ಬೆಂಗಳೂರು: ‘ಆಪರೇಷನ್ ಕಮಲ’ದ ಮುಂದುವರಿದ ಭಾಗವಾದ ‘ಆಪರೇಷನ್ ಮತದಾರರ ಪಟ್ಟಿ ಪರಿಷ್ಕರಣೆ’ ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಬುಡಮೇಲು ಮಾಡುವ ಗಂಭೀರ ಅಪರಾಧ ಪ್ರಕರಣ. ಈ ಬಗ್ಗೆ ರಾಜ್ಯ ಹೈಕೋರ್ಟ್ ಮುಖ್ಯನ್ಯಾಯಮೂರ್ತಿಯವರ ಉಸ್ತುವಾರಿಯಲ್ಲಿಯೇ ನ್ಯಾಯಾಂಗ ತನಿಖೆ ಮಾಡಬೇಕು’ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
ಈ ಬಗ್ಗೆ ಗುರುವಾರ ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ‘ಆಪರೇಷನ್ ಮತದಾರರ ಪಟ್ಟಿ ಪರಿಷ್ಕರಣೆ’ ಹಗರಣದಲ್ಲಿ ಭಾಗಿಯಾಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ತಕ್ಷಣವೇ ರಾಜೀನಾಮೆ ನೀಡಬೇಕು ಮತ್ತು ಮುಖ್ಯಮಂತ್ರಿಗಳು ಸೇರಿದಂತೆ ಪ್ರಕರಣದಲ್ಲಿ ಭಾಗಿಯಾಗಿರುವ ಎಲ್ಲ ಅಧಿಕಾರಿಗಳನ್ನು ತಕ್ಷಣ ಬಂಧಿಸಬೇಕು’ ಎಂದು ಆಗ್ರಹಿಸಿದ್ದಾರೆ.
“ಆಪರೇಷನ್ ಮತದಾರರ ಪಟ್ಟಿ ಪರಿಷ್ಕರಣೆ’ ಹಗರಣದಲ್ಲಿ ಭಾಗಿಯಾಗಿರುವ ಮುಖ್ಯಮಂತ್ರಿ @BSBommai ಅವರು ತಕ್ಷಣ ರಾಜೀನಾಮೆ ನೀಡಬೇಕು ಮತ್ತು ಮುಖ್ಯಮಂತ್ರಿಗಳು ಸೇರಿದಂತೆ ಪ್ರಕರಣದಲ್ಲಿ ಭಾಗಿಯಾಗಿರುವ ಎಲ್ಲ ಅಧಿಕಾರಿಗಳನ್ನು ತಕ್ಷಣ ಬಂಧಿಸಬೇಕು ಎಂದು ಆಗ್ರಹಿಸುತ್ತೇನೆ. 1/19#OperationVoter
— Siddaramaiah (@siddaramaiah) November 17, 2022
‘ಈ ಪ್ರಕರಣವನ್ನು ಸೂಕ್ಷ್ಮವಾಗಿ ಅವಲೋಕಸಿದರೆ ರಾಜ್ಯ ಬಿಜೆಪಿ ಸರ್ಕಾರ ಮತ್ತು ಬಿಬಿಎಂಪಿ ಮಾತ್ರವಲ್ಲ ಚುನಾವಣಾ ಆಯೋಗ ಕೂಡ ಈ ಹೀನ ಕೃತ್ಯದಲ್ಲಿ ಭಾಗಿಯಾಗಿರುವ ಗುಮಾನಿಗಳಿವೆ. ಕೇಂದ್ರ ಚುನಾವಣಾ ಆಯೋಗ ಕೂಡ ಇದನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸಬೇಕು. ಮತದಾರರ ಪಟ್ಟಿಯ ಅಕ್ರಮ ಪರಿಷ್ಕರಣೆಯ ಹಗರಣ ನಡೆಸಿದ ಸಂಸ್ಥೆಯ ಹೆಸರು ಬಿಜೆಪಿ ಸಚಿವರೊಬ್ಬರ ಒಡೆತನದ ಸಂಸ್ಥೆಯ ಹೆಸರಿನ ಜೊತೆ ತಾಳೆಯಾಗುವುದು ಕಾಕತಾಳಿಯವಾಗಿರಲಾರದು. ಅದೇ ರೀತಿ ಸಂಸ್ಥೆಯ ಕಚೇರಿ ಇರುವ ಸ್ಥಳದ ಸಮೀಪದಲ್ಲಿಯೇ ಈ ಸಂಶಯಿತ ಸಚಿವರ ಸಂಸ್ಥೆಗಳೂ ಇರುವುದು ಸಂಶಯವನ್ನು ಇನ್ನಷ್ಟು ಬಲಪಡಿಸುತ್ತದೆ’ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ಇದನ್ನೂ ಓದಿ: "ನಾನು ಪ್ರಾರಂಭಿಸಿದ ಕೆಲಸಗಳು ನನ್ನ ಕಾಲದಲ್ಲೇ ಕಂಪ್ಲೀಟ್ ಆಗಬೇಕು"
“ಆಪರೇಷನ್ ಕಮಲ’ದ ಮುಂದುವರಿದ ಭಾಗವಾದ “ಆಪರೇಷನ್ ಮತದಾರರ ಪಟ್ಟಿ ಪರಿಷ್ಕರಣೆ’ ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಬುಡಮೇಲು ಮಾಡುವ ಗಂಭೀರ ಅಪರಾಧ ಪ್ರಕರಣ. ಈ ಬಗ್ಗೆ ರಾಜ್ಯ ಹೈಕೋರ್ಟ್ ಮುಖ್ಯನ್ಯಾಯಮೂರ್ತಿಯವರ ಉಸ್ತುವಾರಿಯಲ್ಲಿಯೇ ನ್ಯಾಯಾಂಗ ತನಿಖೆ ಮಾಡಬೇಕು. 2/19#OperationVoter
— Siddaramaiah (@siddaramaiah) November 17, 2022
‘ಸರ್ಕಾರದ ಮಟ್ಟದಲ್ಲಿ ಚರ್ಚೆಯಾಗದೆ ಇಂತಹದ್ದೊಂದು ಹಗರಣ ನಡೆಸಲು ಸಾಧ್ಯವಿಲ್ಲ. ಅಧಿಕಾರಿಗಳು ಸ್ವ ಇಚ್ಛೆಯಿಂದ ಇಷ್ಟೊಂದು ಬೇಜವಾಬ್ದಾರಿಯಿಂದ ನಡೆದುಕೊಳ್ಳಲು ಸಾಧ್ಯವಿಲ್ಲ. ಮುಖ್ಯಮಂತ್ರಿಯವರಿಂದ ಹಿಡಿದು ಬಿಜೆಪಿ ಪಕ್ಷದ ಹಿರಿಯ ಸಚಿವರೆಲ್ಲರೂ ಭಾಗಿಯಾಗಿಯೇ ಈ ಕೆಲಸ ಮಾಡಿದ್ದಾರೆ. ‘ಮೇಲಿನವರ’ ರಕ್ಷಣೆ ಇಲ್ಲದೆ, ಯಾವುದೇ ಪೂರ್ವಪರ ಪರಿಶೀಲನೆ ನಡೆಸದೆ ಮಹಾನಗರ ಪಾಲಿಕೆ “ಚಿಲುಮೆ ಶೈಕ್ಷಣಿಕ, ಸಾಂಸ್ಕೃತಿಕ ಮತ್ತು ಗ್ರಾಮೀಣಾಭಿವೃದ್ಧಿ ಸಂಸ್ಥೆಗೆ ಮತದಾರರ ಪಟ್ಟಿಯನ್ನು ಉಚಿತವಾಗಿ ಪರಿಷ್ಕರಣೆ ಮಾಡುವಂತೆ ಅನುಮತಿ ನೀಡಲು ಹೇಗೆ ಸಾಧ್ಯ?’ವೆಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
‘ಮತದಾರರ ಪಟ್ಟಿ ಪರಿಷ್ಕರಣೆ ಮತ್ತು ಮತದಾರರ ಮಾಹಿತಿ ಸಂಗ್ರಹದ ಕೆಲಸವನ್ನು ಚುನಾವಣಾ ಆಯೋಗ ಮಾಡಬೇಕಾಗಿದ್ದು, ಇದನ್ನು ಖಾಸಗಿ ಸಂಸ್ಥೆಗೆ ಒಪ್ಪಿಸುವುದು ಅಪರಾಧವಾಗಿದೆ. ಬಿಬಿಎಂಪಿಯ ಅಧಿಕಾರಿಗಳೇ ಎಂದು ತಪ್ಪಾಗಿ ತಿಳಿದು ಮತದಾರರು ವೈಯಕ್ತಿಕ ಮಾಹಿತಿಯನ್ನು ನೀಡಿದ್ದಾರೆ. ಇದು ವಿಶ್ವಾಸ ದ್ರೋಹವಾಗಿದೆ. ಚಿಲುಮೆ ಸಂಸ್ಥೆಯ ಮಾಲೀಕ ಕೃಷ್ಣಪ್ಪ ರವಿಕುಮಾರ ಎಂಬವರು ಈ ಹಗರಣದ ರೂವಾರಿಯಾಗಿ ಮೇಲ್ನೋಟಕ್ಕೆ ಕಾಣಿಸಿದರೂ ಇದರ ಹಿಂದೆ ಬಿಜೆಪಿ ಸರ್ಕಾರದ ಉನ್ನತ ಸ್ಥಾನದಲ್ಲಿರುವವರ ಕೈವಾಡ ಖಂಡಿತ ಇದೆ. ಈ ಬಗ್ಗೆ ತನಿಖೆ ಮಾಡಿದರೆ ಮಾತ್ರ ಸತ್ಯ ಬಯಲಾಗಲು ಸಾಧ್ಯ’ವೆಂದು ಅವರು ಹೇಳಿದ್ದಾರೆ.
ಈ ಪ್ರಕರಣವನ್ನು ಸೂಕ್ಷ್ಮವಾಗಿ ಅವಲೋಕಸಿದರೆ ರಾಜ್ಯ @BJP4Karnataka ಸರ್ಕಾರ ಮತ್ತು ಬಿಬಿಎಂಪಿ ಮಾತ್ರವಲ್ಲ ಚುನಾವಣಾ ಆಯೋಗ ಕೂಡಾ ಈ ಹೀನ ಕೃತ್ಯದಲ್ಲಿ ಭಾಗಿಯಾಗಿರುವ ಗುಮಾನಿಗಳಿವೆ. ಕೇಂದ್ರ ಚುನಾವಣಾ ಆಯೋಗ ಕೂಡಾ ಇದನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸಬೇಕು. 3/19#OperationVoter
— Siddaramaiah (@siddaramaiah) November 17, 2022
‘ಯಾವುದೋ ಒಂದು ಸಂಸ್ಥೆ ಅರ್ಜಿ ನೀಡಿ ತಾವು ಮತದಾರರನ್ನು ಜಾಗೃತಗೊಳಿಸುವ ಮತ್ತು ಮತದಾರರ ಪಟ್ಟಿಯನ್ನು ಪರಿಷ್ಕರಿಸುವ ಕಾರ್ಯವನ್ನು ಉಚಿತವಾಗಿ ಮಾಡುವುದಾಗಿ ತಿಳಿಸಿದಾಗಲೇ ಸಂಸ್ಥೆಯ ಉದ್ದೇಶದ ಬಗ್ಗೆ ಸಂಶಯ ಮೂಡಬೇಕಿತ್ತು. ಹೀಗಿದ್ದರೂ 20 ಆಗಸ್ಟ್ 2022ರಂದು ಬಿಬಿಎಂಪಿ ಆಯುಕ್ತರು ಅನುಮತಿ ನೀಡಿದ್ದಾರೆ. ಜಾಹಿರಾತು ನೀಡದೆ, ಟೆಂಡರ್ ಕರೆಯದೆ ಬಿಬಿಎಂಪಿ ಒಂದು ಖಾಸಗಿ ಕಂಪನಿಗೆ ಈ ಕಾರ್ಯವನ್ನು ನೀಡಲು ಹೇಗೆ ಸಾಧ್ಯ? ಅನುಮತಿ ನೀಡುವಾಗ ಸಂಸ್ಥೆಯ ಹಿನ್ನೆಲೆಯನ್ನು ಯಾಕೆ ಪರಿಶೀಲಿಸಿಲ್ಲ? ಉಚಿತ ಸೇವೆ ನೀಡುವ ಉದ್ದೇಶದ ಹಿನ್ನೆಲೆಯನ್ನು ಯಾಕೆ ತಿಳಿದುಕೊಂಡಿಲ್ಲ?’ವೆಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ಮುಖ್ಯಮಂತ್ರಿ @BSBommai, ಬಿಬಿಎಂಪಿ ಆಯುಕ್ತರು ಹಾಗೂ ಇತರರ ವಿರುದ್ಧ ಇಂದೇ ದೂರು ದಾಖಲಿಸುತ್ತೇವೆ. ಈ ಕೂಡಲೇ ಬಸವರಾಜ ಬೊಮ್ಮಾಯಿ ಅವರನ್ನು ಬಂಧಿಸಬೇಕು. ಒಂದು ವೇಳೆ ಅವರ ವಿರುದ್ಧ ಎಫ್,ಐ,ಆರ್ ದಾಖಲಿಸದಿದ್ದರೆ ಮುಂದಿನ ಕ್ರಮವನ್ನು ನಾವು ಕೈಗೊಳ್ಳುತ್ತೇವೆ. 18/19#OperationVoter
— Siddaramaiah (@siddaramaiah) November 17, 2022
ಇದನ್ನೂ ಓದಿ: ಹಿಂದೂ ಪದ ಕುರಿತ ಹೇಳಿಕೆ: ಸತೀಶ್ ಜಾರಕಿಹೊಳಿಗೆ ಚಕ್ರವರ್ತಿ ಸೂಲಿಬೆಲೆ ಬಹಿರಂಗ ಸವಾಲು!
‘ಸಿಎಂ ಬೊಮ್ಮಾಯಿ, ಬಿಬಿಎಂಪಿ ಆಯುಕ್ತರು ಹಾಗೂ ಇತರರ ವಿರುದ್ಧ ಇಂದೇ ದೂರು ದಾಖಲಿಸುತ್ತೇವೆ. ಈ ಕೂಡಲೇ ಬೊಮ್ಮಾಯಿ ಅವರನ್ನು ಬಂಧಿಸಬೇಕು. ಒಂದು ವೇಳೆ ಅವರ ವಿರುದ್ಧ FIR ದಾಖಲಿಸದಿದ್ದರೆ ಮುಂದಿನ ಕ್ರಮವನ್ನು ನಾವು ಕೈಗೊಳ್ಳುತ್ತೇವೆ’ ಎಂದು ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.