ಚಳಿಗಾಲದಲ್ಲಿ ಚರ್ಮದ ಶುಷ್ಕತೆ ಸಾಮಾನ್ಯ ಸಮಸ್ಯೆಯಾಗಿದೆ. ಚರ್ಮದ ಆರೈಕೆಯಲ್ಲಿ ಕೊರತೆ, ಹವಾಮಾನ ಬದಲಾವಣೆ ಇದಕ್ಕೆ ಮುಖ್ಯ ಕಾರಣವಾಗಿರಬಹುದು.
ಚಳಿಗಾಲದಲ್ಲಿ ತ್ವಚೆ ಬೇಗ ಡ್ರೈ ಆಗುತ್ತದೆ. ಒಣತ್ವಚೆ ಸಮಸ್ಯೆಯು ಚರ್ಮದ ಸಮಸ್ಯೆಗಳನ್ನು ಹೆಚ್ಚಿಸಬಹುದು. ಇದನ್ನು ತಪ್ಪಿಸಲು ನೀವು ಮನೆಯಲ್ಲಿಯೇ ಕೆಲವು ಮನೆಮದ್ದುಗಳನ್ನು ತಯಾರಿಸಬಹುದು.
ಮನೆಯಲ್ಲಿಯೇ ತಯಾರಿಸಬಹುದಾದ ಸುಲಭ ಫೇಸ್ ಪ್ಯಾಕ್'ಗಳ ಸಹಾಯದಿಂದ ಡ್ರೈ ಸ್ಕಿನ್ ಸಮಸ್ಯೆಯಿಂದ ಪರಿಹಾರ ಪಡೆಯಬಹುದು.
ಒಂದೆರಡು ಚಮಚ ಸೌತೆಕಾಯಿ ರಸವನ್ನು ಮೊಸರಿನಲ್ಲಿ ಬೆರೆಸಿ ಮುಖಕ್ಕೆ ಹಚ್ಚಿ 10-15 ನಿಮಿಷಗಳ ಬಳಿಕ ಫೇಸ್ ವಾಶ್ ಮಾಡಿ.
ಕಡಲೆ ಹಿಟ್ಟಿನಲ್ಲಿ ಹಾಲಿನ ಕೆರೆ ಬೆರೆಸಿ ಮುಖಕ್ಕೆ ಹಚ್ಚಿ 15 ನಿಮಿಷಗಳ ಬಳಿಕ ತಣ್ಣೀರಿನಿಂದ ಮುಖ ತೊಳೆಯಿರಿ.
ಮೊಟ್ಟೆ ಬಿಳಿ ಭಾಗವನ್ನು ಜೇನುತುಪ್ಪದೊಂದಿಗೆ ಬೆರೆಸಿ ಮುಖಕ್ಕೆ ಲೇಪಿಸಿ 15 ನಿಮಿಷಗಳ ನಂತರ ಉಗುರು ಬೆಚ್ಚಗಿನ ನೀರಿನಲ್ಲಿ ಮುಖ ತೊಳೆಯಿರಿ.
ಅಲೋವೆರಾದಲ್ಲಿ ಬಾದಾಮಿ ಎಣ್ಣೆ ಬೆರೆಸಿ ಪೇಸ್ಟ್ ತಯಾರಿಸಿ ಮುಖಕ್ಕೆ ಹಚ್ಚಿ, ಸ್ವಲ್ಪ ಸಮಯದ ಬಳಿಕ ಫೇಸ್ ವಾಶ್ ಮಾಡಿ.
ರೋಸ್ ವಾಟರ್ ಅನ್ನು ಶ್ರೀಗಂಧದ ಪುಡಿಯನ್ನು ಬೆರೆಸಿ ಲಿಕ್ವಿಡ್ ಪೇಸ್ಟ್ ತಯಾರಿಸಿ ಮುಖಕ್ಕೆ ಹಚ್ಚಿ, ತಣ್ಣೀರಿನಿಂದ ಮುಖ ತೊಳೆಯಿರಿ. ಈ ಮನೆಮದ್ದುಗಳ ಸಹಾಯದಿಂದ ಡ್ರೈ ಸ್ಕಿನ್ ಸಮಸ್ಯೆಯಿಂದ ಮುಕ್ತಿ ದೊರೆತು ಸುಂದರ ಕೋಮಲ ತ್ವಚೆ ನಿಮ್ಮದಾಗುತ್ತದೆ.
ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.