ಕಿತ್ತಳೆಯಲ್ಲಿ ಅಡಗಿದೆ ಸೌಂದರ್ಯದ ಗುಟ್ಟು

ಕಿತ್ತಳೆ ಹಣ್ಣು

ಆರೋಗ್ಯಕ್ಕೆ ಹಲವು ಪ್ರಯೋಜನಗಳನ್ನು ನೀಡುವ ಕಿತ್ತಳೆ ಹಣ್ಣು ಉತ್ತಮ ಸೌಂದರ್ಯವರ್ಧಕವೂ ಹೌದು.

ಕಿತ್ತಳೆ ಸಿಪ್ಪೆ

ಕಿತ್ತಳೆ ಹಣ್ಣಿನ ಸಿಪ್ಪೆಗಳು ಮತ್ತು ಅದರ ರಸಗಳು ನಮ್ಮ ಚರ್ಮದ ಸೌಂದರ್ಯವನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ.

ಕಿತ್ತಳೆ ಲಾಭ

ಕಿತ್ತಳೆ ರಸ ಕಲೆಗಳನ್ನು ನಿವಾರಿಸುವುದರ ಜೊತೆಗೆ ತ್ವಚೆಯನ್ನು ಕಾಂತಿಯುತವಾಗಿಸುತ್ತದೆ.

ಕಪ್ಪು ಕಲೆ

ಮುಖದಲ್ಲಿ ಮೂಡಿರುವ ಕಪ್ಪು ಕಲೆಯನ್ನು ನಿವಾರಿಸಲು ಮೊಸರಿನೊಂದಿಗೆ ಕಿತ್ತಳೆ ಸಿಪ್ಪೆಯನ್ನು ಬೆರೆಸಿ ಪೇಸ್ಟ್ ಮಾಡಿ ಅದನ್ನು ಮುಖಕ್ಕೆ ಹಚ್ಚಿ, ಫುಲ್ ಡ್ರೈ ಆದ ನಂತರ ಉಗುರು ಬೆಚ್ಚಗಿನ ನೀರಿನಿಂದ ಫೇಸ್ ವಾಶ್ ಮಾಡಿ.

ಅಂದದ ತ್ವಚೆ

ನೀವು ಅಂದವಾದ ತ್ವಚೆಯನ್ನು ಬಯಸಿದರೆ ಇದಕ್ಕಾಗಿ ಕಿತ್ತಳೆ ಸಿಪ್ಪೆಯಲ್ಲಿ ಒಂದು ಚಮಚ ಜೇನುತುಪ್ಪ ಮತ್ತು ಅರಿಶಿನವನ್ನು ಬೆರೆಸಿ ಪೇಸ್ಟ್ ತಯಾರಿಸಿ ಮುಖಕ್ಕೆ ಲೇಪಿಸಿ. ಒಣಗಿದ ನಂತರ ಮುಖ ತೊಳೆಯಿರಿ.

ಕಾಂತಿಯುತ ತ್ವಚೆ

ಕಿತ್ತಳೆ ಸಿಪ್ಪೆಯ ಪುಡಿಯಲ್ಲಿ ಜೇನುತುಪ್ಪವನ್ನು ಬೆರೆಸಿ ಮುಖಕ್ಕೆ ಇಪ್ಪತ್ತು ನಿಮಿಷಗಳ ಕಾಲ ಹಚ್ಚಿ ನಂತರ ಮುಖವನ್ನು ತೊಳೆದುಕೊಳ್ಳಿ.ಈ ರೀತಿ ಮಾಡುವುದರಿಂದ ನಿಮ್ಮ ಚರ್ಮವು ಕಾಂತಿಯುತವಾಗುತ್ತದೆ.

ಮೊಡವೆ

ಕಿತ್ತಳೆ ಸಿಪ್ಪೆಯನ್ನು ರೋಸ್ ವಾಟರ್ ಮತ್ತು ಶ್ರೀಗಂಧದ ಪುಡಿಯೊಂದಿಗೆ ಬೆರೆಸಿ ಮುಖಕ್ಕೆ ಹಚ್ಚಿ. ಒಣಗಿದ ಬಳಿಕ ವಾಶ್ ಮಾಡಿ. ಈ ರೀತಿ ಮಾಡುವುದರಿಂದ ಮೊಡವೆಗಳಿಂದ ಮುಕ್ತಿ ಪಡೆಯಬಹುದು.

ಸೂಚನೆ

ಪ್ರಿಯ ಓದುಗರೇ, ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ದಯವಿಟ್ಟು ಅದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಿ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ. 

VIEW ALL

Read Next Story