)
Road Accident Today: ಇಂದು (ಅ.30) ಬೆಳ್ಳಂಬೆಳಗ್ಗೆ ಸಕ್ಕರೆ ನಾಡು ಮಂಡ್ಯ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು ಟಿಪ್ಪರ್ ಲಾರಿ ಕಾರಿನ ನಡುವಿನ ಡಿಕ್ಕಿಯ ರಭಸಕ್ಕೆ ಕಾರಿನಲ್ಲಿದ್ದ ವ್ಯಕ್ತಿಯೋರ್ವ ಸಜೀವವಾಗಿ ದಹನವಾಗಿರುವ ಘಟನೆ ನಡೆದಿದೆ.
ಮಂಡ್ಯದ ಶ್ರೀರಂಗಪಟ್ಟಣ ತಾಲೂಕಿನ ಪಾಲಹಳ್ಳಿ ಬಳಿಯ ಕೆಆರ್ಎಸ್ ರಸ್ತೆಯಲ್ಲಿ ಟಿಪ್ಪರ್ ಲಾರಿ ಹಾಗು ಇನ್ನೋವ ಕಾರು ಮುಖಾಮುಖಿ ಡಿಕ್ಕಿ ಹೊಡೆದಿದ್ದು, ಈ ವೇಳೆ ಏಕಾಏಕಿ ಕಾರಿಗೆ ಬೆಂಕಿ ಹೊತ್ತಿದ್ದರಿಂದ ಕಾರಿನಲ್ಲಿದ್ದ ವ್ಯಕ್ತಿ ಸಜೀವವಾಗಿ ದಹನವಾಗಿರುವ ಬಗ್ಗೆ ವರದಿಯಾಗಿದೆ.
ಈ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟ ದುರ್ದೈವಿಯನ್ನು ಹುಣಸೂರು ಮೂಲದ ವಕೀಲ ಚಂದ್ರಶೇಖರ್(30) ಎಂದು ಗುರುತಿಸಲಾಗಿದೆ.
ಶ್ರೀರಂಗಪಟ್ಟಣ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದ್ದು ರಸ್ತೆ ಅಪಘಾತ ನಡೆದ ಸ್ಥಳಕ್ಕೆ ಟೌನ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.