Weight loss By Garlic: ಬೆಳ್ಳುಳ್ಳಿಯಿಂದಲೂ ತೂಕ ಇಳಿಕೆ ಸಾಧ್ಯ- ಇಲ್ಲಿದೆ ಸರಿಯಾದ ಮಾರ್ಗ

Weight loss By Garlic: ಬೆಳ್ಳುಳ್ಳಿ ಆರೋಗ್ಯಕ್ಕೆ ಹಲವು ರೀತಿಯಲ್ಲಿ ಪ್ರಯೋಜನಕಾರಿ ಆಗಿದೆ. ಆದರೆ, ಬೆಳ್ಳುಳ್ಳಿಯಿಂದಲೂ ತೂಕವನ್ನು ಸುಲಭವಾಗಿ ಕಡಿಮೆ ಮಾಡಬಹುದು ಎಂದು ನಿಮಗೆ ತಿಳಿದಿದೆಯೇ, ಅದು ಹೇಗೆ ಸಾಧ್ಯ ಎಂದು ತಿಳಿಯೋಣ...

Written by - Yashaswini V | Last Updated : Jun 22, 2022, 01:19 PM IST
  • ತೂಕವನ್ನು ಕಳೆದುಕೊಳ್ಳಲು ನೀವು ಬೆಳ್ಳುಳ್ಳಿಯನ್ನು ಹೇಗೆ ತಿನ್ನುತ್ತೀರಿ ಎಂಬುದು ಬಹಳ ಮುಖ್ಯ.
  • ದೇಹವನ್ನು ನಿರ್ವಿಷಗೊಳಿಸಲು ಕೂಡ ಬೆಳ್ಳುಳ್ಳಿ ತುಂಬಾ ಉಪಯುಕ್ತವಾಗಿದೆ.
  • ತೂಕ ಇಳಿಸಿಕೊಳ್ಳಲು ಮತ್ತು ಹೊಟ್ಟೆಯ ಕೊಬ್ಬನ್ನು ಸುಡಲು ಬೆಳ್ಳುಳ್ಳಿಯನ್ನು ಹೇಗೆ ಬಳಸುವುದು? ಎಂದು ತಿಳಿಯಿರಿ
Weight loss By Garlic: ಬೆಳ್ಳುಳ್ಳಿಯಿಂದಲೂ ತೂಕ ಇಳಿಕೆ ಸಾಧ್ಯ- ಇಲ್ಲಿದೆ ಸರಿಯಾದ ಮಾರ್ಗ  title=
Weight loss By Garlic

ಬೆಳ್ಳುಳ್ಳಿಯಿಂದ ತೂಕ ಇಳಿಕೆ:  ಭಾರತೀಯ ಅಡುಗೆ ಮನೆಗಳಲ್ಲಿ ಸಾಮಾನ್ಯವಾಗಿ ಬಳಸುವ ತರಕಾರಿಗಳಲ್ಲಿ ಬೆಳ್ಳುಳ್ಳಿಯೂ ಒಂದು.  ಆಹಾರದ ರುಚಿಯನ್ನು ಹೆಚ್ಚಿಸುವ ಬೆಳ್ಳುಳ್ಳಿ ಹಲವು ರೀತಿಯ ಆರೋಗ್ಯ ಸಮಸ್ಯೆಗಳಿಗೆ ರಾಮಬಾಣ ಇದ್ದಂತೆ ಎಂದು ಹೇಳಲಾಗುತ್ತದೆ. ಇದಲ್ಲದೆ, ಇದು ಪೌಷ್ಟಿಕಾಂಶದ ಶಕ್ತಿ ಕೇಂದ್ರ ಎಂದು ಹೇಳಲಾಗುತ್ತದೆ.  ಬೆಳ್ಳುಳ್ಳಿಯು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು, ಸರಾಗವಾದ ರಕ್ತದ ಹರಿವಿಗಾಗಿ ಮತ್ತು ರಕ್ತದೊತ್ತಡವನ್ನು ಕಡಿಮೆ ಮಾಡಲು, ಉರಿಯೂತವನ್ನು ತಗ್ಗಿಸಲು ಮತ್ತು ರಕ್ತನಾಳಗಳನ್ನು ಹಾನಿಯಾಗದಂತೆ ರಕ್ಷಿಸಲು ಸಹಾಯ ಮಾಡುತ್ತದೆ ಎಂದು ನಿಮಗೆ ತಿಳಿದಿರಬಹುದು. ಆದರೆ, ಬೆಳ್ಳುಳ್ಳಿಯಿಂದಲೂ  ತೂಕವನ್ನು ಕಡಿಮೆ ಮಾಡಬಹುದು ಎಂದು ನಿಮಗೆ ತಿಳಿದಿದೆಯೇ? ಹೌದು, ಆರೋಗ್ಯ ವರ್ಧಕವಾದ ಬೆಳ್ಳುಳ್ಳಿಯನ್ನು ನಿಮ್ಮ ದಿನ ನಿತ್ಯದ ಆಹಾರದಲ್ಲಿ ಸರಿಯಾದ ವಿಧಾನದಲ್ಲಿ ಬಳಸುವುದರಿಂದ ಹೊಟ್ಟೆಯ ಸುತ್ತಲಿನ ಕೊಬ್ಬನ್ನು ಕರಗಿಸುವ ಮೂಲಕ ತೂಕವನ್ನೂ ಕಡಿಮೆ ಮಾಡಿಕೊಳ್ಳಬಹುದು.  

ಅಧ್ಯಯನ ಒಂದರ ಪ್ರಕಾರ, ಬೆಳ್ಳುಳ್ಳಿ ತೂಕ ನಿಯಂತ್ರಣಕ್ಕೆ ತುಂಬಾ ಲಾಭದಾಯಕವಾಗಿದೆ ಎಂದು ಕಂಡು ಬಂದಿದೆ. ಇದರ ಪ್ರಯೋಜನಕಾರಿ ಸಂಯುಕ್ತಗಳು ದೇಹದ ಕೊಬ್ಬನ್ನು ಕಡಿಮೆ ಮಾಡಲು ಕಾರಣವಾಗಿದ್ದು, ನಿಮ್ಮನ್ನು ಫಿಟ್ ಆಗಿ ಕಾಣುವಂತೆ ಮಾಡುತ್ತದೆ. ಈ ಪ್ರಧಾನ ಘಟಕಾಂಶವು ವಿಟಮಿನ್ ಬಿ6 ಮತ್ತು ಸಿ, ಫೈಬರ್, ಮ್ಯಾಂಗನೀಸ್, ಕ್ಯಾಲ್ಸಿಯಂ ಮತ್ತು ಸೇರಿದಂತೆ ಆರೋಗ್ಯಕ್ಕೆ ಪ್ರಯೋಜನಕಾರಿ ಆದ ಹಲವು ಅಂಶಗಳನ್ನು ಒಳಗೊಂಡಿದೆ. ಇವೆಲ್ಲವೂ ತೂಕ ನಿರ್ವಹಣೆಯಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತವೆ. ಹಾಗಿದ್ದರೆ, ತೂಕ ನಷ್ಟದಲ್ಲಿ ಬೆಳ್ಳುಳ್ಳಿಯ ಪಾತ್ರವೇನು? ಮತ್ತು ಆರೋಗ್ಯಕರವಾಗಿ ತೂಕವನ್ನು ಕಳೆದುಕೊಳ್ಳಲು ಮತ್ತು ಹೊಟ್ಟೆಯ ಕೊಬ್ಬನ್ನು ಸುಡಲು ಅದನ್ನು ಹೇಗೆ ಬಳಸಬೇಕೆಂದು ತಿಳಿಯೋಣ.
 
ಇದನ್ನೂ ಓದಿ- Paneer Health Benefits: ಈ ಕಾರಣಗಳಿಗಾಗಿ ನಿಮ್ಮ ಡಯಟ್ನಲ್ಲಿ ಪನೀರ್ ಅನ್ನು ತಪ್ಪದೇ ಸೇರಿಸಿ

ತೂಕ ನಷ್ಟಕ್ಕೆ ಹಸಿ ಬೆಳ್ಳುಳ್ಳಿ:
ತೂಕವನ್ನು ಕಳೆದುಕೊಳ್ಳಲು ನೀವು ಬೆಳ್ಳುಳ್ಳಿಯನ್ನು ಹೇಗೆ ತಿನ್ನುತ್ತೀರಿ ಎಂಬುದು ಬಹಳ ಮುಖ್ಯ. ಗ್ರೇಟರ್ ನೋಯ್ಡಾದ GIMS ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರಸಿದ್ಧ ಆಹಾರ ತಜ್ಞರಾದ ಡಾ. ಆಯುಷಿ ಯಾದವ್ ಅವರ ಪ್ರಕಾರ, ಹಸಿ ಬೆಳ್ಳುಳ್ಳಿಯನ್ನು ಸೇವಿಸಿದರೆ ಅದು ತೂಕವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಆದರೆ ಒಮ್ಮೆ ಅಲ್ಲ ನಿಯಮಿತವಾಗಿ ಬೆಳ್ಳುಳ್ಳಿಯನ್ನು ಸೇವಿಸಬೇಕು, ಆಗ ಮಾತ್ರ ಇದರ ಪ್ರಯೋಜನ ತಿಳಿಯುತ್ತದೆ. 

ತೂಕ ಇಳಿಸಿಕೊಳ್ಳಲು ಮತ್ತು ಹೊಟ್ಟೆಯ ಕೊಬ್ಬನ್ನು ಸುಡಲು ಬೆಳ್ಳುಳ್ಳಿಯನ್ನು ಹೇಗೆ ಬಳಸುವುದು?
ನೀವು ಬೆಳಿಗ್ಗೆ ಹಸಿ ಬೆಳ್ಳುಳ್ಳಿಯನ್ನು ನೀರಿನೊಂದಿಗೆ ಸೇವಿಸಬಹುದು. ವಾಸ್ತವವಾಗಿ, ನೀವು ನಿತ್ಯ ಬೆಚ್ಚಗಿನ ನೀರಿನಲ್ಲಿ ನಿಂಬೆ ರಸ ಮತ್ತು ಬೆಳ್ಳುಳ್ಳಿ ಸೇರಿಸಿ ಕುಡಿಯಬಹುದು. ನಿಂಬೆ ರಸವು ತೂಕ ನಷ್ಟದ ಉತ್ತೇಜಕವಾಗಿದೆ ಮತ್ತು ಹೊಟ್ಟೆ ಉಬ್ಬುವಿಕೆಯ ಸಮಸ್ಯೆಯನ್ನು ನಿವಾರಿಸಲು ನಿಮಗೆ ಸಹಾಯ ಮಾಡುವ ಅತ್ಯುತ್ತಮ ಪದಾರ್ಥಗಳಲ್ಲಿ ಒಂದಾಗಿದೆ ಎಂದು ಹೇಳಲಾಗುತ್ತದೆ.

ಇದನ್ನೂ ಓದಿ- ಈ ನಾಲ್ಕು ವಸ್ತುಗಳಿಂದ ದೂರವಿದ್ದರೆ ಕೊಲೆಸ್ಟ್ರಾಲ್ ಸಮಸ್ಯೆ ಕಾಡುವುದೇ ಇಲ್ಲ

ಹಸಿ ಬೆಳ್ಳುಳ್ಳಿ ಸೇವನೆಯಿಂದ ಸಿಗುವ ಪ್ರಯೋಜನಗಳು:
* ಬೆಳ್ಳುಳ್ಳಿ ಶಕ್ತಿಯ ಮಟ್ಟವನ್ನು ಹೆಚ್ಚಿಸಲು ಕಾರಣವಾಗಿದೆ, ಅದು ಎಲ್ಲಾ ಕ್ಯಾಲೊರಿಗಳನ್ನು ಬರ್ನ್ ಮಾಡುತ್ತದೆ ಮತ್ತು ನಿಮ್ಮನ್ನು ಫಿಟ್ ಆಗಿ ಇರಿಸುತ್ತದೆ. ಇದು ನಿಮ್ಮ ಮೆಟಾಬಾಲಿಸಮ್ ಅನ್ನು ವರ್ಧಿಸುತ್ತದೆ, ಪರಿಣಾಮಕಾರಿಯಾಗಿ ತೂಕವನ್ನು ಕಳೆದುಕೊಳ್ಳಲು ಸಹಾಯ ಮಾಡುತ್ತದೆ.
* ಬೆಳ್ಳುಳ್ಳಿ ತೂಕವನ್ನು ಕಡಿಮೆ ಮಾಡುವುದರ ಜೊತೆಗೆ ದೈಹಿಕ ದೌರ್ಬಲ್ಯವನ್ನು ತೆಗೆದುಹಾಕಲು ಸಹ ಕೆಲಸ ಮಾಡುತ್ತದೆ. ದೇಹದಲ್ಲಿ ಸಂಗ್ರಹವಾಗಿರುವ ಕೆಟ್ಟ ಕೊಲೆಸ್ಟ್ರಾಲ್ ಅನ್ನು ತೆಗೆದುಹಾಕಲು ಇದು ತುಂಬಾ ಉಪಯುಕ್ತವಾಗಿದೆ. 
* ಹೃದಯವನ್ನು ಸದೃಢವಾಗಿಡಲು ಬಯಸುವವರು ತಮ್ಮ ಆಹಾರದಲ್ಲಿ ಬೆಳ್ಳುಳ್ಳಿಯನ್ನು ಸೇರಿಸಿಕೊಳ್ಳಬೇಕು. ಇದು ನಿಮ್ಮ ಹೃದಯವನ್ನು ಬಲಪಡಿಸುತ್ತದೆ.
* ಇದು ಉತ್ತಮ ನಿರ್ವಿಶೀಕರಣ ಏಜೆಂಟ್. ಇದು ನಿಮ್ಮ ಜೀರ್ಣಾಂಗ ವ್ಯವಸ್ಥೆಗೆ ಅಡ್ಡಿಯಾಗಬಹುದಾದ ಟಾಕ್ಸಿನ್‌ಗಳನ್ನು ಹೊರಹಾಕಲು ಸಹಾಯ ಮಾಡುತ್ತದೆ. ಆದ್ದರಿಂದ, ನಿಮ್ಮ ಆಹಾರದಲ್ಲಿ ಬೆಳ್ಳುಳ್ಳಿಯನ್ನು ಸೇರಿಸುವುದು ನಿಮ್ಮ ಜೀರ್ಣಾಂಗ ವ್ಯವಸ್ಥೆಯನ್ನು ನಿಯಂತ್ರಣದಲ್ಲಿಡಲು ಸಹಾಯ ಮಾಡುತ್ತದೆ.

ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಅದನ್ನು ಅಳವಡಿಸಿಕೊಳ್ಳುವ ಮೊದಲು, ಖಂಡಿತವಾಗಿಯೂ ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಿ. ZEE ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News