ಬ್ಯೂಟಿಫುಲ್ ತ್ವಚೆ ನಿಮ್ಮದಾಗಿಸಲು ನಿಂಬೆ ರಸವನ್ನು ಈ ರೀತಿ ಬಳಸಿ
ಮೊಟ್ಟೆಯ ಬಿಳಿ ಭಾಗದೊಂದಿಗೆ ಕೆಲವು ಹನಿ ನಿಂಬೆಹಣ್ಣನ್ನು ಬೆರೆಸಿ ಮುಖಕ್ಕೆ ಹಚ್ಚಿ ಒಣಗಲು ಬಿಡಿ, ನಂತರ ಆ ಮಾಸ್ಕ್ ಅನ್ನು ಸಿಪ್ಪೆಯಂತೆ ಮುಖದಿಂದ ತೆಗೆದು ತಣ್ಣೀರಿನಿಂದ ಮುಖ ತೊಳೆದರೆ ಮುಖ ಕಾಂತಿಯುತವಾಗುತ್ತದೆ.
ನಿಂಬೆಯನ್ನು ನೀರಿನಲ್ಲಿ ಬೆರೆಸಿ ಹತ್ತಿ ಉಂಡೆಯ ಸಹಾಯದಿಂದ ಅದನ್ನು ಮುಖದ ಮೇಲೆ ಹಚ್ಚಿ. 15 ನಿಮಿಷಗಳ ಬಳಿಕ ಫೇಸ್ ವಾಶ್ ಮಾಡಿ. ಇದರಿಂದ ಎಣ್ಣೆಯುಕ್ತ ಚರ್ಮದಿಂದ ಪರಿಹಾರವನ್ನು ಪಡೆಯಬಹುದು.
ನಿಂಬೆ ರಸದಲ್ಲಿ ಸ್ವಲ್ಪ ನೀರನ್ನು ಬೆರೆಸಿ ಮುಖಕ್ಕೆ ಹಚ್ಚಿ ಬೆಚ್ಚಗಿನ ನೀರಿನಿಂದ ಮುಖ ತೊಳೆಯಿರಿ. ಇದರಿಂದ ಮೊಡವೆ ಮತ್ತು ಬ್ಲ್ಯಾಕ್ ಹೆಡ್ಸ್ ನಂತಹ ಸಮಸ್ಯೆಗಳಿಂದ ಮುಕ್ತಿ ದೊರೆಯುತ್ತದೆ.
ಅರ್ಧ ಕಪ್ ಕ್ಯಾರೆಟ್ ರಸದಲ್ಲಿ ಅರ್ಧ ಚಮಚ ಜೇನುತುಪ್ಪ ಮತ್ತು ಕಾಲು ಚಮಚ ನಿಂಬೆ ರಸವನ್ನು ಬೆರೆಸಿ ಮುಖಕ್ಕೆ ಹಚ್ಚಿ. ಅರ್ಧಗಂಟೆ ನಂತರ ಮುಖ ತೊಳೆಯಿರಿ. ಈ ರೀತಿ ಮಾಡುವುದರಿಂದ ಚರ್ಮದ ಮೇಲಿನ ಕಲೆಗಳಿಂದ ಪರಿಹಾರ ಪಡೆಯಬಹುದು.
ನಿಂಬೆ ಮತ್ತು ಕಿತ್ತಳೆ ಸಿಪ್ಪೆಗಳನ್ನು ಬಿಸಿಲಿನಲ್ಲಿ ಒಣಗಿಸಿ ಸಾಧ್ಯವಾದಷ್ಟು ನುಣ್ಣಗೆ ರುಬ್ಬಿಕೊಳ್ಳಿ. ಇದನ್ನು ನಾಲ್ಕು ಚಮಚ ಹಾಲಿನಲ್ಲಿ ಈ ಮಿಶ್ರಣವನ್ನು ಬೆರೆಸಿ ಪೇಸ್ಟ್ ತಯಾರಿಸಿ ಮುಖಕ್ಕೆ ಲೇಪಿಸಿ. 15 ನಿಮಿಷಗಳ ನಂತರ ಮುಖ ತೊಳೆಯುವುದರಿಂದ ಕಾಂತಿಯುತ ಚರ್ಮವನ್ನು ನಿಮ್ಮದಾಗಿಸಬಹುದು.
ನಿಂಬೆ ರಸವನ್ನು ನೇರವಾಗಿ ಮೊಣಕೈ, ಮಂಡಿ, ಮೊಣಕಾಲಿನ ಭಾಗಕ್ಕೆ ಹಚ್ಚುವುದರಿಂದ ಇದು ಚರ್ಮವನ್ನು ಮೃದುಗೊಳಿಸುತ್ತದೆ.
ನಿಂಬೆ ರಸವನ್ನು ರೋಸ್ ವಾಟರ್ ಜೊತೆಗೆ ಮಿಕ್ಸ್ ಮಾಡಿ ಬಳಸುವುದರಿಂದ ಇದು ತ್ವಚೆಯನ್ನು ಮಾಯಿಶ್ಚರೈಸ್ ಮಾಡುವುದರ ಜೊತೆಗೆ ತ್ವಚೆಯನ್ನು ಸುಂದರಗೊಳಿಸುತ್ತದೆ. ಸೂಚನೆ: ಪ್ರಿಯ ಓದುಗರೇ, ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ದಯವಿಟ್ಟು ಅದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಿ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.