ಎಣ್ಣೆಯುಕ್ತ ಚರ್ಮದ ಸಮಸ್ಯೆಗೆ ನೈಸರ್ಗಿಕ ಪರಿಹಾರಗಳು

ಎಣ್ಣೆಯುಕ್ತ ಚರ್ಮ

ಎಣ್ಣೆಯುಕ್ತ ಚರ್ಮವು ಮೊಡವೆ ಸೇರಿದಂತೆ ಹಲವು ಚರ್ಮ ಸಮಸ್ಯೆಗಳಿಗೆ ಕಾರಣವಾಗಬಹುದು. ಆದರೆ, ಕೆಲವು ಮನೆಮದ್ದುಗಳಿಂದ ಈ ಸಮಸ್ಯೆಗೆ ನೈಸರ್ಗಿಕ ಪರಿಹಾರವನ್ನು ಪಡೆಯಬಹುದು.

ಅಲೋವೆರಾ

ಅಲೋವೆರಾ ಜೆಲ್ ಅನ್ನು ನಿಂಬೆ ರಸದೊಂದಿಗೆ ಬೆರೆಸಿ ಹಚ್ಚುವುದರಿಂದ ಅತಿಯಾದ ಎಣ್ಣೆಯುಕ್ತ ಚರ್ಮದ ಸಮಸ್ಯೆಯನ್ನು ತೊಡೆದುಹಾಕಬಹುದು.

ಟೊಮೆಟೊ

ವಾರದಲ್ಲಿ ಒಮ್ಮೆಯಾದರೂ ಟೊಮಾಟೊ ರಸವನ್ನು ಮುಖಕ್ಕೆ ಹಚ್ಚುವುದರಿಂದ ಆಯ್ಲಿ ಸ್ಕಿನ್ ಸಮಸ್ಯೆಗೆ ಸುಲಭ ಪರಿಹಾರ ಪಡೆಯಬಹುದು.

ಹಸಿ ಹಾಲು

ಹಸಿ ಹಾಲನ್ನು ಹತ್ತಿ ಉಂಡೆಯಲ್ಲಿ ಅದ್ದಿ ಮುಖಕ್ಕೆ ಹಚ್ಚಿ ಹತ್ತು ನಿಮಿಷದ ಬಳಿಕ ಕಡಲೆ ಹಿಟ್ಟಿನಿಂದ ಫೇಸ್ ವಾಶ್ ಮಾಡುವುದರಿಂದ ಎಣ್ಣೆಯುಕ್ತ ಚರ್ಮದ ಸಮಸ್ಯೆಯಿಂದ ಮುಕ್ತಿ ದೊರೆಯುತ್ತದೆ.

ಬಾಳೆಹಣ್ಣಿನ ಸಿಪ್ಪೆ

ಮಾಗಿದ ಬಾಳೆಹಣ್ಣಿನ ಸಿಪ್ಪೆಗೆ ಜೇನುತುಪ್ಪ ಬೆರೆಸಿ ಹಚ್ಚುವುದು ಎಣ್ಣೆಯುಕ್ತ ಚರ್ಮಕ್ಕೆ ಅತ್ಯುತ್ತಮ ಚಿಕಿತ್ಸೆ.

ಜೇನುತುಪ್ಪ

ಜೇನುತುಪ್ಪವನ್ನು ಮುಖಕ್ಕೆ ಹಚ್ಚಿ 10 ನಿಮಿಷಗಳ ಬಳಿಕ ಉಗುರು ಬೆಚ್ಚಗಿನ ನೀರಿನಿಂದ ಫೇಸ್ ವಾಶ್ ಮಾಡುವುದು ಆಯ್ಲಿ ಸ್ಕಿನ್ ಸಮಸ್ಯೆಗೆ ಉತ್ತಮ ಪರಿಹಾರ.

ಸೂಚನೆ

ಸೂಚನೆ: ಪ್ರಿಯ ಓದುಗರೇ, ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ದಯವಿಟ್ಟು ಅದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಿ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.

VIEW ALL

Read Next Story