ಬೆಂಗಳೂರು: ರಾಷ್ಟ್ರೀಯ ಪಕ್ಷಗಳು ಕರ್ನಾಟಕದ ಪಾಲಿಗೆ ಮಾರಕ ಎನ್ನುವುದು ಪದೇಪದೆ ರುಜುವಾತಾಗುತ್ತಿದೆ. ನೆಲ, ಜಲ, ಭಾಷೆ ವಿಚಾರದಲ್ಲಿ ಅವು ಕನ್ನಡಿಗರನ್ನು ಕಾಡುತ್ತಲೇ ಇವೆ. ಈಗ ದಕ್ಷಿಣ ಪಿನಾಕಿನಿ (ಪೆನ್ನಾರ್) ನದಿ ನೀರಿನ ವಿಷಯದಲ್ಲಿ ಕೇಂದ್ರ ಬಿಜೆಪಿ ಸರ್ಕಾರ ಕನ್ನಡಿಗರ ಹಕ್ಕು ಕಸಿದು ಕಿರುಕುಳ ನೀಡಲು ಹೊರಟಿದೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.
ಈ ಬಗ್ಗೆ ಶುಕ್ರವಾರ ಸರಣಿ ಟ್ವೀಟ್ ಮಾಡಿರುವ ಅವರು, ‘ಕಾವೇರಿ ವಿವಾದದಲ್ಲಿ ಕರ್ನಾಟಕವು ಒಂದು ಶತಮಾನ ಕಾಲ ಸಂಘರ್ಷ ನಡೆಸಿದ್ದಾಯಿತು. ಮೇಕೆದಾಟು ವಿವಾದಕ್ಕೆ ಪ್ರಧಾನಿ ಮೋದಿ ಸರ್ಕಾರ ಇನ್ನೂ ತುಪ್ಪ ಸುರಿಯುತ್ತಾ, ಆ ಯೋಜನೆಗೆ ಅನುಮತಿ ನೀಡಲು ಮೀನಾಮೇಷ ಎಣಿಸುತ್ತಿದೆ. ಆಗಲೇ, ಪಿನಾಕಿನಿ ನದಿ ವಿಷಯದಲ್ಲಿ ರಾಜ್ಯಕ್ಕೆ ಕಾನೂನು ಕುಣಿಕೆ ಬಿಗಿಯಲು ಬಿಜೆಪಿ ಸರ್ಕಾರ ಹುನ್ನಾರ ನಡೆಸಿದೆ’ ಎಂದು ಎಚ್ಡಿಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಾವೇರಿ ವಿವಾದದಲ್ಲಿ ಕರ್ನಾಟಕವು ಒಂದು ಶತಮಾನ ಕಾಲ ಸಂಘರ್ಷ ನಡೆಸಿದ್ದಾಯಿತು. ಮೇಕೆದಾಟು ವಿವಾದಕ್ಕೆ ಶ್ರೀ @narendramodi ಸರಕಾರ ಇನ್ನೂ ತುಪ್ಪ ಸುರಿಯುತ್ತಾ, ಆ ಯೋಜನೆಗೆ ಅನುಮತಿ ನೀಡಲು ಮೀನಾಮೇಷ ಎಣಿಸುತ್ತಿದೆ. ಆಗಲೇ, ಪಿನಾಕಿನಿ ನದಿ ವಿಷಯದಲ್ಲಿ ರಾಜ್ಯಕ್ಕೆ ಕಾನೂನು ಕುಣಿಕೆ ಬಿಗಿಯಲು ಬಿಜೆಪಿ ಸರಕಾರ ಹುನ್ನಾರ ನಡೆಸಿದೆ. 2/10
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) November 18, 2022
‘ರಾಜಕೀಯ ಕಾರಣಕ್ಕಾಗಿ ದಕ್ಷಿಣ ಪಿನಾಕಿನಿ ನದಿ ನೀರಿನ ಹಕ್ಕನ್ನು ಕರ್ನಾಟಕದಿಂದ ಕಸಿಯಲು ಕೇಂದ್ರ ಹವಣಿಸುತ್ತಿದೆ. ಕಾವೇರಿ, ಕೃಷ್ಣಾ, ಮಹದಾಯಿ ಸೇರಿ ವಿವಿಧ ಜಲ ವಿವಾದಗಳಲ್ಲಿ ಕರ್ನಾಟಕವನ್ನು ಕಾಡಿದಂತೆ, ವಿವಾದವೇ ಅಲ್ಲದ ದಕ್ಷಿಣ ಪಿನಾಕಿನಿಯನ್ನೂ ವಿವಾದದ ಕೂಪಕ್ಕೆ ತಳ್ಳಿ ಕನ್ನಡಿಗರನ್ನು ಕಾಡುವ ಹವಣಿಕೆ ಇದಷ್ಟೇ. ದಕ್ಷಿಣ ಪಿನಾಕಿನಿ ನದಿ ನೀರಿನ ವಿಷಯಕ್ಕೆ ಹೊಸ ನ್ಯಾಯಾಧಿಕರಣ ರಚನೆ ಮಾಡುವ ಕೇಂದ್ರ ಬಿಜೆಪಿ ಸರ್ಕಾರದ ನಿರ್ಧಾರ ಅಕ್ಷಶಃ ರಾಜ್ಯದ ಪಾಲಿಗೆ ಮರಣಶಾಸನ. ಇದನ್ನು ರಾಜ್ಯ ಬಿಜೆಪಿ ಸರ್ಕಾರ ಮುಲಾಜಿಲ್ಲದೆ ವಿರೋಧಿಸಬೇಕು’ ಎಂದು ಕುಮಾರಸ್ವಾಮಿ ಆಗ್ರಹಿಸಿದ್ದಾರೆ.
ಇದನ್ನೂ ಓದಿ: ಮತದಾರರ ಮಾಹಿತಿ ಕಳ್ಳತನ ಆರೋಪ: ಸಿಎಂ ಬೊಮ್ಮಾಯಿ ರಾಜೀನಾಮೆಗೆ ಸುರ್ಜೇವಾಲಾ ಆಗ್ರಹ
ದಕ್ಷಿಣ ಪಿನಾಕಿನಿ ನದಿ ನೀರಿನ ವಿಷಯಕ್ಕೆ ಹೊಸ ನ್ಯಾಯಾಧಿಕರಣ ರಚನೆ ಮಾಡುವ ಕೇಂದ್ರ ಬಿಜೆಪಿ ಸರಕಾರದ ನಿರ್ಧಾರ ಅಕ್ಷಶಃ ರಾಜ್ಯದ ಪಾಲಿಗೆ ಮರಣಶಾಸನ. ಇದನ್ನು ರಾಜ್ಯ @BJP4Karnataka ಸರಕಾರ ಮುಲಾಜಿಲ್ಲದೆ ವಿರೋಧಿಸಬೇಕು. 4/10
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) November 18, 2022
‘ರಾಜಕೀಯ ಲಾಭದ ಉದ್ದೇಶಕ್ಕಾಗಿ ಬಿಜೆಪಿ ಸರ್ಕಾರವು ನೆಲ, ಜಲ, ಭಾಷೆಯಂಥ ವಿಷಯಗಳನ್ನಿಟ್ಟುಕೊಂಡು ದಕ್ಷಿಣದ ನಡುವೆ ಜಗಳ ಹಚ್ಚಲು ಷಡ್ಯಂತ್ರ ನಡೆಸಿದೆ. ರಾಜ್ಯದ ವಿರೋಧವಿದ್ದರೂ ಕೇಂದ್ರವು ನ್ಯಾಯಾಧಿಕರಣ ರಚನೆ ಮಾಡಲು ಹೊರಟಿದೆ. ಇದು ಸರಿಯಲ್ಲ. ಕನ್ನಡಿಗರನ್ನು ಮತ್ತೊಮ್ಮೆ ‘ಜಲದಾಸ್ಯʼಕ್ಕೆ ದೂಡುವುದನ್ನು ನಾವು ಸಹಿಸುವುದಿಲ್ಲ. ಗೋದಾವರಿ-ಕೃಷ್ಣಾ-ಪಿನಾಕಿನಿ-ಕಾವೇರಿ ನದಿ ಜೋಡಣೆ ಯೋಜನೆಯಲ್ಲೂ ಕೇಂದ್ರವು ರಾಜ್ಯಕ್ಕೆ ಸೊನ್ನೆ ಸುತ್ತಿದೆ. 2022 ಫೆ.18ರಂದು ಸಭೆ ನಡೆಸಿದ ಕೇಂದ್ರವು, ಗೋದಾವರಿಯಿಂದ 247 ಟಿಎಂಸಿ ನೀರನ್ನು ಕೃಷ್ಣಾ, ಪೆನ್ನಾರ್ ಮೂಲಕ ಕಾವೇರಿಗೆ ಹರಿಸುವ ಯೋಜನೆಯ ಮಾಹಿತಿ ನೀಡಿತು. ಇಷ್ಟೂ ನೀರನ್ನು ತೆಲಂಗಾಣ, ಆಂಧ್ರ, ತಮಿಳುನಾಡಿಗೆ ಮಾತ್ರ ಹಂಚಿತು’ ಅಂತಾ ಎಚ್ಡಿಕೆ ಹೇಳಿದ್ದಾರೆ.
ಗೋದಾವರಿ-ಕೃಷ್ಣಾ-ಪಿನಾಕಿನಿ-ಕಾವೇರಿ ನದಿ ಜೋಡಣೆ ಯೋಜನೆಯಲ್ಲೂ ಕೇಂದ್ರವು ರಾಜ್ಯಕ್ಕೆ ಸೊನ್ನೆ ಸುತ್ತಿದೆ. 2022 ಫೆ.18ರಂದು ಸಭೆ ನಡೆಸಿದ ಕೇಂದ್ರವು, ಗೋದಾವರಿಯಿಂದ 247 ಟಿಎಂಸಿ ನೀರನ್ನು ಕೃಷ್ಣಾ, ಪೆನ್ನಾರ್ ಮೂಲಕ ಕಾವೇರಿಗೆ ಹರಿಸುವ ಯೋಜನೆಯ ಮಾಹಿತಿ ನೀಡಿತು. ಇಷ್ಟೂ ನೀರನ್ನು ತೆಲಂಗಾಣ, ಆಂಧ್ರ, ತಮಿಳುನಾಡಿಗೆ ಮಾತ್ರ ಹಂಚಿತು. 6/10
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) November 18, 2022
‘ಈ ನದಿ ಜೋಡಣೆ ಯೋಜನೆಯಲ್ಲಿ ಕರ್ನಾಟಕ ಪ್ರಮುಖ ಪಾಲುದಾರ & ಹಕ್ಕುದಾರ ರಾಜ್ಯ. ಆದರೆ 247 ಟಿಎಂಸಿಯಲ್ಲಿ ರಾಜ್ಯಕ್ಕೆ ಸಿಕ್ಕಿರುವುದು ಶೂನ್ಯ!! ಆ ಸಭೆಯಲ್ಲಿ ರಾಜ್ಯಕ್ಕೆ ಅಪಮಾನ ಮಾಡಲಾಯಿತು ಎಂಬ ಮಾಹಿತಿಯೂ ಬಂದಿತ್ತು. ಗೋದಾವರಿ-ಕೃಷ್ಣಾ-ಪಿನಾಕಿನಿ-ಕಾವೇರಿ ನದಿ ಜೋಡಣೆ ಯೋಜನೆಯಲ್ಲಿ ರಾಜ್ಯಕ್ಕೆ ಹನಿ ನೀರನ್ನೂ ಹಂಚಿಕೆ ಮಾಡಿಲ್ಲ ಎಂದರೆ ಬಿಜೆಪಿ ಸರ್ಕಾರಕ್ಕೆ ಕರ್ನಾಟಕದ ಮೇಲೆ ಅದೆಷ್ಟು ನಿರ್ಲಕ್ಷ್ಯವಿದೆ ಎಂಬುದನ್ನು ಅರ್ಥ ಮಾಡಿಕೊಳ್ಳಬಹುದು’ ಅಂತಾ ಕುಮಾರಸ್ವಾಮಿ ಹೇಳಿದ್ದಾರೆ.
ಗೋದಾವರಿ-ಕೃಷ್ಣಾ-ಪಿನಾಕಿನಿ-ಕಾವೇರಿ ನದಿ ಜೋಡಣೆ ಯೋಜನೆಯಲ್ಲಿ ರಾಜ್ಯಕ್ಕೆ ಹನಿ ನೀರನ್ನೂ ಹಂಚಿಕೆ ಮಾಡಿಲ್ಲ ಎಂದರೆ, @BJP4India ಸರಕಾರಕ್ಕೆ ಕರ್ನಾಟಕದ ಮೇಲೆ ಅದೆಷ್ಟು ನಿರ್ಲಕ್ಷ್ಯ ಇದೆ ಎಂಬುದನ್ನು ಅರ್ಥ ಮಾಡಿಕೊಳ್ಳಬಹುದು. 8/10
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) November 18, 2022
‘ಕನ್ನಡಿಗರು ತಬ್ಬಲಿಗಳಾಗುತ್ತಿದ್ದಾರೆ" ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಸಂಸತ್ತಿನಲ್ಲಿ ಅಲವತ್ತುಕೊಂಡರೂ ಕೇಂದ್ರವು ಕನ್ನಡಿಗರ ಮೇಲೆ ಕಠಿಣ ನೀತಿ ಮುಂದುವರಿಸಿದೆ. ದಕ್ಷಿಣ ಪಿನಾಕಿನಿ ವಿಷಯದಲ್ಲಿ ನ್ಯಾಯಾಧೀಕರಣ ರಚನೆ ಒಪ್ಪುವುದಿಲ್ಲ. ನೆಲ, ಜಲ, ಭಾಷೆ ವಿಚಾರದಲ್ಲಿ ದಕ್ಷಿಣ ರಾಜ್ಯಗಳನ್ನು ಒಡೆದಾಳುವ ಬಿಜೆಪಿಯ ಕುತ್ಸಿತ ರಾಜಕಾರಣಕ್ಕೆ ಅವಕಾಶ ನೀಡುವುದಿಲ್ಲ. ರಾಜ್ಯದ ನೀರಾವರಿ ಹಿತಾಸಕ್ತಿಗಳ ಬಗ್ಗೆ ರಾಜಿ ಪ್ರಶ್ನೆಯೇ ಇಲ್ಲ’ವೆಂದು ಎಚ್ಡಿಕೆ ಎಚ್ಚರಿಕೆ ನೀಡಿದ್ದಾರೆ.
ದಕ್ಷಿಣ ಪಿನಾಕಿನಿ ವಿಷಯದಲ್ಲಿ ನ್ಯಾಯಾಧೀಕರಣ ರಚನೆ ಒಪ್ಪುವುದಿಲ್ಲ. ನೆಲ, ಜಲ, ಭಾಷೆ ವಿಚಾರದಲ್ಲಿ ದಕ್ಷಿಣ ರಾಜ್ಯಗಳನ್ನು ಒಡೆದಾಳುವ ಬಿಜೆಪಿಯ ಕುತ್ಸಿತ ರಾಜಕಾರಣಕ್ಕೆ ಅವಕಾಶ ನೀಡುವುದಿಲ್ಲ. ರಾಜ್ಯದ ನೀರಾವರಿ ಹಿತಾಸಕ್ತಿಗಳ ಬಗ್ಗೆ ರಾಜಿ ಪ್ರಶ್ನೆಯೇ ಇಲ್ಲ. 10/10#ದಕ್ಷಿಣ_ಪಿನಾಕಿನಿ
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) November 18, 2022
ಇದನ್ನೂ ಓದಿ: ಮಾಡಿರೋದು ಮೈತ್ರಿ ಸರ್ಕಾರ - ಆರೋಪ ಮಾತ್ರ ನಮ್ಮ ಮೇಲೆ : ಸಚಿವ ಸೋಮಣ್ಣ ಕಿಡಿ
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.