T20 World Cup 2022: ಗ್ರೂಪ್ ಅಂತಿಮ ಪಂದ್ಯದಲ್ಲಿ ಜಿಂಬಾಬ್ವೆ ಮಣಿಸಿದ ಟೀಂ ಇಂಡಿಯಾಗೆ ಭರ್ಜರಿ ಜಯ

India Win Against Zimbabwe: ಟೀಂ ಇಂಡಿಯಾದ ಆಟಗಾರರು ಭರ್ಜರಿ ಪ್ರದರ್ಶನ ನೀಡಿದ್ದು ತಂಡದ ಗೆಲುವಿಗೆ ಕಾರಣವಾಗಿದೆ. ಟೀಂ ಇಂಡಿಯಾ ಈಗಾಗಲೇ ಸೆಮಿ ಫೈನಲ್ ಪ್ರವೇಶಿಸಿದೆ.

Written by - Bhavishya Shetty | Last Updated : Nov 6, 2022, 04:49 PM IST
    • ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ
    • ಜಿಂಬಾಬ್ವೆ ವಿರುದ್ಧ ಭಾರತ ಭರ್ಜರಿ ಜಯ ಸಾಧಿಸಿದೆ
    • ಟೀಂ ಇಂಡಿಯಾ ಈಗಾಗಲೇ ಸೆಮಿ ಫೈನಲ್ ಪ್ರವೇಶಿಸಿದೆ
T20 World Cup 2022: ಗ್ರೂಪ್ ಅಂತಿಮ ಪಂದ್ಯದಲ್ಲಿ ಜಿಂಬಾಬ್ವೆ ಮಣಿಸಿದ ಟೀಂ ಇಂಡಿಯಾಗೆ ಭರ್ಜರಿ ಜಯ title=
team india

India Win Against Zimbabwe: ಇಂದು ಐಕಾನಿಕ್ ಎಂಸಿಜಿಯಲ್ಲಿ ನಡೆದ ಕೊನೆಯ ಸೂಪರ್ 12 ಘರ್ಷಣೆಯಲ್ಲಿ ಜಿಂಬಾಬ್ವೆ ವಿರುದ್ಧ ಭಾರತ ಭರ್ಜರಿ ಜಯ ಸಾಧಿಸಿದೆ. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ 5 ವಿಕೆಟ್ ನಷ್ಟಕ್ಕೆ 186 ರನ್ ಕಲೆ ಹಾಕಿತ್ತು. ಆದರೆ ಈ ಗುರಿ ಬೆನ್ನತ್ತಿದ ಜಿಂಬಾಬ್ವೆ ಹೀನಾಯ ಸೋಲು ಕಂಡಿದೆ.

ಟೀಂ ಇಂಡಿಯಾದ ಆಟಗಾರರು ಭರ್ಜರಿ ಪ್ರದರ್ಶನ ನೀಡಿದ್ದು ತಂಡದ ಗೆಲುವಿಗೆ ಕಾರಣವಾಗಿದೆ. ಟೀಂ ಇಂಡಿಯಾ ಈಗಾಗಲೇ ಸೆಮಿ ಫೈನಲ್ ಪ್ರವೇಶಿಸಿದೆ.

ಇದನ್ನೂ ಓದಿ: ಟಿ-20 ಕ್ಯಾಲೆಂಡರ್ ವರ್ಷದಲ್ಲಿ ಸಾವಿರ ರನ್ ಪೂರೈಸಿದ Suryakumar Yadav: ದಾಖಲೆಗೆ ಎಲ್ಲಿದೆ ಮಿತಿ!

ಇನ್ನು ಈ ಪಂದ್ಯಾವಳಿಯಲ್ಲಿ ಸ್ಟಾರ್ ಇಂಡಿಯಾ ಬ್ಯಾಟರ್ ಸೂರ್ಯಕುಮಾರ್ ಮತ್ತೊಂದು ಸೂಪರ್ ಇನ್ನಿಂಗ್ಸ್ ಆಡಿದ್ದಾರೆ. ಕೇವಲ 25 ಎಸೆತಗಳಲ್ಲಿ ಕ್ರಮವಾಗಿ 6 ​​ಬೌಂಡರಿ ಮತ್ತು 4 ಸಿಕ್ಸರ್‌ಗಳನ್ನು ಒಳಗೊಂಡ 61 ರನ್ ಬಾರಿಸಿದ್ದರು. ಈ ಮೂಲಕ ಕ್ಯಾಲೆಂಡರ್ ವರ್ಷದಲ್ಲಿ 1000 T20I ರನ್‌ಗಳನ್ನು ಪೂರ್ಣಗೊಳಿಸಿದ ಮೊದಲ ಭಾರತೀಯ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಇನ್ನೊಂದೆಡೆ ಕೆಎಲ್ ರಾಹುಲ್ ಕೂಡ ಅರ್ಧ ಶತಕ ಬಾರಿಸಿ ಟೀಂ ಇಂಡಿಯಾ ಉತ್ತಮ ಕೊಡುಗೆ ನೀಡಿದರು.

ಇದನ್ನೂ ಓದಿ: T20 World Cup 2022ರಲ್ಲಿ ವಿರಾಟ್ ಕಾರುಬಾರು: ಅಬ್ಬಬ್ಬಾ.. ಕೊಹ್ಲಿ ಹೆಸರಲ್ಲಿದೆ ಇಷ್ಟೊಂದು ದಾಖಲೆಗಳು!

ಆದರೆ ಜಿಂಬಾಬ್ವೆ ತಂಡದ ಪರವಾಗಿ ಅತೀ ಕಳಪೆ ಪ್ರದರ್ಶನ ಕಂಡುಬಂದಿದ್ದು, ಸೆಮಿ ಫೈನಲ್ ಕನಸು ನುಚ್ಚು ನೂರಾಗಿದೆ.

 

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News