ಸಿಎಂ ಜನತಾ ದರ್ಶನದಲ್ಲಿ ಸ್ವೀಕರಿಸಿದ ಅರ್ಜಿಗಳೆಷ್ಟು? ಅದರಲ್ಲಿ ಇತ್ಯರ್ಥ ಆದದ್ದೆಷ್ಟು?

ಜೂನ್ 1 ರಿಂದ ಈವರೆಗೆ ಸಿಎಂ ಕುಮಾರಸ್ವಾಮಿಯವರು ನಡೆಸಿರುವ ಜನತಾ ದರ್ಶನ ಕಾರ್ಯಕ್ರಮದಲ್ಲಿ ಒಟ್ಟು 17,723 ಅರ್ಜಿಗಳನ್ನು ಸ್ವೀಕರಿಸಲಾಗಿದೆ.  

Last Updated : Oct 24, 2018, 10:53 AM IST
ಸಿಎಂ ಜನತಾ ದರ್ಶನದಲ್ಲಿ ಸ್ವೀಕರಿಸಿದ ಅರ್ಜಿಗಳೆಷ್ಟು? ಅದರಲ್ಲಿ ಇತ್ಯರ್ಥ ಆದದ್ದೆಷ್ಟು? title=

ಬೆಂಗಳೂರು: ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ನಿನ್ನೆ ಬೆಂಗಳೂರಿನ ಪ್ರೆಸ್ ಕ್ಲಬ್ ನಲ್ಲಿ ಮೈತ್ರಿ ಸರ್ಕಾರದ ಸಾಧನೆ, ಸವಾಲುಗಳ ಕುರಿತು ಮಾಧ್ಯಮ ಸಂವಾದ ನಡೆಸಿದರು.

ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರಕ್ಕೆ 150 ದಿನ ತುಂಬಿದ ಹಿನ್ನಲೆಯಲ್ಲಿ ಪ್ರೆಸ್ ಕ್ಲಬ್ ನಲ್ಲಿ ಮಾಧ್ಯಮ ಸಂವಾದವನ್ನುದ್ದೇಶಿಸಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಮಾತನಾಡಿದರು. ಆ ಸಂದರ್ಭದಲ್ಲಿ ಜೂನ್ 1 ರಿಂದ ಈವರೆಗೆ ಸಿಎಂ ಕುಮಾರಸ್ವಾಮಿಯವರು ನಡೆಸಿರುವ ಜನತಾ ದರ್ಶನ ಕಾರ್ಯಕ್ರಮದಲ್ಲಿ ಒಟ್ಟು 17,723 ಅರ್ಜಿಗಳನ್ನು ಸ್ವೀಕರಿಸಲಾಗಿದೆ. ಕಳೆದ 4 ತಿಂಗಳಲ್ಲಿ ಸ್ವೀಕರಿಸಿದ ಮನವಿಗಳಲ್ಲಿ ಶೇ. 50 ರಷ್ಟು ಇತ್ಯರ್ಥಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.

ಈವರೆಗೆ 10ಕ್ಕೂ ಹೆಚ್ಚು ಜಿಲ್ಲೆಗಳಿಗೆ ಭೇಟಿ ನೀಡಿದ್ದು, 6 ಜಿಲ್ಲಾಡಳಿತಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಲಾಗಿದೆ. ಜಿಲ್ಲಾ ಮಟ್ಟದಲ್ಲಿ ಜನತಾ ದರ್ಶನ ನಡೆಸುವ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಸುತ್ತೋಲೆ ಹೊರಡಿಸಲಾಗಿದ್ದು, ಹಲವು ಜಿಲ್ಲಾಧಿಕಾರಿಗಳು ಕ್ರಮ ವಹಿಸಿದ್ದಾರೆ ಎಂದು ಹೇಳಿದರು.

ಸೆಪ್ಟೆಂಬರ್ ಕೊನೆಯ ವಾರ ಬೆಂಗಳೂರಿನಲ್ಲಿ ಯಶಸ್ವಿಯಾಗಿ ಉದ್ಯೋಗ ಮೇಳ ಏರ್ಪಡಿಸಲಾಯಿತು. ಎಲ್ಲಾ ಜಿಲ್ಲೆಗಳಲ್ಲೂ ಉದ್ಯೋಗ ಮೇಳ ಏರ್ಪಡಿಸಲು ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.
 

Trending News