Career Updates: ಯುವ ಪರಿವರ್ತಕರ ತರಬೇತಿಗಾಗಿ ಅರ್ಹರಿಂದ ಅರ್ಜಿ ಆಹ್ವಾನ

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಜನ ಆರೋಗ್ಯ ಸಂಸ್ಥೆ, ಎಪಿಡೀಮಿಯಾಲಜಿ ವಿಭಾಗ, ನಿಮಾನ್ಸ್, ಬೆಂಗಳೂರು ಇವರಿಂದ ಅನುಷ್ಠಾನಗೊಳ್ಳುತ್ತಿರುವ ಯುವ ಸ್ಪಂದನ ಕಾರ್ಯಕ್ರಮದಡಿಯಲ್ಲಿ 04 ಜನ ಯುವ ಪರಿವರ್ತಕರ ತರಬೇತಿಗಾಗಿ ಅರ್ಹ ಯುವಕ/ ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.

Written by - Zee Kannada News Desk | Last Updated : Nov 3, 2022, 03:30 PM IST
  • ಈ ಯೋಜನೆಯಡಿ ಅಭ್ಯರ್ಥಿಗಳು ಯಾವುದೇ ಪದವಿ ಹಾಗೂ ಮೇಲ್ಪಟ್ಟ ವಿದ್ಯಾರ್ಹತೆ ಹೊಂದಿರುವ ಯುವಕ/ ಯುವತಿಯರು ಅರ್ಜಿ ಸಲ್ಲಿಸಬೇಕು.
  • 21 ರಿಂದ 35 ವರ್ಷದೊಳಗಿನವರಾಗಿರಬೇಕು.
  • ಸ್ಥಳೀಯ ಭಾಷೆ ಕನ್ನಡವನ್ನು ಸ್ಪಷ್ಟವಾಗಿ ಮಾತನಾಡುವುದು ಅವಶ್ಯಕ.
Career Updates: ಯುವ ಪರಿವರ್ತಕರ ತರಬೇತಿಗಾಗಿ ಅರ್ಹರಿಂದ ಅರ್ಜಿ ಆಹ್ವಾನ title=
ಸಾಂದರ್ಭಿಕ ಚಿತ್ರ

ಕೊಪ್ಪಳ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಜನ ಆರೋಗ್ಯ ಸಂಸ್ಥೆ, ಎಪಿಡೀಮಿಯಾಲಜಿ ವಿಭಾಗ, ನಿಮಾನ್ಸ್, ಬೆಂಗಳೂರು ಇವರಿಂದ ಅನುಷ್ಠಾನಗೊಳ್ಳುತ್ತಿರುವ ಯುವ ಸ್ಪಂದನ ಕಾರ್ಯಕ್ರಮದಡಿಯಲ್ಲಿ 04 ಜನ ಯುವ ಪರಿವರ್ತಕರ ತರಬೇತಿಗಾಗಿ ಅರ್ಹ ಯುವಕ/ ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.

ಇದನ್ನೂ ಓದಿ : Vastu Tips : ಮನೆಯಲ್ಲಿ ಜೇಡ ಬಲೆ ಕಟ್ಟಿದೆಯಾ? ಹಾಗಿದ್ರೆ, ಎಚ್ಚರ..!

ಈ ಯೋಜನೆಯಡಿ ಅಭ್ಯರ್ಥಿಗಳು ಯಾವುದೇ ಪದವಿ ಹಾಗೂ ಮೇಲ್ಪಟ್ಟ ವಿದ್ಯಾರ್ಹತೆ ಹೊಂದಿರುವ ಯುವಕ/ ಯುವತಿಯರು ಅರ್ಜಿ ಸಲ್ಲಿಸಬೇಕು. 21 ರಿಂದ 35 ವರ್ಷದೊಳಗಿನವರಾಗಿರಬೇಕು. ಸ್ಥಳೀಯ ಭಾಷೆ ಕನ್ನಡವನ್ನು ಸ್ಪಷ್ಟವಾಗಿ ಮಾತನಾಡುವುದು ಅವಶ್ಯಕ. ಸಮುದಾಯದಲ್ಲಿ ಕೆಲಸ ಮಾಡಲು ಆಸಕ್ತಿ ಹಾಗೂ ಹುಮ್ಮಸನ್ನು ಹೊಂದಿರಬೇಕು. ಸಮುದಾಯದಲ್ಲಿ ಯುವಜನರಿಗೆ ತರಬೇತಿಯಂತಹ ಕಾರ್ಯಕ್ರಮಗಳನ್ನು ನಡೆಸುವುದು ಅವಶ್ಯವಿರುತ್ತದೆ. ಕೊಪ್ಪಳ ಜಿಲ್ಲೆಯಲ್ಲಿ ವಾಸಿಸುತ್ತಿರುವ ಖಾಯಂ ನಿವಾಸಿಗಳು ಮಾತ್ರ ಈ ತರಬೇತಿಗೆ ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ.

ಇದನ್ನೂ ಓದಿ : Horoscope Today: ನಿಮ್ಮ ರಾಶಿಗಳ ಯಶಸ್ಸಿನ ಪ್ರಮಾಣ ಗೊತ್ತೇ?

ಅರ್ಹ ಅಭ್ಯರ್ಥಿಗಳು ತಮ್ಮ ಭಾವಚಿತ್ರ ಸ್ವ ವಿವರದೊಂದಿಗೆ ಖುದ್ದಾಗಿ ನವೆಂಬರ್ 07ರ ಸಂಜೆ 5 ಗಂಟೆಯೊಳಗಾಗಿ ಸಹಾಯಕ ನಿರ್ದೇಶಕರ ಕಛೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕೊಪ್ಪಳ ಕಛೇರಿಗೆ ಸಲ್ಲಿಸಬೇಕು. ಮತ್ತು ನ. 09 ರಂದು ಬೆಳಿಗ್ಗೆ 10 ಗಂಟೆಗೆ ನೇರ ಸಂದರ್ಶನಕ್ಕೆ ಜಿಲ್ಲಾ ಕ್ರೀಡಾಂಗಣದ ಕಚೇರಿ ಸಭಾಂಗಣದಲ್ಲಿ ಹಾಜರಾಗಬೇಕು.ಹೆಚ್ಚಿನ ವಿವರಗಳಿಗೆ ಜಿಲ್ಲಾ ಸಂಯೋಜಕರಾದ ಭೀಮೇಶ ಕುರಿ ಮೊ. 9845858494 ಮತ್ತು ಬೆಂಗಳೂರು ನಿಮ್ಹಾನ್ಸ್ ಕ್ಷೇತ್ರ ಸಂಪರ್ಕ ಅಧಿಕಾರಿ ನಾಗರತ್ನ 8088488688 ಗೆ ಅಥವಾ ಅಥವಾ ಯುವ ಸ್ಪಂದನ ಕಚೇರಿಯ ಇ-ಮೇಲ್ yuvaspandana.Koppal@gmail.com ಮೂಲಕ ಸಂಪರ್ಕಿಸಬಹುದು ಎಂದು ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

 

 

Trending News