)
Mandya Accident: ಬೈಕ್'ಗೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದ ಪರಿಹಾರ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿರುವ ಧಾರುಣ ಘಟನೆ ಮಂಡ್ಯದ ಕೆ.ಆರ್.ಪೇಟೆ ತಾಲೂಕಿನ ಅಂಚೇ ಬೀರನಹಳ್ಳಿ ಗ್ರಾಮದ ಬಳಿ ಬುಧವಾರ ತಡರಾತ್ರಿ ನಡೆದಿದೆ.
ಈ ಭೀಕರ ರಸ್ತೆ ಅಪಘಾತದಲ್ಲಿ ಮೃತ ದುರ್ದೈವಿಗಳನ್ನು ಕೆ.ಆರ್.ಪೇಟೆ ತಾಲೂಕಿನ ಕಡೆಹೆಮ್ಮಿಗೆ ಗ್ರಾಮದ ಉಮೇಶ್ (24), ಅರಸೀಕೆರೆ ತಾಲ್ಲೂಕಿನ ಗೆಣಸಿ ಗ್ರಾಮ ದಿನೇಶ್ (24) ಎಂದು ಗುರುತಿಸಲಾಗಿದೆ.
ಉಮೇಶ್, ದಿನೇಶ್ ಇಬ್ಬರೂ ಸ್ನೇಹಿತರಾಗಿದ್ದು ಇವರಿಬ್ಬರೂ ಚನ್ನರಾಯಪಟ್ಟಣಕ್ಕೆ ತೆರಳುತ್ತಿದ್ದ ವೇಳೆ ಮೈಸೂರು ಕಡೆಗೆ ಬರುತ್ತಿದ್ದ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.
ಅಪಘಾತದಲ್ಲಿ ಬೈಕ್'ಗೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ ನಲ್ಲಿದ್ದ ಇಬ್ಬರೂ ಸ್ಥಳದಲ್ಲೇ ಧಾರುಣ ಸಾವನ್ನಪ್ಪಿದ್ದಾರೆ. ಕೆಎಸ್ಆರ್ಟಿಸಿ ಬಸ್ ಚಾಲಕನ ಅಜಾಗೃಕತೆಯಿಂದ ಅಪಘಾತ ಸಂಭವಿಸಿದೆ ಎನ್ನಲಾಗುತ್ತಿದೆ.
ರಸ್ತೆ ಅಪಘಾತದಲ್ಲಿ ಧಾರುಣ ಸಾವನ್ನಪ್ಪಿದ ಇಬ್ಬರ ಮೃತ ದೇಹಗಳನ್ನ ಮರಣೋತ್ತರ ಪರೀಕ್ಷೆಗಾಗಿ ತಾಲೂಕು ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಶವಗಾರದ ಮುಂದೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಈ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಕಿಕ್ಕೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.