"ಆಕ್ಸಿಡೆಂಟ್ ಆದ ವಾಹನಗಳನ್ನ 24 ಗಂಟೆಯೊಳಗೆ ಪರಿಶೀಲಿಸಿ  ಮಾಲೀಕರಿಗೆ ವಾಪಸ್ ನೀಡಬೇಕು"

 ಅಪಘಾತವಾಗಿರುವ ವಾಹನಗಳನ್ನ‌ ಇನ್ನು ಮುಂದೆ ಸಂಚಾರಿ ಪೊಲೀಸ್ ಠಾಣೆಗಳ ಮುಂದೆ ತಿಂಗಳುಗಟ್ಟಲೇ ಇರಿಸಿಕೊಳ್ಳುವಂತಿಲ್ಲ. ತಪಾಸಣೆ ನೆಪದಲ್ಲಿ ಠಾಣೆಗಳ ಮುಂದೆ ವಾಹನ ಇರಿಸಿಕೊಳ್ಳುವುದು ಸರಿಯಲ್ಲ. ಆ್ಯಕ್ಸಿಡೆಂಟ್ ಆದ ವಾಹನಗಳನ್ನ 24 ಗಂಟೆಯೊಳಗೆ ಅಧಿಕಾರಿಗಳಿಂದ ವರದಿ ತರಿಸಿಕೊಂಡು ಮಾಲೀಕರಿಗೆ ಹಿಂತಿರುಗಿಸಲಾಗುವುದು ನಗರ ಸಂಚಾರ ವಿಭಾಗದ ವಿಶೇಷ ಆಯುಕ್ತ ಎಂ.ಎ.ಸಲೀಂ ತಿಳಿಸಿದ್ದಾರೆ‌.‌‌

Written by - VISHWANATH HARIHARA | Edited by - Manjunath N | Last Updated : Dec 7, 2022, 09:09 PM IST
  • ನಗರದಲ್ಲಿ ಹಂಪ್ ಗಳಿಂದ ಆ್ಯಕ್ಸಿಡೆಂಟ್ ಜಾಸ್ತಿ ಆಗ್ತಿತ್ತು..
  • ಹೀಗಾಗಿ ಎಲ್ಲೆಲ್ಲಿ ಅವೈಜ್ಞಾನಿಕ ಹಂಪ್‌ಗಳು ಹಾಗೂ ಅನಾವಶ್ಯಕ ಹಂಪ್ ಗಳಿದ್ದರೆ ತೆಗೆಯುವುದಕ್ಕೆ ಹೇಳಲಾಗಿದೆ.
  • ಜೊತೆಗೆ ಸಿಗ್ನಲ್ ಗಳ ಬಳಿ ಇರುವ ಹಂಪ್ ಗಳನ್ನ ತೆಗೆಸಲು ಕ್ರಮ ಕೈಗೊಳ್ಳಲಾಗುತ್ತಿದೆ.
"ಆಕ್ಸಿಡೆಂಟ್ ಆದ ವಾಹನಗಳನ್ನ 24 ಗಂಟೆಯೊಳಗೆ ಪರಿಶೀಲಿಸಿ  ಮಾಲೀಕರಿಗೆ ವಾಪಸ್ ನೀಡಬೇಕು" title=
screengrab

ಬೆಂಗಳೂರು: ಅಪಘಾತವಾಗಿರುವ ವಾಹನಗಳನ್ನ‌ ಇನ್ನು ಮುಂದೆ ಸಂಚಾರಿ ಪೊಲೀಸ್ ಠಾಣೆಗಳ ಮುಂದೆ ತಿಂಗಳುಗಟ್ಟಲೇ ಇರಿಸಿಕೊಳ್ಳುವಂತಿಲ್ಲ. ತಪಾಸಣೆ ನೆಪದಲ್ಲಿ ಠಾಣೆಗಳ ಮುಂದೆ ವಾಹನ ಇರಿಸಿಕೊಳ್ಳುವುದು ಸರಿಯಲ್ಲ. ಆ್ಯಕ್ಸಿಡೆಂಟ್ ಆದ ವಾಹನಗಳನ್ನ 24 ಗಂಟೆಯೊಳಗೆ ಅಧಿಕಾರಿಗಳಿಂದ ವರದಿ ತರಿಸಿಕೊಂಡು ಮಾಲೀಕರಿಗೆ ಹಿಂತಿರುಗಿಸಲಾಗುವುದು ನಗರ ಸಂಚಾರ ವಿಭಾಗದ ವಿಶೇಷ ಆಯುಕ್ತ ಎಂ.ಎ.ಸಲೀಂ ತಿಳಿಸಿದ್ದಾರೆ‌.‌‌

ಅಪಘಾತ ಪ್ರಕರಣಗಳಲ್ಲಿ ವಾಹನಗಳನ್ನ ವಶಪಡಿಸಿಕೊಂಡು ಠಾಣೆಗಳ‌ ಮುಂದೆ ನಿಲ್ಲಿಸಲಾಗುತ್ತಿದೆ‌. ಠಾಣೆಗಳ ಮುಂದೆ ಹೆಚ್ಚಿನ ಸಂಖ್ಯೆಯಲ್ಲಿ ವಾಹನ ನಿಲ್ಲಿಸಲಾಗುತ್ತಿದ್ದು ಇದರಿಂದ ಸೌಂದರ್ಯಕ್ಕೆ ಧಕ್ಕೆಯಾಗುತ್ತಿದೆ‌‌. ಹೀಗಾಗಿ ಆಕ್ಸಿಡೆಂಟ್ ಆಗಿರುವ ಅಥವಾ ಅಪಘಾತ ಮಾಡಿರುವ ವಾಹನಗಳನ್ನ ಆರ್ ಟಿಓ‌ ಅಧಿಕಾರಿಗಳಿಂದ ತ್ವರಿತವಾಗಿ ತಪಾಸಣೆ ನಡೆಸಲು ಕ್ರಮ ಕೈಗೊಳ್ಳಲಾಗುವುದು.. ತಾಂತ್ರಿಕವಾಗಿ ವಾಹನಗಳಲ್ಲಿ ದೋಷವಿದೆಯಾ ಎಂಬುದನ್ನು ಪತ್ತೆ ಹಚ್ಚಿ  ಅಧಿಕಾರಿಗಳು ವರದಿ ತರಿಸಿ ಬಳಿಕ‌ ಸಂಬಂಧಪಟ್ಟ ಮಾಲೀಕರನ್ನ ಕರೆಯಿಸಿ ಅವರಿಂದ ಮುಚ್ಚಳಿಕೆ ಬರೆಯಿಸಿ ಹಿಂತಿರುಗಿಸಲಾಗುವುದು ಎಂದಿದ್ದಾರೆ.

ನಗರದಲ್ಲಿ ಹಂಪ್ ಗಳಿಂದ ಆ್ಯಕ್ಸಿಡೆಂಟ್ ಜಾಸ್ತಿ ಆಗ್ತಿತ್ತು.. ಹೀಗಾಗಿ ಎಲ್ಲೆಲ್ಲಿ ಅವೈಜ್ಞಾನಿಕ ಹಂಪ್‌ಗಳು ಹಾಗೂ ಅನಾವಶ್ಯಕ ಹಂಪ್ ಗಳಿದ್ದರೆ ತೆಗೆಯುವುದಕ್ಕೆ ಹೇಳಲಾಗಿದೆ. ಜೊತೆಗೆ ಸಿಗ್ನಲ್ ಗಳ ಬಳಿ ಇರುವ ಹಂಪ್ ಗಳನ್ನ ತೆಗೆಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಅವಶ್ಯಕತೆ ಇರುವ ಕಡೆ ರಬ್ಬರ್ ಹಂಪ್ ಹಾಕಲು ಸೂಚಿಸಲಾಗಿದೆ. ಸವಾರರ ಸುರಕ್ಷತೆ ದೃಷ್ಟಿಯಿಂದ ಈ ರೀತಿ ಮಾಡಲಾಗುತ್ತಿದೆ. ಬಿಬಿಎಂಪಿ ಅಧಿಕಾರಿಗಳ ಜೊತೆ ಚರ್ಚಿಸಿದ್ದು ಕೆಲಸ ಶುರು ಮಾಡಿದ್ದಾರೆ ಎಂದು ಮಾಹಿತಿ ನೀಡಿದರು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

 

Trending News