ಬೆಂಗಳೂರು : ಕಾಡುಮಲ್ಲೇಶ್ವರ ಮಲ್ಲಿಕಾರ್ಜುನ ಸ್ವಾಮಿಯ ಸನ್ನಿಧಾನದಲ್ಲಿ ಕಾರ್ತಿಕ ಮಾಸದ ಮೂರನೇಯ ಶನಿವಾರದ ಮೂರು ದಿನಗಳ ಕಾಲ ನಡೆಯಲಿರುವ ಕಡಲೆಕಾಯಿ ಪರಿಷೆಗೆ ಕಾಡುಮಲ್ಲೇಶ್ವರ ಗೆಳಯರ ಬಳಗದ ಅಧ್ಯಕ್ಷ ಬಿ.ಕೆ.ಶಿವರಾಂ ಚಾಲನೆ ನೀಡಿದರು. ಸಮಾಜ ಸೇವಕ ಅನೂಪ್ ಅಯ್ಯಂಗಾರ್ ಮತ್ತು ದೇವಸ್ಥಾನ ಆಡಳಿತ ಮಂಡಳಿ ಹಾಗೂ ಭಕ್ತರು ಪಾಲ್ಗೊಂಡಿದ್ದರು.
ಈ ಸಂದರ್ಭದಲ್ಲಿ ಮಾತನಾಡಿದ ಬಿ.ಕೆ.ಶಿವರಾಂ ಬೀದಿ ಬದಿಯ ವ್ಯಾಪಾರಿಗಳು ಮತ್ತು ಕರಕುಶಲ ವಸ್ತುಗಳು ಮಾರಾಟಗಾರರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಕೋಲಾರ, ಆಂದ್ರಪ್ರದೇಶದ ಹಿಂದೂಪುರ, ತಮಿಳುನಾಡಿನ ವಿವಿಧ ಜಿಲ್ಲೆಗಳಿಂದ ಕಡಲೆಕಾಯಿ ಬೇಳೆದ ರೈತರು ಇಲ್ಲಿ ಗ್ರಾಹಕರಿಗೆ ನೇರ ಮಾರಾಟ ವ್ಯವಸ್ಥೆ ಮಾಡಲಾಗಿದೆ ಎಂದರು.
ಇದನ್ನೂ ಓದಿ: ರ್‍ಯಾಶ್ ಡ್ರೈವಿಂಗ್ : ಪವನ್ ಕಲ್ಯಾಣ್ ಮೇಲೆ ಕೇಸ್ ದಾಖಲು
ಬಸವನಗುಡಿ ಕಡಲೆಕಾಯಿ ಪರಿಷೆ ಮಾದರಿ : ಪುರಾತನ ಇತಿಹಾಸವಿರುವ ಬಸವನಗುಡಿ ಕಡಲೆಕಾಯಿ ಪರಿಷೆ ಮಾದರಿಯಲ್ಲಿ ಮಲ್ಲೇಶ್ವರಂ ಕಡಲೆಕಾಯಿ ಪರಿಷೆ ಜರುಗುತ್ತಿದೆ. ಭಾರತೀಯ ಸಂಸ್ಕೃತಿ ಪ್ರತೀಕವಾದ ಹೊಂಗಲ್ ತಳಿಯ ಹಸುಗಳನ್ನು ದೇವಸ್ಥಾನಕ್ಕೆ ದಾನವಾಗಿ ನೀಡಲಾಗಿದೆ. ಮುಂದಿನ ದಿನಗಳಲ್ಲಿ ಅಮೃತ್ ಮಹಲ್, ಹಳ್ಳಿಕಾರ್ ಸೇರಿದಂತೆ ವಿವಿಧ ತಳಿಯ ಹಸುಗಳನ್ನು ಸಾಕುವ ಗೋಶಾಲೆ ಆರಂಭಿಸಲಾಗುವುದು. ನಮ್ಮ ದೇಶದ ಸಂಸ್ಕೃತಿ ಸಂಪ್ರಾದಯ ಮುಂದಿನ ಯುವ ಸಮೂಹ ನೆನಪಿನಲ್ಲಿ ಇಟ್ಟುಕೊಳ್ಳಬೇಕು ಎಂಬ ಉದ್ದೇಶದಿಂದ ಕಡಲೆಕಾಯಿ ಪರಿಷೆ ಆಯೋಜಿಸಲಾಗಿದೆ.
ಮೇರುನಟ ಡಾ ರಾಜ್ ಕುಮಾರ್ ಮತ್ತು ಕರ್ನಾಟಕ ರತ್ನ, ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಸ್ಮರಣೆಯಲ್ಲಿ ಭಾನುವಾರ ರಾಜ್ ಗಾನ ವೈಭವ ಕಾರ್ಯಕ್ರಮ ಆಯೋಜಿಸಲಾಗಿದೆ. ಸೋಮವಾರ ಸಮಾರೋಪ ಸಮಾರಂಭದಲ್ಲಿ ಜಾನಪದ ಸಂಗೀತ ಏರ್ಪಡಿಸಲಾಗಿದೆ. ಮೂರು ದಿನಗಳ ಕಾಲ ನಡೆಯುವ ಕಾರ್ಯಕ್ರಮಕ್ಕೆ ಧಾರ್ಮಿಕ ದತ್ತಿ ಇಲಾಖೆ ಮತ್ತು ಕಾಡುಮಲ್ಲೇಶ್ವರ ಗೆಳಯರ ಬಳಗದ ಸಹಯೋಗದಲ್ಲಿ ನಡೆಯಲಿದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.