)
ದಕ್ಷಿಣ ಕನ್ನಡ: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಯೂಟೂಬರ್ ಸಮೀರ್ಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಲಾಗಿದೆ. ಧರ್ಮಸ್ಥಳ ವಿರುದ್ಧ ಎಐ ವಿಡಿಯೋ ಸೃಷ್ಟಿಸಿ ಅಪಪ್ರಚಾರ ಮಾಡಿದ ಆರೋಪದ ಅಡಿ ಸಮೀರ್ ಎಂಡಿ ಅವರಿಗೆ ಬಂಧನದ ಭೀತಿ ಎದುರಾಗಿತ್ತು.
ಧರ್ಮಸ್ಥಳದಿಂದ ಬೆಂಗಳೂರಿಗೆ ಬಂದ ಪೊಲೀಸರು ಸಮೀರ್ ಮನೆ ಹುಡುಕಾಟ ಆರಂಭಿಸಿದ್ದರು. ಇದೀಗ ಸಮೀರ್ ಗೆ ಕೋರ್ಟ್ ಬಿಗ್ ರಿಲೀಫ್ ನೀಡಿದೆ. ನಿರೀಕ್ಷಣಾ ಜಾಮೀನಿಗೆ ಸಮೀರ್ ಅರ್ಜಿ ಸಲ್ಲಿಸಿದ್ದರು. ಯೂಟ್ಯೂಬರ್ ಸಮೀರ್ ಎಂ.ಡಿ ಅವರಿಗೆ ನಿರೀಕ್ಷಾ ಜಾಮೀನು ಮಂಜೂರುಗೊಳಿಸಿ ಮಂಗಳೂರು ನ್ಯಾಯಾಲಯ ಆದೇಶ ನೀಡಿದೆ.
ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಜು.12ಕ್ಕೆ ಸುಮೋಟೋ ಪ್ರಕರಣ ದಾಖಲಿಸಿದ್ದರು. ಸಮೀರ್ ಎಂ.ಡಿ. ಮಂಗಳೂರು ನ್ಯಾಯಾಲಯಕ್ಕೆ ಆ.19ರಂದು ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ್ದ ನ್ಯಾಯಾಲಯ ಗುರುವಾರ ಆದೇಶ ಕಾಯ್ದಿರಿಸಿತ್ತು. ಇಂದು ಮತ್ತೆ ವಿಚಾರಣೆ ನಡೆಸಿದ ನ್ಯಾಯಾಲಯದಿಂದ ಜಾಮೀನು ಮಂಜೂರು ಮಾಡಲಾಗಿದೆ.
ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.