ಉದ್ದನೆಯ ಕಪ್ಪು ಕೂದಲು ಹೆಣ್ಣು ಮಕ್ಕಳ ಅಂದವನ್ನು ಹೆಚ್ಚಿಸುತ್ತದೆ.
ಚಳಿಗಾಲದಲ್ಲಿ ಕೂದಲಿನ ಸಮಸ್ಯೆ ಹೆಚ್ಚಾಗಿ ಕಾಣಿಸಿಕೊಳ್ಳುತ್ತದೆ.
ದಟ್ಟ ಕಪ್ಪು ಕೂದಲಿಗೆ ನೆಲ್ಲಿ ಕಾಯಿಯನ್ನು ಬಳಸಬಹುದು. ಇದು ನೈಸರ್ಗಿಕವಾಗಿ ಕೂದಲನ್ನು ಕಪ್ಪಾಗಿಸುತ್ತದೆ.
ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಆಮ್ಲಾ ಜ್ಯೂಸ್ ಸೇವಿಸಬಹುದು. ಇದು ಕೂದಲ ಬೆಳವಣಿಗೆಗೆ ಸಹಾಯಕ.
ಬೆಳಿಗ್ಗೆ 2 ಆಮ್ಲಾವನ್ನು ಬೇಯಿಸಿ ಸೇವಿಸಬಹುದು. ಹೀಗೆ ಮಾಡುವುದರಿಂದ ನಿಮ್ಮ ತ್ವಚೆ ಮತ್ತು ಕೂದಲು ಎರಡೂ ಆರೋಗ್ಯಕರವಾಗಿರುತ್ತದೆ. ಪ್ರತಿದಿನ ಸೇವಿಸುವುದರಿಂದ ಕೂದಲು ಬೇಗ ಬೆಳೆಯುತ್ತದೆ.
ತೆಂಗಿನೆಣ್ಣೆ ಬಿಸಿ ಮಾಡಿ ಅದಕ್ಕೆ 2 ಚಮಚ ಆಮ್ಲಾ ಪುಡಿಯನ್ನು ಸೇರಿಸಿ. ತಣ್ಣಗಾದ ಬಳಿಕ ಕೂದಲಿಗೆ ಹಚ್ಚಿ. ಹೀಗೆ ಮಾಡುತಾ ಬಂದರೆ ಬಿಳಿ ಕೂದಲು ಕಪ್ಪಾಗುವುದು ಮಾತ್ರವಲ್ಲ ಹೊಳಪು ಕೂಡಾ ಹೆಚ್ಚಾಗುತ್ತದೆ.
2 ಚಮಚ ಗೋರಂಟಿ ಪುಡಿ, ಒಂದು ಚಮಚ ಆಮ್ಲಾ ಪುಡಿಯನ್ನು ಬಿಸಿ ತೆಂಗಿನ ಎಣ್ಣೆಯೊಂದಿಗೆ ಹಾಕಿ ಮಿಶ್ರಣ ಮಾಡಿಕೊಳ್ಳಿ. ಈ ಪ್ಯಾಕ್ ಅನ್ನು ಕೂದಲಿಗೆ ಹಚ್ಚಿದರೆ ಬಿಳಿ ಕೂದಲು ಕಪ್ಪಾಗುತ್ತದೆ.
ನೆಲ್ಲಿ ಕಾಯಿ ಪುಡಿಯನ್ನು ಕಾಫಿ ಡಿಕಾಕ್ಷನ್ ಜೊತೆ ಮಿಕ್ಸ್ ಮಾಡಿಕೊಳ್ಳಿ. ನಂತರ ಇದನ್ನು ಕೂದಲಿಗೆ ಹಚ್ಚಿ. ಹೀಗೆ ಮಾಡಿದರೆ ಬಿಳಿ ಕೂದಲು ಕ್ರಮೇಣ ಕಪ್ಪಾಗುವುದು.