ಬೈಕ್‌ಗೆ ಟ್ರ್ಯಾಕ್ಟರ್ ಡಿಕ್ಕಿ ಹೊಡೆದು ಕಿರುತೆರೆ ನಟಿ ಸಾವು...!

ಕೊಲ್ಹಾಪುರ ಜಿಲ್ಲೆಯಲ್ಲಿ 32 ವರ್ಷದ ಮರಾಠಿ ಕಿರುತೆರೆ ನಟಿ ಕಲ್ಯಾಣಿ ಕುರಾಳೆ-ಜಾಧವ್ ತಮ್ಮ ಮೋಟಾರ್‌ಸೈಕಲ್‌ಗೆ ಕಾಂಕ್ರೀಟ್ ಮಿಕ್ಸರ್ ಟ್ರ್ಯಾಕ್ಟರ್ ಡಿಕ್ಕಿ ಹೊಡೆದಿದ್ದರಿಂದಾಗಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.

Written by - Zee Kannada News Desk | Last Updated : Nov 13, 2022, 06:37 PM IST
  • ಅಪಘಾತದ ನಂತರ ಸಮೀಪದ ಆಸ್ಪತ್ರೆಗೆ ತಲುಪಿಸಿದರೂ ಕೂಡ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
  • ಟ್ರ್ಯಾಕ್ಟರ್ ಚಾಲಕನ ವಿರುದ್ಧ ಭಾರತೀಯ ದಂಡ ಸಂಹಿತೆ ಮತ್ತು ಮೋಟಾರು ವಾಹನ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಬೈಕ್‌ಗೆ ಟ್ರ್ಯಾಕ್ಟರ್ ಡಿಕ್ಕಿ ಹೊಡೆದು ಕಿರುತೆರೆ ನಟಿ ಸಾವು...!  title=

ಕೊಲ್ಹಾಪುರ : ಕೊಲ್ಹಾಪುರ ಜಿಲ್ಲೆಯಲ್ಲಿ 32 ವರ್ಷದ ಮರಾಠಿ ಕಿರುತೆರೆ ನಟಿ ಕಲ್ಯಾಣಿ ಕುರಾಳೆ-ಜಾಧವ್ ತಮ್ಮ ಮೋಟಾರ್‌ಸೈಕಲ್‌ಗೆ ಕಾಂಕ್ರೀಟ್ ಮಿಕ್ಸರ್ ಟ್ರ್ಯಾಕ್ಟರ್ ಡಿಕ್ಕಿ ಹೊಡೆದಿದ್ದರಿಂದಾಗಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.

ಇದನ್ನೂ ಓದಿ: ಸಾನಿಯಾ-ಶೋಯೆಬ್‌ ಡೈವೋರ್ಸ್‌ಗೆ ಕಾರಣವಾದ್ಳಾ ಈ ಪಾಕ್‌ ಸುಂದರಿ..!

'ತುಜ್ಯಹತ್ ಜೀವ್ ರಂಗಾ' ಟಿವಿ ಧಾರಾವಾಹಿಯಲ್ಲಿ ಕಾಣಿಸಿಕೊಳ್ಳುವ ನಟಿ ಕಲ್ಯಾಣಿ ಕುರಾಳೆ-ಜಾಧವ್ ಅವರು ಶನಿವಾರ ಸಂಜೆ ಮನೆಗೆ ತೆರಳುತ್ತಿದ್ದಾಗ ಸಾಂಗ್ಲಿ-ಕೊಲ್ಹಾಪುರ ಹೆದ್ದಾರಿಯ ಹಾಲೊಂಡಿ ಛೇದನದ ಬಳಿ ಅಪಘಾತ ಸಂಭವಿಸಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಇದನ್ನೂ ಓದಿ: “ಕೊಳಕು, ವಿಕೃತಿಗಳ ಮಹಾಸಂಗಮವೇ ಬಿಜೆಪಿ” -ಜೆಡಿಎಸ್ ಟೀಕಾಪ್ರಹಾರ

ಅಪಘಾತದ ನಂತರ ಸಮೀಪದ ಆಸ್ಪತ್ರೆಗೆ ತಲುಪಿಸಿದರೂ ಕೂಡ ಚಿಕಿತ್ಸೆ ಫಲಕಾರಿಯಾಗದೆ ಆಕೆ ಮೃತಪಟ್ಟಿದ್ದಾರೆ ಎಂದು ಘೋಷಿಸಲಾಯಿತು.ಟ್ರ್ಯಾಕ್ಟರ್ ಚಾಲಕನ ವಿರುದ್ಧ ಭಾರತೀಯ ದಂಡ ಸಂಹಿತೆ ಮತ್ತು ಮೋಟಾರು ವಾಹನ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ" ಎಂದು ಕೊಲ್ಲಾಪುರ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್

 

Trending News