ಚಾಮರಾಜನಗರ : ಮತದಾರರ ಮಾಹಿತಿಗೆ ಕನ್ನ ಹಾಕಿರುವುದು ನಾವಲ್ಲ, ಈ ತಪ್ಪು ಮಾಡಿರುವುದು ಮೈತ್ರಿ ಸರ್ಕಾರ. ಆದರೆ ಮೈತ್ರಿ ಸರ್ಕಾರದ ತಪ್ಪನ್ನು ಈಗ ನಮ್ಮ ಮೇಲೆ ಹೊರಿಸಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಆರೋಪಿಸಿದ್ದಾರೆ. ಈ ಮೂಲಕ ಮತದಾರರ ಮಾಹಿತಿ ಕದಿಯಲಾಗಿದೆ ಎನ್ನುವ ಕಾಂಗ್ರೆಸ್ ಆರೋಪಕ್ಕೆ ತಿರುಗೇಟು ಕೊಟ್ಟಿದ್ದಾರೆ.
ಕೊಳ್ಳೇಗಾಲದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿಡ ವಿ ಸೋಮಣ್ಣ ಈ ಆರೋಪ ಮಾಡಿದ್ದಾರೆ. ಮೈತ್ರಿ ಸರ್ಕಾರದ ಅವಧಿಯಲ್ಲಿ ಆ ಸಂಸ್ಥೆಗೆ ಆದೇಶ ನೀಡಿದ್ದು. ನಾವು ಆ ಸಂಸ್ಥೆಗೆ ಯಾವುದೇ ಆದೇಶ ನೀಡಿರುವುದಲ್ಲ ಎಂದು ಸೋಮಣ್ಣ ಸ್ಪಷ್ಟಪಡಿಸಿದ್ದಾರೆ. ಈಗ ಕಾಂಗ್ರೆಸ್ ನವರು ತಾವು ಮಾಡಿದ್ದ ತಪ್ಪನ್ನು ನಮ್ಮ ಮೇಲೆ ಹೊರಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಅಲ್ಲದೆ, ಕಾಂಗ್ರೆಸ್ ಆರೋಪ ಬಾಲಿಶತನದಿಂದ ಕೂಡಿದೆ ಎಂದಿದ್ದಾರೆ.
ಇದನ್ನೂ ಓದಿ : Bangalore Population: ‘10 ವರ್ಷಗಳಲ್ಲಿ ಬೆಂಗಳೂರಿನ ಜನಸಂಖ್ಯೆ ದುಪ್ಪಟ್ಟು’
ಚುನಾವಣೆಗೆ ಇನ್ನು ಕೆಲವೇ ತಿಂಗಳು ಬಾಕಿ ಉಳಿದಿವೆ. ಈ ಸಂದರ್ಭದಲ್ಲಿ ಇಂಥ ಆರೋಪಗಳನ್ನು ಮಾಡಿ ಜನರನ್ನು ಕಕ್ಕಾಬಿಕ್ಕಿ ಮಾಡುತ್ತಿದ್ದಾರೆ. ಸಿಎಂ ತನಿಖೆಗೆ ಆದೇಶಿಸಿದ್ದು ಶೀಘ್ರವೇ ತಪ್ಪಿತಸ್ಥರು ಯಾರು ಎಂಬುದು ತಿಳಿಯಲಿದೆ ಎಂದಿದ್ದಾರೆ. ಕಾಂಗ್ರೆಸ್ ಮಾಡಿರುವ ಎಲ್ಲಾ ಆರೋಪಗಳನ್ನು ನಂಬಲು ಜನ ದಡ್ಡರಲ್ಲ ಎಂದು ಸೋಮಣ್ಣ ಹೇಳಿದ್ದಾರೆ.
ಇದನ್ನೂ ಓದಿ : ಬೆಂಗಳೂರಿನ ಜನಸಂಖ್ಯೆ ಹೆಚ್ಚಳದ ಬಗ್ಗೆ ಬಿಬಿಎಪಿ ಕಮಿಷನರ್ ನೀಡಿದ ಎಚ್ಚರಿಕೆ ಏನು ಗೊತ್ತೇ?
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.