌವನವಾಗಿರುವಂತೆ ಮಾಡುತ್ತದೆ.
ಕೇಸರಿ ಮತ್ತು ಹಾಲಿನ ಪ್ಯಾಕ್ ತಯಾರಿಸಿ ಹಚ್ಚುವುದರಿಂದ ಇದು ಟ್ಯಾನಿಂಗ್ ಸಮಸ್ಯೆಯಿಂದ ಮುಕ್ತಿ ನೀಡುತ್ತದೆ.
ಹಾಲಿನಲ್ಲಿ ಕೇಸರಿಯನ್ನು ಬೆರೆಸಿ ಕುಡಿಯುವುದರಿಂದ ಇದು ಮೈಬಣ್ಣವನ್ನು ಸುಧಾರಿಸುವುದು ಮಾತ್ರವಲ್ಲದೆ, ಚರ್ಮದ ಶುಷ್ಕತೆಯನ್ನು ಕಡಿಮೆ ಮಾಡುತ್ತದೆ.
ಸೂಚನೆ: ಪ್ರಿಯ ಓದುಗರೇ, ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ದಯವಿಟ್ಟು ಅದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಿ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.