Virat Kohli Trolled: ವಿರಾಟ್ ಕೊಹ್ಲಿ ತಮ್ಮ ಬ್ಯಾಟಿಂಗ್ ಮೂಲಕ ಇಡೀ ವಿಶ್ವದಲ್ಲಿ ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸಿದ್ದಾರೆ. ವಿರಾಟ್ ಕೊಹ್ಲಿ ಐಪಿಎಲ್ 2023 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಆಡುತ್ತಿದ್ದಾರೆ. ಈ ಋತುವಿನಲ್ಲಿ ಅವರ ಫಾರ್ಮ್ ಅತ್ಯುತ್ತಮವಾಗಿದೆ. 8 ಪಂದ್ಯಗಳಲ್ಲಿ 5 ಅರ್ಧಶತಕಗಳನ್ನು ಸಿಡಿಸಿದ್ದಾರೆ. ಈ ನಡುವೆ ವಿರಾಟ್ ಕೊಹ್ಲಿ ಬಹಳ ಕೆಟ್ಟದಾಗಿ ಟ್ರೋಲ್ ಆಗುತ್ತಿದ್ದಾರೆ. 


COMMERCIAL BREAK
SCROLL TO CONTINUE READING

ವಿರಾಟ್ ಕೊಹ್ಲಿ ಟ್ರೋಲ್ ಆಗುತ್ತಿರುವ ಹಿಂದಿನ ಕಾರಣ : 
ವಾಸ್ತವವಾಗಿ, ವಿರಾಟ್ ಕೊಹ್ಲಿ ಸೋಮವಾರ ಪತ್ನಿ ಅನುಷ್ಕಾ ಅವರ ಕೆಲವು ಫೋಟೋ ಗಳನ್ನು Instagram ನಲ್ಲಿ ಹಂಚಿಕೊಂಡಿದ್ದಾರೆ. ಪ್ರತಿಯೊಂದು ಸಂದರ್ಭದಲ್ಲೂ ನಾನು ನಿನ್ನನ್ನು ಪ್ರೀತಿಸಿದ್ದೇನೆ ಎಂದು ಶೀರ್ಷಿಕೆಯಲ್ಲಿ ಬರೆದುಕೊಂಡಿದ್ದಾರೆ. ಅನುಷ್ಕಾ  ಜನ್ಮದಿನದ ಅಂಗವಾಗಿ ಕೊಹ್ಲಿ ಈ ಫೋಟೋವನ್ನು ಶೇರ್ ಮಾಡಿದ್ದಾರೆ. ಆದರೆ, ವಿರಾಟ್ ಶೇರ್ ಮಾಡಿರುವ ಎರಡನೇ ಫೋಟೋ  ಅಭಿಮಾನುಗಳ ಆಕ್ರೋಶಕ್ಕೆ ಕಾರಣವಾಗಿದೆ.  


ಇದನ್ನೂ ಓದಿ : Badminton: 58 ವರ್ಷಗಳ ಬಳಿಕ ಭಾರತಕ್ಕೆ ಬಂತು ಚಿನ್ನ! ಇತಿಹಾಸ ನಿರ್ಮಿಸಿದ ಈ ಕ್ರೀಡಾ ಜೋಡಿಗೆ ಪ್ರಧಾನಿ ಶ್ಲಾಘನೆ


ವಿರಾಟ್  ಮೇಲೆ ಸಿಟ್ಟಾದ ಅಭಿಮಾನಿಗಳು : 
ಜನ್ಮ ದಿನಕ್ಕೆ ಶುಭಾಶಯ ಹೇಳುವುದು ಸರಿ. ಆದರೆ ಶುಭಾಶಯ ಕೋರುವ ನೆಪದಲ್ಲಿ ಅಂಗಾಂಗ ಪ್ರದರ್ಶನದ ಫೋಟೋ ಶೇರ್ ಮಾಡುವ ಅವಶ್ಯಕತೆ ಏನು ಎನ್ನುವುದು ಅಭಿಮಾನಿಗಳ ಆಕ್ರೋಶ. ನೀವು ಭಾರತವನ್ನು ಪ್ರತಿನಿಧಿಸುತ್ತೀರಿ. ಸಾಮಾಜಿಕ ಮಾಧ್ಯಮದಲ್ಲಿ ಯಾವ ಫೋಟೋ ಶೇರ್ ಮಾಡಬೇಕು ಯಾವುದನ್ನು ಶೇರ್ ಮಾಡಬಾರದು ಎನ್ನುವುದು ನಿಮಗೆ ತಿಳಿದಿರಬೇಕು ಎಂದು ಅಭಿಮಾನಿಯೊಬ್ಬರು ಖಾರವಾಗಿಯೇ ಪ್ರತಿಕ್ರಿಯಿಸಿದ್ದಾರೆ. ಅಲ್ಲದೆ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿರುವ ಫೋಟೋವನ್ನು ತಕ್ಷಣ ಡಿಲೀಟ್ ಮಾಡುವಂತೆ ಒತ್ತಾಯಿಸಿದ್ದಾರೆ. 


 


Badminton: 58 ವರ್ಷಗಳ ಬಳಿಕ ಭಾರತಕ್ಕೆ ಬಂತು ಚಿನ್ನ! ಇತಿಹಾಸ ನಿರ್ಮಿಸಿದ ಈ ಕ್ರೀಡಾ ಜೋಡಿಗೆ ಪ್ರಧಾನಿ ಶ್ಲಾಘನೆ


ಐಪಿಎಲ್‌ನಲ್ಲಿ ವಿರಾಟ್ ಅಮೋಘ  ಪ್ರದರ್ಶನ : 
ಪ್ರಸಕ್ತ ಐಪಿಎಲ್ ಸೀಸನ್ ನಲ್ಲಿ ವಿರಾಟ್ ಕೊಹ್ಲಿ ಅಬ್ಬರಿಸುತ್ತಿದ್ದಾರೆ. ಅವರು ಇಲ್ಲಿಯವರೆಗೆ 5 ಅರ್ಧ ಶತಕಗಳನ್ನು ಬಾರಿಸಿದ್ದಾರೆ. 8 ಪಂದ್ಯಗಳಲ್ಲಿ 47.57 ಸರಾಸರಿಯಲ್ಲಿ 333 ರನ್ ಗಳಿಸಿದ್ದಾರೆ. ಈ ಮುಂಬೈ ಇಂಡಿಯನ್ಸ್ ವಿರುದ್ಧ ಕೊಹ್ಲಿ ಬಾರಿಸಿರುವ 82 ರನ್ ಅವರ ಗರಿಷ್ಠ ಸ್ಕೋರ್ ಆಗಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಈ ಋತುವಿನಲ್ಲಿ ಇದುವರೆಗೆ 8 ಪಂದ್ಯಗಳನ್ನು ಆಡಿದ್ದು, ತಂಡವು 4 ಗೆಲುವು ಮತ್ತು 4 ಸೋಲು ಕಂಡಿದೆ.


ಮುಂದಿನ ಪಂದ್ಯ ಲಕ್ನೋ ವಿರುದ್ದ : 
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮುಂದಿನ ಮುಖಾಮುಖಿ  ಕೆಎಲ್ ರಾಹುಲ್ ನಾಯಕತ್ವದ ಲಕ್ನೋ ಸೂಪರ್ ಜೈಂಟ್ಸ್ ವಿರುದ್ದ. ಈ ಪಂದ್ಯ ಇಂದು ಲಕ್ನೋದ ಅಟಲ್ ಬಿಹಾರಿ ವಾಜಪೇಯಿ ಏಕನಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದೆ. ಆದರೆ, ಈ ಪಂದ್ಯದ ಮೇಲೂ ಮಳೆಯ ಛಾಯೆ ಆವರಿಸಿದೆ. ಹವಾಮಾನ ಇಲಾಖೆಯ ವರದಿ ಪ್ರಕಾರ ರಾತ್ರಿ 10 ಗಂಟೆಯವರೆಗೆ ಮಳೆಯಾಗುವ ಸಾಧ್ಯತೆ ಇದೆ. ಒಂದು ವೇಳೆ ಈ ವರದಿ ನಿಜವಾಗಿದ್ದಲ್ಲಿ, ಅಭಿಮಾನಿಗಳಿಗೆ ನಿರಾಸೆಯಾಗಲಿದೆ. 


ಇದನ್ನೂ ಓದಿ :  WTC Final: ಕ್ರಿಕೆಟ್ ಪ್ರಿಯರಿಗೆ ಗುಡ್ ನ್ಯೂಸ್: WTC ಫೈನಲ್’ಗೆ ಮತ್ತೆ ಎಂಟ್ರಿ ಕೊಡಲಿದ್ದಾರೆ MS Dhoni!


Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK