Mangaluru News: ಮಂಗಳೂರಿನ ಅಡ್ಯಾರ್ ನಲ್ಲಿರುವ ಲ್ಯಾಂಡ್ಸ್ ಫ್ಲೆವರ್ ಸಂಸ್ಥೆಯ ಬೊಂಡ ಫ್ಯಾಕ್ಟರಿ ಎಂಬ ಎಳನೀರು ಮತ್ತು ನ್ಯಾಚುರಲ್ ಐಸ್ ಕ್ರೀಮ್ ಮಾರಾಟ ಮಾಡುವ ಸಂಸ್ಥೆಯಿಂದ ಲೀಟರ್ ಗಟ್ಟಲೆ ಎಳನೀರನ್ನು ಖರೀದಿಸಿ ಸೇವಿಸಿದ್ದ ಸ್ಥಳೀಯ ನಿವಾಸಿಗಳು  ವಾಂತಿ ಮತ್ತು ಭೇದಿಯಿಂದ ಬಳಲುತ್ತಿರುವ ಘಟನೆ ಅಡ್ಯಾರ್, ಕಣ್ಣೂರು, ಗ್ರಾಮಚಾವಡಿ, ಮಲಾರ್, ಕೊಣಾಜೆ ಮತ್ತು ತುಂಬೆ ಪರಿಸರದಲ್ಲಿ ಬೆಳಕಿಗೆ ಬಂದಿದೆ.


COMMERCIAL BREAK
SCROLL TO CONTINUE READING

ಲ್ಯಾಂಡ್ಸ್ ಫ್ಲೆವರ್ ಸಂಸ್ಥೆಯ ಬೊಂಡ ಫ್ಯಾಕ್ಟರಿಯಲ್ಲಿ (Lands Flavor Bonda Factory) ಉತ್ಪಾದನೆಯಾಗುವ ಎಳನೀರನ್ನು ಸಾರ್ವಜನಿಕರಿಗೆ ಲೀಟರ್ ಗೆ 40 ರೂಪಾಯಿಯಂತೆ  ಮಾರಾಟ ಮಾಡಲಾಗುತ್ತದೆ. ಈ ಎಳನೀರನ್ನು ಕುಡಿದ ಅಡ್ಯಾರು ಮತ್ತು ಕಣ್ಣೂರ್ ಸುತ್ತಮುತ್ತಲಿನ ಸಾರ್ವಜನಿಕರು ಮಂಗಳವಾರದಿಂದ (ಏಪ್ರಿಲ್ 09)  ವಾಂತಿ-ಭೇದಿಯಿಂದ ಬಳಲಿದ್ದು ಕೆಲವರು ಸ್ಥಳೀಯ ವೈದ್ಯರನ್ನು ಸಂಪರ್ಕಿಸಿ ಔಷಧಿ ಪಡೆದು ಗುಣಮುಖರಾಗಿದ್ದರೆ, ಇನ್ನೂ ಕೆಲವರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದುಬಂದಿದೆ. 


ಇದನ್ನೂ ಓದಿ- ಕಾಂಗ್ರೆಸ್‌ಗೆ ಮತ ನೀಡಿದರೆ ದೇಶಕ್ಕೆ ಸುರಕ್ಷತೆ ಸಿಗಲ್ಲ : ಆರ್. ಅಶೋಕ 


ಲಭ್ಯವಿರುವ ಮಾಹಿತಿಯ ಪ್ರಕಾರ, ಲ್ಯಾಂಡ್ಸ್ ಫ್ಲೆವರ್ ಸಂಸ್ಥೆಯ ಬೊಂಡ ಫ್ಯಾಕ್ಟರಿಯ ಎಳನೀರು (Coconut Water) ಸೇವಿಸಿದ್ದವರಲ್ಲಿ ಮೂರು ಮಂದಿ ಪಳ್ನೀರ್ ನಲ್ಲಿರುವ ಹೈಲ್ಯಾಂಡ್ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸದ್ಯ ಅವರ ಆರೋಗ್ಯ ಸ್ಥಿರವಾಗಿದೆ. ಉಳಿದ 12 ಮಂದಿ ತುಂಬೆಯಲ್ಲಿರುವ ಖಾಸಗಿ ಆಸ್ಪತ್ರೆ ಸೇರಿದಂತೆ ವಿವಿಧ ಸ್ಥಳೀಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. 


ಇದನ್ನೂ ಓದಿ- ದಿಂಗಾಲೇಶ್ವರ ಸ್ವಾಮೀಜಿ ರಾಜಕೀಯ ಪ್ರವೇಶದ ಬಗ್ಗೆ ಸಚಿವ ಸಂತೋಷ್ ಲಾಡ್ ಹೇಳಿದ್ದೇನು?


ಈ ಬಗ್ಗೆ ಜಿಲ್ಲಾ ಆರೋಗ್ಯ ಅಧಿಕಾರಿ ಹಾಗೂ ಜಿಲ್ಲಾ ಆಹಾರ ಸುರಕ್ಷತಾ ಅಧಿಕಾರಿ ಇವರಿಗೆ ವಾಟ್ಸಪ್ ಮುಖಾಂತರ ದೂರು ಸಲ್ಲಿಕೆಯಾಗಿದ್ದು ತಕ್ಷಣವೇ ಇವರಿಬ್ಬರೂ ಅಡ್ಯಾರ್ ನಲ್ಲಿರುವ ಬೊಂಡ ಫ್ಯಾಕ್ಟರಿಗೆ ಭೇಟಿ ನೀಡಿ ಎಳನೀರಿನ ಸ್ಯಾಂಪಲನ್ನು ಸಂಗ್ರಹಿಸಿ ಪ್ರಯೋಗಾಲಯಕ್ಕೆ ವಿಶ್ಲೇಷಣೆಗೆ ಕಳುಹಿಸಲು ಕ್ರಮ ಕೈಗೊಳ್ಳಲಾಗಿದೆ. ಜೊತೆಗೆ ಇಡೀ ಫ್ಯಾಕ್ಟರಿಯನ್ನು ತಾತ್ಕಾಲಿಕವಾಗಿ ಬಂದ್ ಮಾಡಿ ಶುಚಿಗೊಳಿಸಲಾಗಿದೆ ಎಂದು ವರದಿಯಾಗಿದೆ. 


ಇನ್ನು ಜಿಲ್ಲಾ ಆರೋಗ್ಯ ಅಧಿಕಾರಿ, ಆಹಾರ ಸುರಕ್ಷತಾ ಅಂಕಿತ ಅಧಿಕಾರಿ, ತಾಲೂಕು ಆರೋಗ್ಯ ಅಧಿಕಾರಿ ಇವರ ತಂಡ  ಫಳ್ನೀರ್ ನಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲೆಯಾಗಿರುವ ಸಂತ್ರಸ್ತರನ್ನು ಭೇಟಿ ಮಾಡಿ ಅವರ ಆರೋಗ್ಯದ ಬಗ್ಗೆ ಮಾಹಿತಿ ಪಡೆದಿದ್ದಾರೆ ಎಂದು ಆರೋಗ್ಯ ಇಲಾಖೆ ತನ್ನ ಪ್ರಕಟನೆಯಲ್ಲಿ ತಿಳಿಸಿದೆ. 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.