147 ವಿದ್ಯಾರ್ಥಿಗಳಿದ್ದ ಕಟ್ಟಡವೊಂದರಲ್ಲಿ ಆಕಸ್ಮಿಕ ಅಗ್ನಿ ಅವಘಡ

Fire Accident: ಸುಮಾರು 147ವಿದ್ಯಾರ್ಥಿಗಳಿದ್ದ ಕಟ್ಟಡವೊಂದರಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಅಗ್ನಿ ಅವಘಡ ಸಂಭವಿಸಿದೆ ಎಂದು ವರದಿಯಾಗಿದೆ. 

Written by - Yashaswini V | Last Updated : Jun 16, 2025, 10:18 AM IST
  • ವಿದ್ಯಾರ್ಥಿಗಳು ತಂಗಿದ್ದ ಕಟ್ಟಡದಲ್ಲಿ ಶಾರ್ಟ್ ಸರ್ಕ್ಯೂಟ್
  • ಮಂಗಳೂರಿನ ಹೊರವಲಯದ ದೇರಳಕಟ್ಟೆ ಜಂಕ್ಷನ್‌ನಲ್ಲಿ ಅಗ್ನಿ ಅವಘಡ
147 ವಿದ್ಯಾರ್ಥಿಗಳಿದ್ದ ಕಟ್ಟಡವೊಂದರಲ್ಲಿ ಆಕಸ್ಮಿಕ ಅಗ್ನಿ ಅವಘಡ

Fire Accident News: 147 ವಿದ್ಯಾರ್ಥಿಗಳಿದ್ದ ಕಟ್ಟಡವೊಂದರಲ್ಲಿ ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿದ್ದು, ಅದೃಷ್ಟವಶಾತ್ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದು ಎಲ್ಲರನ್ನೂ ಬೇರೆ ಕಟ್ಟಡಕ್ಕೆ ಸ್ಥಳಾಂತರಿಸಿರುವ ಘಟನೆ ‌ಮಂಗಳೂರು‌ ಹೊರವಲಯದ ದೇರಳಕಟ್ಟೆ ಜಂಕ್ಷನ್‌ ನಲ್ಲಿ ಕಳೆದ ರಾತ್ರಿ (ಜೂನ್ 15) ವರದಿಯಾಗಿದೆ. 

ಭಾನುವಾರ (ಜೂನ್ 15) ರಾತ್ರಿ 8ಗಂಟೆ ಸುಮಾರಿಗೆ 147 ವಿದ್ಯಾರ್ಥಿಗಳಿದ್ದ ಕಟ್ಟಡದ ನೆಲಮಹಡಿಯಲ್ಲಿ ಸ್ವೀಚ್ ಬೋರ್ಡ್'ನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದ್ದು, ಇದನ್ನು ಗಮನಿಸಿ ತಕ್ಷಣವೇ ಕಾರ್ಯಪ್ರವೃತ್ತರಾದ ಸ್ಥಳೀಯರು ಕಟ್ಟಡದ ಎದುರಿಗೇ ಇದ್ದ ಪೆಟ್ರೋಲ್ ಪಂಪ್ ನಿಂದ ಬೆಂಕಿ ನಂದಿಸಲು ಉಪಯೋಗಿಸುವ ಸಾಮಗ್ರಿಗಳನ್ನು ಪಡೆದು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. 

ಇನ್ನೂ ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೂ ಸಹ ಯಾವುದೇ ರೀತಿ ಸಮಸ್ಯೆ ಆಗದಂತೆ ಎಲ್ಲಾ 147ವಿದ್ಯಾರ್ಥಿಗಳನ್ನು ಕಟ್ಟಡದಿಂದ ಸುರಕ್ಷಿತವಾಗಿ ಹೊರತರುವಲ್ಲಿಯೂ ಸ್ಥಳೀಯರು ಯಶಸ್ವಿಯಾಗಿದ್ದು, ಎಲ್ಲರೂ ಸುರಕ್ಷಿತವಾಗಿದ್ದಾರೆ ಎಂದು ವರದಿಯಾಗಿದೆ. 

ಇದನ್ನೂ ಓದಿ- ಭಾರೀ ಮಳೆ: ರಾಜ್ಯದ 4 ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ, ದೇವಿಮನೆ ಘಟ್ಟದಲ್ಲಿ ಗುಡ್ಡಕುಸಿತ ವಾಹನ ಸಂಚಾರ ಬಂದ್ 

ಬೆಂಕಿ ಅನಾಹುತದ ಬಗ್ಗೆ ಮಾಹಿತಿ ತಿಳಿದು ಅಗ್ನಿ ಶಾಮಕ ದಳ ತಡವಾಗಿ ಘಟನಾ ಸ್ಥಳಕ್ಕೆ ಆಗಮಿಸಿದ್ದು, ಅವರು ಬರುವಷ್ಟರಲ್ಲೇ ಸ್ಥಳೀಯರು ಭಾಗಶ: ಬೆಂಕಿಯನ್ನು ನಂದಿಸುವಲ್ಲಿ ಸಫಲರಾಗಿದ್ದರು. ಬಳಿಕ ವಿದ್ಯಾರ್ಥಿನಿಯರೆಲ್ಲರನ್ನೂ ಶಿಕ್ಷಣ ಸಂಸ್ಥೆ ಬೇರೆ ವಿದ್ಯಾರ್ಥಿನಿ ನಿಲಯಗಳಿಗೆ ಸ್ಥಳಾಂತರಿಸಿದೆ ಎಂದು ತಿಳಿದುಬಂದಿದೆ. 

ವೇಣುಗೋಪಾಲ್ ಶೆಟ್ಟಿ ಎಂಬವರಿಗೆ ಸೇರಿದ ಐದು ಅಂತಸ್ತಿನ ವೆಂಕಟ್ ರೆಸಿಡೆನ್ಸಿ ಕಟ್ಟಡದ ನೆಲ ಮಹಡಿಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಈ ಅವಘಡ ಸಂಭವಿಸಿದೆ ಎಂದು ಹೇಳಲಾಗುತ್ತಿದ್ದು, ಕೆಳಗಿನ ವಿದ್ಯುತ್ ಬೋರ್ಡ್ಗಳೆಲ್ಲವೂ ಸಂಪೂರ್ಣವಾಗಿ ಸುಟ್ಟು ಹೋಗಿರುವುದಾಗಿ ವರದಿಯಾಗಿದೆ. 

ಇದನ್ನೂ ಓದಿ- ಕೆಂಪುಕೋಟೆ ಮೇಲೆ ತ್ರಿವರ್ಣದ್ವಜ ಹಾರಿಸಿದ HDD ಈಶ್ವರನ ವರ ಪುತ್ರ : ನಿಖಿಲ್‌ ಕುಮಾರಸ್ವಾಮಿ

ಈ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಘಟನಾ ಸ್ಥಳದಲ್ಲಿ ಅಗ್ನಿ ಶಾಮಕ ದಳ ಹಾಗೂ ಕೊಣಾಜೆ ಪೊಲೀಸರು ರಕ್ಷಣಾ ಕಾರ್ಯಾಚರಣೆ ನಡೆಸಿದ್ದರು  ಎಂದು ತಹಶೀಲ್ದಾರ್ ಮಾಹಿತಿ ನೀಡಿದ್ದಾರೆ.

ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ. 

Trending News