Waking up early benefits : ಮುಂಜಾನೆ ಬೇಗ ಏಳುವ ಅಭ್ಯಾಸವು ನಮ್ಮ ಪೂರ್ವಜರಿಂದ ಬಂದಿರುವ ಅದ್ಭುತವಾದ ಆರೋಗ್ಯ ರಹಸ್ಯ. ಮುಂಜಾನೆ ಬೇಗ ಏಳುವುದರಿಂದ ದೇಹವು ಹೆಚ್ಚು ಕ್ರಿಯಾಶೀಲ ಮತ್ತು ಆರೋಗ್ಯಕರವಾಗಿರುತ್ತದೆ ಎನ್ನುತ್ತಾರೆ ಆರೋಗ್ಯ ತಜ್ಞರು. ಆಯುರ್ವೇದ ತಜ್ಞರ ಪ್ರಕಾರ, ಪ್ರತಿದಿನ ಬೆಳಿಗ್ಗೆ ಐದು ಗಂಟೆಗೆ ಏಳುವುದರಿಂದ ದೇಹವು ಸೂಪರ್ ಫಿಟ್ ಮತ್ತು ಆರೋಗ್ಯಕರವಾಗಿರುತ್ತದೆ. 


COMMERCIAL BREAK
SCROLL TO CONTINUE READING

ದೇಹ ದುರಸ್ತಿ: ನಿದ್ರೆಯ ಸಮಯದಲ್ಲಿ ದೇಹವು ತನ್ನನ್ನು ತಾನೇ ರಿಪೇರಿ ಮಾಡಿಕೊಳ್ಳುತ್ತದೆ. ಬೆಳಿಗ್ಗೆ ಬೇಗನೆ ಎದ್ದೇಳುವುದು ಈ ದುರಸ್ತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸುತ್ತದೆ. ಇದರಿಂದ ದಿನವಿಡೀ ಚಟುವಟಿಕೆಯಿಂದ ಇರಲು ನಮಗೆ ಶಕ್ತಿ ಸಿಗುತ್ತದೆ. ಹಾಗಾಗಿ ಪ್ರತಿದಿನ ಬೆಳಗ್ಗೆ ಐದು ಗಂಟೆಗೆ ಏಳಲು ಪ್ರಯತ್ನಿಸಿ.. 


ಇದನ್ನೂ ಓದಿ:ಮೆಹಂದಿಯಲ್ಲಿ ಈ ಪದಾರ್ಥಗಳನ್ನು ಬೆರೆಸಿ ಹಚ್ಚಿಡಿದರೆ ನೈಸರ್ಗಿಕವಾಗಿ ಕಡು ಕಪ್ಪಾಗುತ್ತೆ ಬಿಳಿಕೂದಲು


ಮೆದುಳಿಗೆ ಆಮ್ಲಜನಕ: ಮುಂಜಾನೆ ಸುತ್ತಲಿನ ವಾತಾವರಣ ಶಾಂತವಾಗಿರುತ್ತದೆ. ಈ ಸಮಯದಲ್ಲಿ ಉಸಿರಾಟವು ಮೆದುಳಿಗೆ ಹೆಚ್ಚಿನ ಆಮ್ಲಜನಕವನ್ನು ಒದಗಿಸುತ್ತದೆ. ಇದರಿಂದ ನಮ್ಮ ಮೆದುಳು ಸಕ್ರಿಯವಾಗಿ ಕೆಲಸ ಮಾಡುತ್ತದೆ ಮತ್ತು ಜ್ಞಾಪಕ ಶಕ್ತಿ ಹೆಚ್ಚುತ್ತದೆ. 


ಉತ್ತಮ ಜೀರ್ಣಕ್ರಿಯೆ: ಬೆಳಗ್ಗೆ ಬೇಗ ಎದ್ದು ವಾಕಿಂಗ್ ಹೋಗುವುದರಿಂದ ಜೀರ್ಣಕ್ರಿಯೆ ಉತ್ತಮಗೊಳ್ಳುತ್ತದೆ. ಮಲಬದ್ಧತೆಯಂತಹ ಸಮಸ್ಯೆಗಳು ಕಡಿಮೆಯಾಗುತ್ತವೆ. ತೂಕದ ಸಮಸ್ಯೆಯಿಂದ ಬಳಲುತ್ತಿರುವವರು, ಬೆಳಿಗ್ಗೆ ಎದ್ದರೆ ಅನೇಕ ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದು... ದೇಹದಲ್ಲಿನ ಕೊಬ್ಬು ಸರಳವಾಗಿ ಕರಗುತ್ತದೆ. 


ಇದನ್ನೂ ಓದಿ:ಹಾವು ಕಚ್ಚಿದರೆ ತಕ್ಷಣ ಏನು ಮಾಡಬೇಕು? ಈ ಒಂದು ಕೆಲಸದಿಂದ ಪ್ರಾಣವನ್ನೇ ಉಳಿಸಬಹುದು


ಸ್ನಾಯು ಶಕ್ತಿ: ಮುಂಜಾನೆ ಸ್ವಲ್ಪ ವ್ಯಾಯಾಮ ಮಾಡಿದರೆ ಸ್ನಾಯುಗಳು ಬಲಗೊಳ್ಳುತ್ತವೆ. ದೇಹವು ಕ್ರಿಯಾಶೀಲವಾಗಿರುತ್ತದೆ. ಆರೋಗ್ಯಕರ ಸ್ನಾಯುಗಳನ್ನು ಸ್ವಾಧೀನಪಡಿಸಿಕೊಳ್ಳಬಹುದು. ಅಲ್ಲದೆ, ಬೆಳಗ್ಗೆ ಏಳುವುದರಿಂದ ಮನಸ್ಸು ಶಾಂತವಾಗುತ್ತದೆ, ಒತ್ತಡ ಕಡಿಮೆಯಾಗುತ್ತದೆ.. 


ರೋಗನಿರೋಧಕ ಶಕ್ತಿ: ಬೆಳಿಗ್ಗೆ ವ್ಯಾಯಾಮ ಮಾಡುವುದರಿಂದ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ಇದರಿಂದ ಅನಾರೋಗ್ಯದಿಂದ ನಮ್ಮನ್ನು ನಾವು ರಕ್ಷಿಸಿಕೊಳ್ಳಬಹುದು. ಮುಂಜಾನೆ ಬೇಗ ಏಳುವ ಅಭ್ಯಾಸ ರೂಪಿಸಲು ಸ್ವಲ್ಪ ಸಮಯ ತೆಗೆದುಕೊಳ್ಳಬಹುದು. ಆದರೆ ಕ್ರಮೇಣ ಈ ಅಭ್ಯಾಸವು ನಿಮ್ಮ ಜೀವನದ ಭಾಗವಾಗುತ್ತದೆ..


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.