ವಾಸ್ತು ಶಾಸ್ತ್ರದ ಪ್ರಕಾರ ಮನಿ ಪ್ಲಾಂಟ್ ಅನ್ನು ಮನೆಯಲ್ಲಿ ನೆಟ್ಟರೆ ಅದೃಷ್ಟ ನಿಮ್ಮದಾಗುತ್ತೆ ಎಂದು ಹೇಳಲಾಗುತ್ತದೆ.
ಆದರೆ, ಮನಿ ಪ್ಲಾಂಟ್‌ನ ಹೊರತಾಗಿ ಈ ಸಸ್ಯವನ್ನು ನಿಮ್ಮ ಮನೆಯಲ್ಲಿ ಇಡುವುದರಿಂದ. ಅದೃಷ್ಟ ಎಚ್ಚಾಗಲಿದೆ.
ಈ ಗಿಡವನ್ನು ನಿಮ್ಮ ಮನೆಯಲ್ಲಿ ಇಡುವುದರಿಂದ ಇದು, ಮನಿ ಪ್ಲಾಂಟ್‌ಗಿಂತ ಹೆಚ್ಚು ಪರಿಣಾಮಕಾರಿಯಾಗಿ ಕೆಲಸ ಮಾಡುತ್ತದೆ.
ಕ್ರಾಸ್ಸುಲಾ ಸಸ್ಯವನ್ನು ಮಂಗಳಕರವೆಂದು ಪರಿಗಣಿಸಲಾಗಿದೆ, ಈ ಗಿಡವನ್ನು ಮನೆಯಲ್ಲಿ ಇಡುವುದರಿಂದ ಮನೆಯಲ್ಲಿ ಆರ್ಥಿಕ ಸಮಸ್ಯೆ ಇರುವುದಿಲ್ಲ.
ಜ್ಯೋತಿಷ್ಯಶಾಸ್ತ್ರದ ಪ್ರಕಾರ ಈ ಸಸ್ಯವು ಚಂದ್ರ ಮತ್ತು ಶುಕ್ರನೊಂದಿಗೆ ಸಂಬಂಧ ಹೊಂದಿದೆ. ಈ ಸಸ್ಯವನ್ನು ಪೂರ್ವ, ಉತ್ತರ ಅಥವಾ ಈಶಾನ್ಯ ದಿಕ್ಕಿನಲ್ಲಿ ಇಡಬೇಕು.
ವಾಸ್ತು ಶಾಸ್ತ್ರದ ಪ್ರಕಾರ, ಈ ಸಸ್ಯವು ನಕಾರಾತ್ಮಕ ಶಕ್ತಿಯನ್ನು ತೆಗೆದುಹಾಕುತ್ತದೆ. ಇದನ್ನು ಆರ್ಥಿಕ ಸ್ಥಿರತೆಯ ಸಂಕೇತವೆಂದು ಪರಿಗಣಿಸಲಾಗಿದೆ.
ಈ ಸಸ್ಯವು ಮನೆಯಲ್ಲಿ ಮಾನಸಿಕ ಶಾಂತಿ ಮತ್ತು ಸಮೃದ್ಧಿಯನ್ನು ಉತ್ತೇಜಿಸುತ್ತದೆ.
ಜ್ಯೋತಿಷ್ಯಶಾಸ್ತ್ರದ ಪ್ರಕಾರ, ಶುಕ್ರ ಸಂಪತ್ತು, ವೈಭವ ಮತ್ತು ಸಂತೋಷಕ್ಕೆ ಕಾರಣವಾದ ಗ್ರಹವಾಗಿದೆ.
ಈ ಗಿಡವನ್ನು ಮನೆಯಲ್ಲಿಡುವುದರಿಂದ ಶುಕ್ರನ ಪರಿಣಾಮ ನಿಮ್ಮ ಮೇಲೆ ಬೀರಿ ಅದೃಷ್ಟ ಹೆಚ್ಚಾಗುತ್ತದೆ.
ವಾಸ್ತು ಶಾಸ್ತ್ರದ ಪ್ರಕಾರ ಈ ಗಿಡ ಸಂಪತ್ತನ್ನು ಆಕರ್ಷಿಸುತ್ತದೆ. ಆದ್ದರಿಂದ ಈ ಸಸ್ಯವನ್ನು ಮುಖ್ಯ ಬಾಗಿಲಿನ ಬಲಭಾಗದಲ್ಲಿ ಅಥವಾ ಈಶಾನ್ಯ ದಿಕ್ಕಿನಲ್ಲಿ ಇಡಿ.