ಹುಲಿ ಬಂತು ಹುಲಿ- ಎಐ ಹಾವಳಿಗೆ ಜನರು, ಅರಣ್ಯ ಇಲಾಖೆ ಹೈರಾಣು

AI Tigers: ಗಡಿಜಿಲ್ಲೆ ಚಾಮರಾಜನಗರದ ಬಂಡೀಪುರ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳಲ್ಲಿ ಹುಲಿ ದಾಳಿ ಆತಂಕದ ನಡುವೆ ಇದೀಗ ಎಐ ನಿರ್ಮಿತ ಸುಳ್ಳು ಹುಲಿ ವಿಡಿಯೋಗಳು, ಫೋಟೋಗಳನ್ನು ಹರಿಬಿಟ್ಟು ಸಾರ್ವಜನಿಕರಲ್ಲಿ ಭೀತಿ ಸೃಷ್ಟಿಸಲಾಗುತ್ತಿದೆ. ಈ ಬಗ್ಗೆ ಕಿಡಿಗೇಡಿಗಳಿಗೆ ಅರಣ್ಯ ಇಲಾಖೆ ಖಡಕ್ ವಾರ್ನಿಂಗ್ ನೀಡಿದೆ. 

Written by - Yashaswini V | Last Updated : Nov 13, 2025, 01:07 PM IST
  • ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ವ್ಯಾಪ್ತಿಗೆ ಒಳಪಡುವ ಗ್ರಾಮಗಳಲ್ಲಿ ಹುಲಿ ಕಾಟ
  • ನೂತನ ತಂತ್ರಜ್ಞಾನದ ಮೂಲಕ ಫೋಟೋ ಹರಿಬಿಟ್ಟು ಸುಳ್ಳು ಸಂದೇಶ ರವಾನೆ
  • ಸುಳ್ಳು ಮಾಹಿತಿ ಹರಡುತ್ತಿರುವವರಿಗೆ ಅರಣ್ಯ ಇಲಾಖೆಯಿಂದ ಖಡಕ್ ವಾರ್ನಿಂಗ್
ಹುಲಿ ಬಂತು ಹುಲಿ- ಎಐ ಹಾವಳಿಗೆ ಜನರು, ಅರಣ್ಯ ಇಲಾಖೆ ಹೈರಾಣು

AI Tigers: ಎಐ ತಂತ್ರಜ್ಞಾನ ಬಳಸಿ ಹುಲಿಯ ಇರುವಿಕೆ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಮಾಹಿತಿಗಳನ್ನು ಹರಿಬಿಡುತ್ತಿರುವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶವು ಪ್ರಕಟಣೆ ಹೊರಡಿಸಿದೆ.

Add Zee News as a Preferred Source

ಬಂಡೀಪುರ ಹುಲಿ ಸಂರಕ್ಷಿತ ಪುದೇಶದ ವಿವಿಧ ವಲಯಗಳ ವ್ಯಾಪ್ತಿಗೆ ಒಳಪಡುವ ಗ್ರಾಮಗಳ ಸರಹದ್ದಿನಲ್ಲಿ ಹುಲಿಗಳು ಕಾಣಿಸಿಕೊಂಡು ಉಪಟಳ ನೀಡುತ್ತಿದ್ದ ಹಿನ್ನಲೆಯಲ್ಲಿ, ಈಗಾಗಲೇ ಸತತ ಕಾರ್ಯಚರಣೆ ಮೂಲಕ ಹೆಡಿಯಾಲ ಉಪ-ವಿಭಾಗದ ವ್ಯಾಪ್ತಿಯಲ್ಲಿ 05 ಹುಲಿಗಳನ್ನು ಸುರಕ್ಷಿತವಾಗಿ ಸೆರೆಹಿಡಿದು ಪುನರ್ವಸತಿ ಕೇಂದ್ರಗಳಿಗೆ ಸ್ಥಳಾಂತರಿಸಲಾಗಿದೆ. ಇದಾದ ಬಳಿಕ ಬರುತ್ತಿರುವ ಮಾಹಿತಿಗಳನ್ನು ಆಧರಿಸಿ ಸ್ಥಳಕ್ಕೆ ತೆರಳುವ ಸಿಬ್ಬಂದಿಗಳ ತಂಡ ಪರಿಶೀಲನೆ ನಡೆಸಿದರೂ ಯಾವುದೇ ಸಣ್ಣ ಕುರುಹುಗಳು ಪತ್ತೆಯಾಗಿರುವುದಿಲ್ಲ. ಹೀಗಿದ್ದರೂ ಎಐ ತಂತ್ರಜ್ಞಾನ ಬಳಸಿ ಹುಲಿಯ ಇರುವಿಕೆ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಮಾಹಿತಿಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡಲಾಗುತ್ತಿದೆ ಎಂದು ಅರಣ್ಯ ಇಲಾಖೆ ಕಿಡಿಕಾರಿದೆ.

ಇದನ್ನೂ ಓದಿ- ಶ್ರೀರಂಗಪಟ್ಟಣದ ಪ್ರಸಿದ್ಧ ಪ್ರವಾಸಿ ತಾಣದ ಬಳಿ ಹುಲಿ, ಚಿರತೆ ಪ್ರತ್ಯಕ್ಷ: AI ಹಾವಳಿಗೆ ಜನರು ಹೈರಾಣು

ಎಐ ಹುಲಿ ಫೋಟೋ ಹಂಚಿಕೆ ಆಗುತ್ತಿರುವುದರಿಂದ ಭಯಬೀತರಾಗುವ  ರೈತರು  ಹೊಲ ಗದ್ದೆ, ಮನೆಗಳಿಗೆ ತೆರಳಲು ಹಿಂಜರಿಯುತ್ತಿದ್ದಾರೆ. ಅಲ್ಲದೇ ನಾವು ಸುಳ್ಳು ಮಾಹಿತಿಗಳಿಂದ ಸಮರ್ಪಕವಾಗಿ ಕೆಲಸ ನಿರ್ವಹಿಸಲು ತೊಂದರೆಯಾಗುತ್ತಿದೆ. ಅಲ್ಲದೇ ನೈಜ ಸಮಸ್ಯೆ ಇರುವ ಕಡೆ ಗಮನ ಹರಿಸಲು ಸಾಧ್ಯವಾಗದ ಪರಿಸ್ಥಿತಿ ಉಂಟಾಗಿದೆ. ಆದ್ದರಿಂದ ಸುಳ್ಳು ಸಂದೇಶ ಕಳುಹಿಸುವ ಮತ್ತು ಹಂಚಿಕೊಳ್ಳುವರ ವಿರುದ್ಧ ಕಾನೂನು ರೀತ್ಯಾ ಕಠಿಣ ಕಾನೂನು ರೀತ್ಯಾ ಕ್ರಮ ಜರುಗಿಸಲು ಕ್ರಮವಹಿಸಲಾಗಿರುತ್ತದೆ ಎಂದು ಅರಣ್ಯ ಇಲಾಖೆ ಎಚ್ಚರಿಸಿದೆ‌.

ಸುಳ್ಳು ಸಂದೇಶ ಮತ್ತು ಇದಕ್ಕೆ ಪುಷ್ಟಿಕರಣ ನೀಡುವ ಸುಳ್ಳು ಮಾಹಿತಿ ಹಂಚಿಕೊಳ್ಳಬಾರದು ಎಂದು ಇಲಾಖೆಯು ಎಚ್ಚರಿಕೆ ಸಂದೇಶ ನೀಡಿದೆ.

About the Author

Yashaswini V

Yashaswini V

ಯಶಸ್ವಿನಿ ವಿ. Zee ಕನ್ನಡ ಡಿಜಿಟಲ್ ಮಾಧ್ಯಮದ ಮೊದಲ ಪತ್ರಕರ್ತೆ. 2017ರಿಂದ Zee ಕನ್ನಡ ಡಿಜಿಟಲ್ ಮಾಧ್ಯಮದಲ್ಲಿ ರಾಜಕೀಯ, ಎಂಟರ್ಟೈನ್ಮೆಂಟ್, ಬ್ಯುಸಿನೆಸ್, ಲೈಫ್ ಸ್ಟೈಲ್, ವರ್ಲ್ಡ್, ಸೈನ್ಸ್ ಅಂಡ್ ಟೆಕ್ನಾಲಜಿ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಅನುಭವ ಹೊಂದಿದ್ದಾರೆ. ದೆಹಲಿ ಮತ್ತು ಬೆಂಗಳೂರಿನಲ್ಲಿ ಕೆಲಸ ಮಾಡಿರುವ ಇವರು ಸದ್ಯ ಅಸಿಸ್ಟೆಂಟ್ ನ್ಯೂಸ್ ಎಡಿಟರ್ ಜವಾಬ್ದಾರಿಯನ್ನು ನಿರ್ವಹಿಸುತ್ತಿದ್ದಾರೆ.

...Read More

Trending News