ಪಾಟ್ನಾ: ಮಾಜಿ ಸಚಿವ ಆದಿತ್ಯ ಠಾಕ್ರೆ ಗುರುವಾರ ಬಿಹಾರ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರನ್ನು ಪಾಟ್ನಾದಲ್ಲಿರುವ ತಾಯಿ ರಾಬ್ರಿ ದೇವಿ ಅವರ ನಿವಾಸದಲ್ಲಿ ಭೇಟಿಯಾದರು.
ಶಿವಸೇನಾ ಮುಖಂಡರೊಂದಿಗೆ ಪಕ್ಷದ ಸಂಸದೆ ಪ್ರಿಯಾಂಕಾ ಚತುರ್ವೇದಿ ಇದ್ದರು. ಇಲ್ಲಿ ನಡೆದ ಸಭೆಯ ನಂತರ ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದ ಆದಿತ್ಯ ಠಾಕ್ರೆ, "ನಾವು ಪರಸ್ಪರ ಸಂಪರ್ಕದಲ್ಲಿದ್ದೆವು ಆದರೆ ಕೋವಿಡ್‌ನಿಂದ ಭೇಟಿಯಾಗಲು ಸಾಧ್ಯವಾಗಲಿಲ್ಲ. ನಾವು ವಿವಿಧ ವಿಷಯಗಳನ್ನು ಚರ್ಚಿಸಿದ್ದೇವೆ ಆದರೆ ರಾಜಕೀಯದ ಬಗ್ಗೆ ಚರ್ಚಿಸಲಿಲ್ಲ. ಈ ಸ್ನೇಹವು ಮುಂದುವರಿಯುತ್ತದೆ" ಎಂದು ಹೇಳಿದರು.
ಇದನ್ನೂ ಓದಿ: Virat Kohli: ಈ ಸ್ಟಾರ್ ಆಟಗಾರನಿಂದ ವಿರಾಟ್ ಕೊಹ್ಲಿಗೆ ಬೆದರಿಕೆ!
ಇಬ್ಬರು ಯುವ ನಾಯಕರ ನಡುವಿನ ಸಭೆಯು 2024 ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಎದುರಿಸಲು ವಿರೋಧ ಪಕ್ಷಗಳನ್ನು ಒಗ್ಗೂಡಿಸುವ ಪ್ರಯತ್ನವಾಗಿದೆ. "ಕಾನೂನು ಮತ್ತು ಪ್ರಜಾಪ್ರಭುತ್ವವನ್ನು ಉಳಿಸುವುದು ಪ್ರಸ್ತುತ ಸವಾಲು ಮತ್ತು ಅದನ್ನು ಉಳಿಸಲು ನಾವು ಏನು ಬೇಕಾದರೂ ಮಾಡುತ್ತೇವೆ" ಎಂದು ಆದಿತ್ಯ ಠಾಕ್ರೆ ಅವರನ್ನು ಭೇಟಿಯಾದ ನಂತರ ತೇಜಸ್ವಿ ಯಾದವ್ ಹೇಳಿದರು.
Patna, Bihar | We've been in touch with each other but could not meet due to covid. We discussed various topics but did not discuss politics. Sure this friendship will continue: Shiv Sena leader (Uddhav Thackeray) leader Aditya Thackeray after meeting Bihar Dy CM Tejashwi Yadav pic.twitter.com/WTq1xd59fx
— ANI (@ANI) November 23, 2022
ಇತ್ತೀಚೆಗೆ, ಆದಿತ್ಯ ಠಾಕ್ರೆ ಅವರು ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಭಾರತ್ ಜೋಡೋ ಯಾತ್ರೆಯಲ್ಲಿ ಭಾಗವಹಿಸಿದ್ದರು. ಈ ಹಿಂದೆ, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಕೂಡ ಕೇಸರಿ ಪಕ್ಷದ ವಿರುದ್ಧ ವಿರೋಧ ಪಕ್ಷಗಳನ್ನು ಒಗ್ಗೂಡಿಸುವ ಉಪಕ್ರಮವನ್ನು ಕೈಗೊಂಡಿದ್ದರು.
ಇದನ್ನೂ ಓದಿ : Mangaluru auto blast : ನಾಳೆ ಮಂಗಳೂರಿಗೆ ಗೃಹ ಸಚಿವರ ಭೇಟಿ, ಹಿರಿಯ ಅಧಿಕಾರಿಗಳ ಜೊತೆ ಸಭೆ
ಸೆಪ್ಟೆಂಬರ್‌ನಲ್ಲಿ ತಮ್ಮ ಕೊನೆಯ ದೆಹಲಿ ಭೇಟಿಯ ಸಂದರ್ಭದಲ್ಲಿ, ನಿತೀಶ್ ಕುಮಾರ್ ಅವರು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಸಮಾಜವಾದಿ ಪಕ್ಷದ ನಾಯಕರಾದ ದಿವಂಗತ ಮುಲಾಯಂ ಸಿಂಗ್ ಯಾದವ್ ಮತ್ತು ಅಖಿಲೇಶ್ ಯಾದವ್, ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಭೇಟಿಯಾದರು.
ಬಿಹಾರದಲ್ಲಿ 'ಮಹಾಘಟಬಂಧನ್' ಸರ್ಕಾರವನ್ನು ರಚಿಸಲು ಬಿಜೆಪಿಯೊಂದಿಗಿನ ಮೈತ್ರಿ ಮುರಿದುಕೊಂಡು ಮತ್ತು ತೇಜಸ್ವಿ ಯಾದವ್ ಅವರ ರಾಷ್ಟ್ರೀಯ ಜನತಾ ದಳ, ಕಾಂಗ್ರೆಸ್ ಮತ್ತು ಇತರ ಪಕ್ಷಗಳೊಂದಿಗೆ ಕೈಜೋಡಿಸಿದ ನಂತರ ಕುಮಾರ್ ಅವರು ವಿರೋಧ ಪಕ್ಷದ ನಾಯಕರನ್ನು ಭೇಟಿಯಾದರು.
ಈ ಹಿಂದೆ ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಅವರು ಬಿಹಾರಕ್ಕೆ ಭೇಟಿ ನೀಡಿ ನಿತೀಶ್ ಕುಮಾರ್ ಮತ್ತು ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಅವರನ್ನು ಪ್ರತಿಪಕ್ಷಗಳ ಒಗ್ಗಟ್ಟಿನ ಪ್ರಯತ್ನದ ಭಾಗವಾಗಿ ಭೇಟಿ ಮಾಡಿದ್ದರು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.