ಮಂಗಳೂರು ಏರ್ಪೋರ್ಟ್ ನಲ್ಲಿ ಅಕ್ರಮ ಚಿನ್ನ ಸಾಗಾಟ, ನಾಲ್ವರ ಬಂಧನ

ಇಲ್ಲಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿದ್ದ ನಾಲ್ಕು ಮಂದಿಯನ್ನು ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ.

Written by - Zee Kannada News Desk | Last Updated : Nov 11, 2022, 07:15 PM IST
  • ಬಂಧಿತರಿಂದ 24 ಕ್ಯಾರೆಟ್ ಶುದ್ಧತೆಯ 3.895 ಕೆ.ಜಿ.ಯ ಒಟ್ಟು 2.01 ಕೋ.ರೂ. ಮೌಲ್ಯದ ಚಿನ್ನಾಭರಣವನ್ನು ವಶಕ್ಕೆ ಪಡೆದಿದ್ದಾರೆ.
  • ನಾಲ್ವರನ್ನು ವಶಕ್ಕೆ ಪಡೆದುಕೊಂಡ ಕಸ್ಟಮ್ಸ್ ಅಧಿಕಾರಿಗಳು ಆರೋಪಿಗಳನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಿದ್ದಾರೆ.
ಮಂಗಳೂರು ಏರ್ಪೋರ್ಟ್ ನಲ್ಲಿ ಅಕ್ರಮ ಚಿನ್ನ ಸಾಗಾಟ, ನಾಲ್ವರ ಬಂಧನ  title=

ಮಂಗಳೂರು: ಇಲ್ಲಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿದ್ದ ನಾಲ್ಕು ಮಂದಿಯನ್ನು ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ.

ಬಂಧಿತ ನಾಲ್ಕು ಮಂದಿ ಪ್ರಯಾಣಿಕರಿಂದ 24 ಕ್ಯಾರೆಟ್ ಶುದ್ಧತೆಯ 3.895 ಕೆ.ಜಿ.ಯ ಒಟ್ಟು 2.01 ಕೋ.ರೂ. ಮೌಲ್ಯದ ಚಿನ್ನಾಭರಣವನ್ನು ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ: ಶಾಸಕ ಎನ್. ಮಹೇಶ್ ಕಮಾಲ್...7 ಅನರ್ಹರಲ್ಲಿ 6 ಮಂದಿ ಜಯಭೇರಿ!!

ಬಂಧಿತರು ನ.10ರಂದು ದುಬೈನಿಂದ ಬಂದ ವಿಮಾನದಲ್ಲಿ ಮಂಗಳೂರು ಅಂತರ್ ರಾಷ್ಟ್ರೀಯ ವಿಮಾನಕ್ಕೆ ಬಂದಿಳಿದ ನಾಲ್ಕು ಮಂದಿ ಪ್ರಯಾಣಿಕರು ಟ್ರಾಲಿ ಬ್ಯಾಗ್ ಗಳಲ್ಲಿ ರೋಡಿಯಂ ಲೇಪಿತ ಚಿನ್ನದ ಪಟ್ಟಿಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ವೇಳೆ ವಶಕ್ಕೆ ಪಡೆದು ಕೊಂಡಿದ್ದಾರೆ.

ಇದನ್ನೂ ಓದಿ : PM Modi in Bengaluru: ಪ್ರಧಾನಿ ಮೋದಿಗೆ ವ್ಯಂಗ್ಯವಾಗಿ ಪ್ರಶ್ನಿಸಿ ಸ್ವಾಗತ ಕೋರಿದ ಸಿದ್ದರಾಮಯ್ಯ

ನಾಲ್ವರನ್ನು ವಶಕ್ಕೆ ಪಡೆದುಕೊಂಡ ಕಸ್ಟಮ್ಸ್ ಅಧಿಕಾರಿಗಳು ಆರೋಪಿಗಳನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News