Gujarat Election Results 2022 live updates- ಗುಜರಾತ್‌ನಲ್ಲಿ ಗೆದ್ದು ಬೀಗಿದ BJP: ಡಿ.12 ರಂದು ಸಿಎಂ ಪ್ರಮಾಣ ವಚನ

Gujarat Assembly Election Result 2022: ನಿಮ್ಮ ನೆಚ್ಚಿನ ಜೀ ಕನ್ನಡ ನ್ಯೂಸ್‌ನಲ್ಲಿ ಗುಜರಾತ್ ವಿಧಾನಸಭಾ ಚುನಾವಣೆ ಫಲಿತಾಂಶಕ್ಕೆ ಸಂಬಂಧಿಸಿದ ಇತ್ತೀಚಿನ ಅಪ್‌ಡೇಟ್‌ಗಳ ಸಂಪೂರ್ಣ ಮಾಹಿತಿ...

Written by - Yashaswini V | Last Updated : Dec 8, 2022, 04:33 PM IST
Gujarat Election Results 2022 live updates- ಗುಜರಾತ್‌ನಲ್ಲಿ ಗೆದ್ದು ಬೀಗಿದ BJP: ಡಿ.12 ರಂದು ಸಿಎಂ ಪ್ರಮಾಣ ವಚನ
Live Blog

Gujarat Assembly Election Result 2022:  ಗುಜರಾತ್‌ನ 33 ಜಿಲ್ಲೆಗಳ 182 ವಿಧಾನಸಭಾ ಸ್ಥಾನಗಳಿಗೆ ಡಿಸೆಂಬರ್ 1 ಮತ್ತು ಡಿಸೆಂಬರ್ 5 ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆದಿತ್ತು. ಗುಜರಾತ್‌ನ ಅಸೆಂಬ್ಲಿ ಎಲೆಕ್ಷನ್ನಲ್ಲಿ ಈ ವರ್ಷ ಶೇ.66.31ರಷ್ಟು ಮತದಾನವಾಗಿದೆ.  ಇಂದು ಬಹು ನಿರೀಕ್ಷಿತ ಗುಜರಾತ್ ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರಬೀಳಲಿದೆ.  182 ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆಗಾಗಿ  37 ಎಣಿಕೆ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಗುಜರಾತ್ ವಿಧಾನಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ಬೆಳಿಗ್ಗೆ 8 ಗಂಟೆಯಿಂದ ಆರಂಭವಾಗಿದೆ. ನೀವು ಗುಜರಾತ್ ಅಸೆಂಬ್ಲಿ ಚುನಾವಣಾ ಫಲಿತಾಂಶದ ಲೈವ್ ಅಪ್‌ಡೇಟ್‌ಗಳು ಮತ್ತು ಗುಜರಾತ್ ವಿಧಾನಸಭಾ ಚುನಾವಣಾ ಫಲಿತಾಂಶಗಳ ಎಲ್ಲಾ ಪ್ರಮುಖ ವಿವರಗಳನ್ನು ನಿಮ್ಮ ನೆಚ್ಚಿನ ಜೀ ಕನ್ನಡ ನ್ಯೂಸ್‌ನಲ್ಲಿ ತ್ವರಿತವಾಗಿ ಪಡೆಯಿರಿ.

ಈ ಬಾರಿಯ ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ, ಕಾಂಗ್ರೆಸ್, ಆಮ್ ಆದ್ಮಿ ಪಕ್ಷಗಳ ಹೊರತಾಗಿ ಹಲವಾರು ಇತರ ಪಕ್ಷಗಳು ಕೆಲವು ಪ್ರಮುಖ ಕ್ಷೇತ್ರಗಳಿಂದ ಸ್ಪರ್ಧಿಸಿವೆ.  ಗುಜರಾತ್ ವಿಧಾನಸಭೆಯ ಸ್ಥಾನಗಳಿಗೆ ಸ್ಪರ್ಧಿಸಿರುವ ಪ್ರಮುಖ ಪಕ್ಷಗಳೆಂದರೆ...

8 December, 2022

  • 16:32 PM

    ಪ್ರಧಾನಿ ನೇತೃತ್ವದಲ್ಲಿ ಗುಜರಾತ್‌ನಲ್ಲಿ ಬಿಜೆಪಿ ಹೊಸ ಇತಿಹಾಸ ಸೃಷ್ಟಿಸಿದೆ. ಬಿಜೆಪಿಯಿಂದ ನಿರೀಕ್ಷೆಗೂ ಮೀರಿದ ಗೆಲುವು ಸಿಕ್ಕಿದೆ ಎಂದು ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಹೇಳಿದ್ದಾರೆ.

  • 15:15 PM

    ಗಾಂಧಿಧಾಮದ ಕಾಂಗ್ರೆಸ್ ಅಭ್ಯರ್ಥಿ ಮತ ಎಣಿಕೆ ವೇಳೆ ಕುತ್ತಿಗೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಅಲ್ಲಿದ್ದವರು ಅಭ್ಯರ್ಥಿಯನ್ನು ರಕ್ಷಿಸಿದ್ದಾರೆ.

  • 13:49 PM

    Gujarat State BJP Chief CR Patil : ಡಿಸೆಂಬರ್ 12 ರಂದು ಮಧ್ಯಾಹ್ನ 2 ಗಂಟೆಗೆ ಗುಜರಾತ್ ಸಿಎಂ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಪ್ರಮಾಣ ವಚನ ಸಮಾರಂಭದಲ್ಲಿ ಪ್ರಧಾನಿ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಪಾಲ್ಗೊಳ್ಳಲಿದ್ದಾರೆ ಎಂದು ಗುಜರಾತ್‌ ರಾಜ್ಯ ಬಿಜೆಪಿ ಮುಖ್ಯಸ್ಥ ಸಿಆರ್ ಪಾಟೀಲ್ ಹೇಳಿದ್ದಾರೆ.

     

     

  • 13:44 PM

    Gujarat CM Bhupendra Patel: ಗುಜರಾತ್ ಚುನಾವಣೆಯ ಫಲಿತಾಂಶಗಳು ಸ್ಪಷ್ಟವಾಗಿವೆ. ಗುಜರಾತ್‌ನಲ್ಲಿ ಅಭಿವೃದ್ಧಿಯ ಪಯಣವನ್ನು ಮತ್ತಷ್ಟು ಮುಂದುವರಿಸಲು ಜನರು ಆಶಿಸಿದ್ದಾರೆ. ನಾವು ಜನರ ಆದೇಶವನ್ನು ನಮ್ರತೆಯಿಂದ ಸ್ವೀಕರಿಸುತ್ತೇವೆ. ಬಿಜೆಪಿಯ ಪ್ರತಿಯೊಬ್ಬ ಕಾರ್ಯಕರ್ತ ಸಾರ್ವಜನಿಕ ಸೇವೆಗೆ ಬದ್ಧ ಎಂದು ಗುಜರಾತ್ ಸಿಎಂ ಭೂಪೇಂದ್ರ ಪಟೇಲ್ ಹೇಳಿದ್ದಾರೆ. 

     

     

  • 13:31 PM

    Bhupendrabhai Patel : ಸಿಎಂ ಭೂಪೇಂದ್ರ ಪಟೇಲ್ ಘಟ್ಲೋಡಿಯಾ ಕ್ಷೇತ್ರದಲ್ಲಿ ಗೆಲುವಿನ ನಗೆ ಬೀರಿದ್ದಾರೆ. ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಗಾಂಧಿನಗರದಲ್ಲಿರುವ ಬಿಜೆಪಿ ಕೇಂದ್ರ ಕಚೇರಿಗೆ ಆಗಮಿಸಿದ್ದಾರೆ. ಸಿಎಂ ಭೂಪೇಂದ್ರ ಪಟೇಲ್ ಅವರು ಗುಜರಾತ್ ಬಿಜೆಪಿ ಅಧ್ಯಕ್ಷ ಚಂದ್ರಕಾಂತ್ ರಘುನಾಥ್ ಪಾಟೀಲ್ ಜತೆ ಸೇರಿ ಶೀಘ್ರದಲ್ಲೇ ಸುದ್ದಿಗೋಷ್ಠಿ ನಡೆಸಲಿದ್ದಾರೆ.

  • 13:18 PM

    Karnataka CM Bommai : ಗುಜರಾತ್  ಚುನಾವಣಾ  ಫಲಿತಾಂಶ ಸುಶಾಸನದ ಫಲ. ಭಾಜಪ ಮುನ್ನಡೆಯಲ್ಲಿದ್ದು, ಈ ಬಾರಿಯೂ ಗುಜರಾತ್ ನಲ್ಲಿ ಅಭೂತಪೂರ್ವ ಗೆಲುವು ಸಾಧಿಸುತ್ತಿದೆ. ಕಳೆದ ಎಲ್ಲ ಚುನಾವಣೆಗಳಿಗಿಂತ ಅತಿ ಹೆಚ್ಚು ಸ್ಥಾನಗಳನ್ನು ಪಡೆದುಕೊಳ್ಳುತ್ತಿದ್ದೇವೆ. ಇದು ಚುನಾವಣೋತ್ತರ ಸಮೀಕ್ಷೆಯಲ್ಲಿಯೂ ತಿಳಿದು ಬಂದಿತ್ತು. ಒಂದು ರಾಜ್ಯದಲ್ಲಿ ಸುಶಾಸನ ತಂದರೆ ಜನ ಬೆಂಬಲ ಕೊಡುತ್ತಾರೆ. ಇದುವರೆಗೂ ದೇಶದಲ್ಲಿ ಆಡಳಿತ ವಿರೋಧ  ಟ್ರೆಂಡ್ ಇತ್ತು. ಗುಜರಾತ್ ಆಡಳಿತದ ಪರವಾಗಿದೆ ಎಂದು ನಿರೂಪಿಸಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

  • 12:45 PM

    ಗುಜರಾತ್ ಚುನಾವಣೆ ಫಲಿತಾಂಶ: 
    ಪ್ರಧಾನಿ ನೇತೃತ್ವದ ಯೋಜನೆಗಳು ಗುಜರಾತ್ ಫಲಿತಾಂಶ ಸಾಕ್ಷಿ- ಕರ್ನಾಟಕದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ 

    ಈ ಎರಡೂ ರಾಜ್ಯಗಳ ಮತದಾರರು ಜಾತಿ ಮತ್ತು ಧರ್ಮ ಆಧಾರಿತ ರಾಜಕೀಯ ಲೆಕ್ಕಾಚಾರಗಳನ್ನು ಮೀರಿ ರಾಜ್ಯದ ಹಾಗೂ ದೇಶದ ಅಭಿವೃದ್ಧಿ ಮುಖ್ಯ ಎಂಬುದನ್ನು ಎತ್ತಿ ತೋರಿಸಿದ್ದಾರೆ.  ಇದಕ್ಕಾಗಿ ನಾನು ಆ ರಾಜ್ಯಗಳ ಜನತೆಯನ್ನು ಹಾಗೂ ಮತದಾರರನ್ನು ಅಭಿನಂದಿಸುತ್ತೇನೆ.  

  • 12:41 PM

    ಗುಜರಾತ್ ಚುನಾವಣೆ ಫಲಿತಾಂಶ: 
    ಗುಜರಾತ್ ಚುನಾವಣೆ ಫಲಿತಾಂಶ ರಾಜ್ಯದ ಚುನಾವಣೆಗೆ ಬೂಸ್ಟರ್:  ಮಾಜಿ ಸಿಎಂ ಜಗದೀಶ್ ಶೆಟ್ಟರ್

  • 12:00 PM

    ವಿರಾಮಗಾಮ್‌ನಲ್ಲಿ  46,238 ಮತಗಳಿಂದ ಮುನ್ನಡೆ ಸಾಧಿಸಿದ ಬಿಜೆಪಿ ಅಭ್ಯರ್ಥಿ ಹಾರ್ದಿಕ್ ಪಟೇಲ್ 

    ಬೆಳಿಗ್ಗೆ 11:45 ರ ಸುಮಾರಿಗೆ ಬಿಜೆಪಿ ಅಭ್ಯರ್ಥಿ ಹಾರ್ದಿಕ್ ಪಟೇಲ್ 47% ಮತಗಳೊಂದಿಗೆ ಮುನ್ನಡೆ ಸಾಧಿಸಿದ್ದಾರೆ. ಎಎಪಿ ಅಭ್ಯರ್ಥಿ ಅಮರಸಿಂಹ ಅನಾದಜಿ 28% ಗಳಿಸಿ ಎರಡನೇ ಸ್ಥಾನದಲ್ಲಿದ್ದಾರೆ. ಮತ್ತೊಂದೆಡೆ, ಕಾಂಗ್ರೆಸ್ ಅಭ್ಯರ್ಥಿ ಭಾರವಾದ್ ಲಖಾಭಾಯ್ 18% ಮತಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದಾರೆ.

  • 11:31 AM

    ಗುಜರಾತ್ ಚುನಾವಣೆ ಫಲಿತಾಂಶ:  
    ಗುಜರಾತ್‌ನಲ್ಲಿ 5 ವಿಧಾನಸಭಾ ಕ್ಷೇತ್ರಗಳ ಫಲಿತಾಂಶ ಪ್ರಕಟವಾಗಿದ್ದು, ಈ ಪೈಕಿ ಬಿಜೆಪಿ 4 ಸ್ಥಾನಗಳಲ್ಲಿ ಜಯ ಸಾಧಿಸಿದ್ದರೆ, ಕಾಂಗ್ರೆಸ್ ಒಂದು ಸ್ಥಾನದಲ್ಲಿ ಜಯಭೇರಿ ಬಾರಿಸಿದೆ. 

  • 11:01 AM

    ಗುಜರಾತ್ ಚುನಾವಣೆ ಫಲಿತಾಂಶ:  ಇಸಿಐ ಟ್ರೆಂಡ್ ಪ್ರಕಾರ ಒಟ್ಟು 182 ಸ್ಥಾನಗಳಲ್ಲಿ 149 ಸ್ಥಾನಗಳಲ್ಲಿ ಬಿಜೆಪಿ ಮುನ್ನಡೆ 

    ಗಾಂಧಿನಗರದ ಬಿಜೆಪಿ ಕಛೇರಿಯಲ್ಲಿ ಸಂಭ್ರಮಾಚರಣೆ

  • 10:56 AM

    ಗುಜರಾತ್ ಚುನಾವಣೆ ಫಲಿತಾಂಶ: ಇದು ಮತದಾನ ಇತಿಹಾಸದಲ್ಲಿ ಇದುವರೆಗಿನ ಅತಿದೊಡ್ಡ ದಾಖಲೆ- ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ 
    ಗುಜರಾತ್ ಮಾದರಿಯನ್ನು 2000-2001 ರಿಂದ ಜನರು ಅನುಮೋದಿಸಿದ್ದಾರೆ ಮತ್ತು ಸ್ವೀಕರಿಸಿದ್ದಾರೆ. ರಾಷ್ಟ್ರದ ಮುಂದೆ ನಾವು ಪ್ರಸ್ತುತಪಡಿಸುತ್ತಿರುವ ಮಾದರಿಯನ್ನು ಸ್ವೀಕರಿಸಲಾಗುತ್ತಿದೆ. ನಾನು ಗುಜರಾತ್ ಜನತೆ ಮತ್ತು ಬಿಜೆಪಿಯನ್ನು ಅಭಿನಂದಿಸುತ್ತೇನೆ. ಇದು ಮತದಾನ ಇತಿಹಾಸದಲ್ಲಿ ಇದುವರೆಗಿನ ಅತಿದೊಡ್ಡ ದಾಖಲೆಯಾಗಿದೆ: ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ 

     

  • 10:55 AM

    ಗುಜರಾತ್ ಚುನಾವಣೆ ಫಲಿತಾಂಶ:  ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಮೇಲೆ ಜನರಿಗೆ ಅಪಾರ ನಂಬಿಕೆ ಇದೆ- ಕೇಂದ್ರ ಸಚಿವ ರಾಜನಾಥ್ ಸಿಂಗ್ 
    ಗುಜರಾತ್‌ನಲ್ಲಿ ಅಧಿಕಾರದ ಪರ ಇದೆ. ಗುಜರಾತ್‌ನಲ್ಲಿ ನಾವು ಹೊಸ ದಾಖಲೆಯನ್ನು ರಚಿಸುತ್ತಿದ್ದೇವೆ ಏಕೆಂದರೆ ರಾಜ್ಯದ ಜನರು ಪ್ರಧಾನಿ ಮೋದಿಯವರ ಮೇಲೆ ಅಪಾರ ನಂಬಿಕೆ ಹೊಂದಿದ್ದಾರೆ: ಗುಜರಾತ್‌ನಲ್ಲಿ ಬಿಜೆಪಿ ಸ್ಪಷ್ಟ ಮುನ್ನಡೆ ಸಾಧಿಸುತ್ತಿರುವ ಬಗ್ಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್

     

  • 10:29 AM

    ಗುಜರಾತ್ ಚುನಾವಣೆ ಫಲಿತಾಂಶ: 
    ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಹಾರ್ದಿಕ್ ಪಟೇಲ್ ವಿರಾಮಗಾಮ್ ಕ್ಷೇತ್ರದಲ್ಲಿ 3099 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ. ಗಾಂಧಿನಗರ ದಕ್ಷಿಣ ಕ್ಷೇತ್ರದಲ್ಲಿ ಐದು ಸುತ್ತುಗಳಲ್ಲಿ ಬಿಜೆಪಿಯ ಅಲ್ಪೇಶ್ ಠಾಕೂರ್ 4130 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ.

    ಇಸಿಐ ಟ್ರೆಂಡ್‌ಗಳ ಪ್ರಕಾರ #ಗುಜರಾತ್‌ನ ಜಾಮ್‌ನಗರ ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ರಿವಾಬಾ ಜಡೇಜಾ ಈಗ ಮುನ್ನಡೆ ಸಾಧಿಸಿದ್ದಾರೆ.

  • 10:15 AM

    ಗುಜರಾತ್ ಚುನಾವಣೆ ಫಲಿತಾಂಶ: 
    ಭಾರತದ ಕ್ರಿಕೆಟಿಗ ರವೀಂದ್ರ ಜಡೇಜಾ ಅವರ ಪತ್ನಿ ರಿವಾಬಾ ಜಡೇಜಾ ಅವರು ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಜಾಮ್‌ನಗರ ಉತ್ತರ ಕ್ಷೇತ್ರದಿಂದ ಎರಡನೇ ಸುತ್ತಿನ ನಂತರ 8671 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ.

  • 10:14 AM

    ಗುಜರಾತ್ ಚುನಾವಣೆ ಫಲಿತಾಂಶ: 
    ಗುಜರಾತ್ ಮತ ಎಣಿಕೆ ನೇರಪ್ರಸಾರ: ಅತಿ ವೇಗದ ಚುನಾವಣಾ ಫಲಿತಾಂಶಗಳ ಲೈವ್ ಅಪ್‌ಡೇಟ್‌
    ಭಾರಿ ಬಹುಮತದೊಂದಿಗೆ ಮುನ್ನುಗ್ಗುತ್ತಿರುವ ಬಿಜೆಪಿ 

  • 09:53 AM

    ಗುಜರಾತ್ ಚುನಾವಣೆ ಫಲಿತಾಂಶ: 
    ಖಂಭಾಲಿಯಾದಲ್ಲಿ ಎಎಪಿಯ ಇಸುದನ್ ಗಧ್ವಿ ಮುನ್ನಡೆ:-

    ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಕಣದಲ್ಲಿರುವ ಇಸುದನ್ ಗಧ್ವಿ ಖಂಭಾಲಿಯಾದಲ್ಲಿ 52.01% ಮತಗಳೊಂದಿಗೆ ಮುನ್ನಡೆ ಸಾಧಿಸಿದ್ದಾರೆ. ಆರಂಭಿಕ ಪ್ರವೃತ್ತಿಗಳ ಪ್ರಕಾರ ಖಂಭಾಲಿಯಾದಲ್ಲಿ ಬಿಜೆಪಿ ಎರಡನೇ ಸ್ಥಾನದಲ್ಲಿದೆ ಮತ್ತು ಕಾಂಗ್ರೆಸ್ ಮೂರನೇ ಸ್ಥಾನದಲ್ಲಿದೆ. 

    EC

  • 09:15 AM

    ಗುಜರಾತ್ ಚುನಾವಣೆ ಫಲಿತಾಂಶ: 
    ಗುಜರಾತ್ ವಿಧಾನಸಭಾ ಚುನಾವಣೆಯ ಆರಂಭಿಕ ಟ್ರೆಂಡ್‌ಗಳಲ್ಲಿ ಭಾರತೀಯ ಜನತಾ ಪಕ್ಷ 122 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಅದೇ ಸಮಯದಲ್ಲಿ ಕಾಂಗ್ರೆಸ್ ಪಕ್ಷ 56 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದರೆ, ಆಮ್ ಆದ್ಮಿ ಪಕ್ಷ (ಎಎಪಿ) 3 ಮತ್ತು ಇತರರು 1 ಸ್ಥಾನದಲ್ಲಿ ಮುನ್ನಡೆ ಸಾಧಿಸಿದ್ದಾರೆ.

  • 08:55 AM

    ಗುಜರಾತ್ ಚುನಾವಣೆ ಫಲಿತಾಂಶ: 
    ವಿರಾಮಗಾಮ್‌ ಕ್ಷೇತ್ರದಲ್ಲಿ  ಎಎಪಿ ಅಭ್ಯರ್ಥಿಯನ್ನು ಹಿಂದಿಕ್ಕಿ ಮುನ್ನಡೆ ಸಾಧಿಸಿದ ಬಿಜೆಪಿ ಅಭ್ಯರ್ಥಿ ಹಾರ್ದಿಕ್ ಪಟೇಲ್. 

  • 08:50 AM

    ಗುಜರಾತ್ ಚುನಾವಣೆ ಫಲಿತಾಂಶ: 
    ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಜಾಮ್‌ನಗರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಟೀಂ ಇಂಡಿಯಾ ಕ್ರಿಕೆಟಿಗ ರವೀಂದ್ರ ಜಡೇಜಾ ಅವರ ಪತ್ನಿ ರಿವಾಬಾ ಜಡೇಜಾ ಆರಂಭಿಕ ಟ್ರೆಂಡ್‌ಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ.

  • 08:37 AM

    ಗುಜರಾತ್ ಚುನಾವಣೆ ಫಲಿತಾಂಶ: 
    ಗುಜರಾತ್ ವಿಧಾನಸಭೆ ಚುನಾವಣೆಯ ಆರಂಭಿಕ ಟ್ರೆಂಡ್‌ಗಳಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ)  123 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಕಾಂಗ್ರೆಸ್ ಪಕ್ಷ 42 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದರೆ, ಆಮ್ ಆದ್ಮಿ ಪಕ್ಷ (ಎಎಪಿ) 3 ಮತ್ತು ಇತರರು 1 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ.

  • 08:33 AM

    ಗುಜರಾತ್ ಚುನಾವಣೆ ಫಲಿತಾಂಶ: 
    ಇಂದು ಮತ ಎಣಿಕೆ ನಡೆಯುತ್ತಿದೆ. ಜನರ ಆಶೀರ್ವಾದದಿಂದ ಬಹುಮತದಿಂದ ಗೆಲ್ಲುತ್ತೇವೆ: ಬಾಬೂಜಿ ಠಾಕೂರ್, ಮಾನಸಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ 

  • 08:28 AM

    ಗುಜರಾತ್ ಚುನಾವಣೆ ಫಲಿತಾಂಶ: 
    ಗುಜರಾತ್ ವಿಧಾನಸಭಾ ಚುನಾವಣೆಯ ಆರಂಭಿಕ ಟ್ರೆಂಡ್‌ಗಳಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮುನ್ನಡೆ ಸಾಧಿಸಿದೆ. ಬಿಜೆಪಿ 20 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದರೆ, ಕಾಂಗ್ರೆಸ್ 7 ಮತ್ತು ಆಮ್ ಆದ್ಮಿ ಪಕ್ಷ (ಎಎಪಿ) 2 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.

  • 08:27 AM

    ಗುಜರಾತ್ ಚುನಾವಣೆ ಫಲಿತಾಂಶ: 
    ಗುಜರಾತ್‌ನಲ್ಲಿ ಮತ ಎಣಿಕೆ ಪ್ರಾರಂಭವಾಗಿದೆ, ಗಾಂಧಿನಗರದ ಸರ್ಕಾರಿ ವಾಣಿಜ್ಯ ಕಾಲೇಜಿನ ದೃಶ್ಯಗಳು 

     

  • 08:23 AM

    ಗುಜರಾತ್ ಚುನಾವಣೆ ಫಲಿತಾಂಶ: 
    ಗುಜರಾತ್ ವಿಧಾನಸಭಾ ಚುನಾವಣೆಯ ಮತ ಎಣಿಕೆ ಬೆಳಿಗ್ಗೆ 8 ಗಂಟೆಯಿಂದ ಆರಂಭವಾಗಿದೆ. ಸುದ್ದಿ ಸಂಸ್ಥೆ ಎಎನ್ಐ ಸೂರತ್‌ನಿಂದ 37ಮತ  ಎಣಿಕೆ ಕೇಂದ್ರಗಳಲ್ಲಿ ಒಂದು ಕೇಂದ್ರದ  ದೃಶ್ಯಗಳನ್ನು ಹಂಚಿಕೊಂಡಿದೆ.  

Trending News