PM Modi to Distribute 71000 Appointment Letters: ರೋಜ್ಗಾರ್ ಮೇಳದ ಅಂಗವಾಗಿ ಹೊಸದಾಗಿ ನೇಮಕಗೊಂಡ 71,000 ಅಭ್ಯರ್ಥಿಗಳಿಗೆ ಪ್ರಧಾನಿ ನರೇಂದ್ರ ಮೋದಿ ನೇಮಕಾತಿ ಪತ್ರಗಳನ್ನು ವಿತರಿಸಲಿದ್ದಾರೆ. ಇಂದು ಈ ಕಾರ್ಯಕ್ರಮ ನಡೆಸಲು ಕೇಂದ್ರ ಸಕಲ ರೀತಿಯ ಸಿದ್ಧತೆಗಳನ್ನು ಮಾಡಿಕೊಂಡಿದೆ. ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಹೊಸದಾಗಿ ನೇಮಕಗೊಂಡ ಅಭ್ಯರ್ಥಿಗಳನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ದೇಶಿಸಿ ಮಾತನಾಡಲಿದ್ದಾರೆ. ಈ ಸಂಬಂಧ ಪ್ರಧಾನಿ ಕಾರ್ಯಾಲಯ ಸೋಮವಾರ ಪ್ರಕಟಣೆ ಹೊರಡಿಸಿದೆ.
ಇದನ್ನೂ ಓದಿ: FIFA World Cup ವೀಕ್ಷಿಸಲೆಂದು 23 ಲಕ್ಷದ ಮನೆ ಖರೀದಿಸಿದ ಕೇರಳದ 17 ಯುವಕರು!
ನಿರುದ್ಯೋಗದ ಭಾಗವಾಗಿ ದೊಡ್ಡ ಪ್ರಮಾಣದಲ್ಲಿ ಉದ್ಯೋಗ ಸೃಷ್ಟಿಸುವುದಾಗಿ ಪ್ರಧಾನಿ ನರೇಂದ್ರ ಮೋದಿ ಅವರು ನೀಡಿದ ಭರವಸೆಯನ್ನು ಉಳಿಸಿಕೊಳ್ಳುವ ಪ್ರಯತ್ನದ ಭಾಗವಾಗಿ ಈ ರೋಜಗಾರ್ ಮೇಳವನ್ನು ನಡೆಸಲಾಗುತ್ತಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ದಾಖಲೆಗಳನ್ನು ನೀಡಲಾಗುತ್ತಿದೆ ಎಂದು ಕೇಂದ್ರ ಸ್ಪಷ್ಟಪಡಿಸಿದೆ. ರೋಜ್ಗಾರ್ ಮೇಳ ಇಂದಿನ ನಿರುದ್ಯೋಗಿ ಯುವಕರಿಗೆ ವಿವಿಧ ಕ್ಷೇತ್ರಗಳಲ್ಲಿ ಉದ್ಯೋಗಾವಕಾಶಗಳನ್ನು ಒದಗಿಸುವುದರೊಂದಿಗೆ ದೇಶದ ಅಭಿವೃದ್ಧಿಯಲ್ಲಿ ಭಾಗವಹಿಸಲು ಸಹಾಯ ಮಾಡುತ್ತಿದೆ ಎಂದು ಕೇಂದ್ರ ತಿಳಿಸಿದೆ.
ಇತ್ತೀಚೆಗಷ್ಟೇ ಅಕ್ಟೋಬರ್ ತಿಂಗಳಿನಲ್ಲಿಯೂ ಕೇಂದ್ರವು ರೋಜ್ಗಾರ್ ಮೇಳದಡಿ 75 ಸಾವಿರ ಅಭ್ಯರ್ಥಿಗಳಿಗೆ ನೇಮಕಾತಿ ಪತ್ರ ನೀಡಿರುವುದು ಗೊತ್ತೇ ಇದೆ. ನಾಳೆ ದೇಶದಾದ್ಯಂತ 45 ಸ್ಥಳಗಳಲ್ಲಿ ನೇಮಕಾತಿ ಪತ್ರಗಳನ್ನು ಭೌತಿಕವಾಗಿ ಹಸ್ತಾಂತರಿಸಲಾಗುವುದು. ಶೀಘ್ರದಲ್ಲೇ ವಿಧಾನಸಭಾ ಚುನಾವಣೆ ನಡೆಯಲಿರುವ ಗುಜರಾತ್ ಮತ್ತು ಹಿಮಾಚಲ ಪ್ರದೇಶ ರಾಜ್ಯಗಳನ್ನು ಹೊರತುಪಡಿಸಿ ದೇಶಾದ್ಯಂತ ಈ ಕಾರ್ಯಕ್ರಮ ನಡೆಯಲಿದೆ.
ಚುನಾವಣಾ ನೀತಿ ಸಂಹಿತೆ ಜಾರಿಯಿಂದಾಗಿ ಅಲ್ಲಿ ಯಾವುದೇ ಹೊಸ ಅಭಿವೃದ್ಧಿ ಕಾರ್ಯಕ್ರಮಗಳನ್ನು ಕೈಗೊಳ್ಳಲು ಅಥವಾ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಸಾಧ್ಯವಾಗದ ಕಾರಣ ಕೇಂದ್ರವು ಈ ಕಾರ್ಯಕ್ರಮದಿಂದ ಆ ಎರಡು ರಾಜ್ಯಗಳಿಗೆ ವಿನಾಯಿತಿ ನೀಡಿದೆ.
ಈ ಹಿಂದೆ ಭರ್ತಿ ಮಾಡಿದ ಹುದ್ದೆಗಳ ಜೊತೆಗೆ ಶಿಕ್ಷಕರು, ಉಪನ್ಯಾಸಕರು, ನರ್ಸ್ಗಳು, ನರ್ಸಿಂಗ್ ಅಧಿಕಾರಿಗಳು, ವೈದ್ಯರು, ಫಾರ್ಮಾಸಿಸ್ಟ್ಗಳು, ರೇಡಿಯೋಗ್ರಾಫರ್ಗಳು, ತಾಂತ್ರಿಕ ಮತ್ತು ಅರೆವೈದ್ಯಕೀಯ ಹುದ್ದೆಗಳನ್ನು ಸಹ ಭರ್ತಿ ಮಾಡಲಾಗುತ್ತಿದೆ. ಇದಲ್ಲದೆ, ಕೇಂದ್ರ ಗೃಹ ಸಚಿವಾಲಯದ ಅಡಿಯಲ್ಲಿ ವಿವಿಧ ರಾಷ್ಟ್ರೀಯ ಸಶಸ್ತ್ರ ಪೊಲೀಸ್ ಪಡೆಗಳಲ್ಲಿ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ ಎಂದು ಕೇಂದ್ರವು ಬಹಿರಂಗಪಡಿಸಿದೆ.
ಇದನ್ನೂ ಓದಿ: Rasna founder passes away: ಜನಪ್ರಿಯ ‘ರಸ್ನಾ’ ಸಂಸ್ಥಾಪಕ ಅರೀಜ್ ಖಂಬಟ್ಟ ಇನ್ನಿಲ್ಲ
ಕರ್ಮಯೋಗಿ ಪರಿಚಯಾತ್ಮಕ ಮಾಡ್ಯೂಲ್:
ಹೊಸದಾಗಿ ನೇಮಕಗೊಂಡ ಉದ್ಯೋಗಿಗಳು ನಿಧಿ ನಿರ್ವಹಣೆಯಲ್ಲಿ ಹೇಗೆ ವರ್ತಿಸಬೇಕು, ಅವರು ತಮ್ಮ ವೃತ್ತಿಪರ ಕೌಶಲ್ಯಗಳನ್ನು ಹೇಗೆ ಅಭಿವೃದ್ಧಿಪಡಿಸಬೇಕು, ಅವರ ಕೆಲಸಕ್ಕೆ ಸಂಬಂಧಿಸಿದ ಕರ್ತವ್ಯಗಳು ಮತ್ತು ನಿಬಂಧನೆಗಳು ಯಾವುವು? ಯಾವ ರೀತಿಯ ಪ್ರಯೋಜನಗಳು (ಉದ್ಯೋಗಿಗಳ ಪ್ರಯೋಜನಗಳು) ಅನ್ವಯವಾಗುತ್ತವೆ, ಹೊಸ ಕೌಶಲ್ಯಗಳನ್ನು ಹೇಗೆ ಕಲಿಯುವುದು ಇತ್ಯಾದಿಗಳ ಬಗ್ಗೆ ಜ್ಞಾನವನ್ನು ಹೆಚ್ಚಿಸಲು ಕರ್ಮಯೋಗಿಯ ಪರಿಚಯಾತ್ಮಕ ಮಾಡ್ಯೂಲ್ ಎಂಬ ಕೋರ್ಸ್ ಮೂಲಕ ಆನ್ಲೈನ್ ಜಾಗೃತಿಯನ್ನು ಕರ್ಮಯೋಗಿ ನೀಡುತ್ತದೆ. ಆನ್ಲೈನ್ ಪೋರ್ಟಲ್ igotkarmayogi.gov.in ಯಾರಾದರೂ ಹೊಸ ಕೌಶಲ್ಯಗಳನ್ನು ಕಲಿಯಲು ಅನುವು ಮಾಡಿಕೊಡುತ್ತದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.