ನವದೆಹಲಿ: ಗುಜರಾತ್‍ನಲ್ಲಿ ಹೊಸ ಸರ್ಕಾರ ರಚನೆಯಾಗಿದೆ. ಇಂದು ಗಾಂಧಿನಗರದಲ್ಲಿ ನಡೆದ ಸಮಾರಂಭದಲ್ಲಿ ಭೂಪೇಂದ್ರ ಪಟೇಲ್ ಗುಜರಾತ್ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ಆಚಾರ್ಯ ದೇವವ್ರತ್ ಅವರು ಭೂಪೇಂದ್ರ ಪಟೇಲ್ ಅವರಿಗೆ ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದರು.
ಈ ಪ್ರಮಾಣವಚನ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್, ಬಿಜೆಪಿ ಆಡಳಿತವಿರುವ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಕೇಂದ್ರ ಸಚಿವರು ಭಾಗವಹಿಸಿದ್ದರು.
ಇದನ್ನೂ ಓದಿ: ʼದಿ ಕಾಶ್ಮೀರ್ ಫೈಲ್ಸ್ʼ ನಂತರ ʼವಾಕ್ಸಿನ್ ವಾರ್ʼ ಮಾಡಲು ಅಗ್ನಿಹೋತ್ರಿ ರೆಡಿ
ಪ್ರಧಾನಿ ಮೋದಿ-ಶಾಗೆ ಧನ್ಯವಾದ
ಪ್ರಮಾಣ ವಚನ ಸ್ವೀಕರಿಸಿದ ನಂತರ ಸಿಎಂ ಭೂಪೇಂದ್ರ ಪಟೇಲ್ ಅವರು ಪ್ರಧಾನಿ ಮೋದಿ ಮತ್ತು ಅಮಿತ್ ಶಾ ಅವರಿಗೆ ಧನ್ಯವಾದ ಅರ್ಪಿಸಿದರು. ಗುಜರಾತ್ ನ 18ನೇ ಮುಖ್ಯಮಂತ್ರಿಯಾಗಿ ಅವರು ಪ್ರಮಾಣ ವಚನ ಸ್ವೀಕರಿಸಿದರು. ಇದರೊಂದಿಗೆ ಗುಜರಾತ್‍ನಲ್ಲಿ ಭೂಪೇಂದ್ರ ಪಟೇಲ್ ಅವರ 2.0 ಸರ್ಕಾರದ ರಾಜ್ಯಭಾರ ಶುರುವಾಗಿದೆ. ಭೂಪೇಂದ್ರ ಅವರ ನೇತೃತ್ವದಲ್ಲಿ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಐತಿಹಾಸಿಕ ಗೆಲುವು ದಾಖಲಿಸಿದೆ. ಗುಜರಾತ್ ನಲ್ಲಿ ಬಿಜೆಪಿ ಇದುವರೆಗೆ ಅತಿ ಹೆಚ್ಚು ಸ್ಥಾನ ಗಳಿಸಿ ಸರ್ಕಾರ ರಚಿಸಿದ ದಾಖಲೆ ಮಾಡಿದೆ.
ಸಚಿವರಾಗಿ ಪ್ರಮಾಣ ವಚನ
ಇಂದು ಗಾಂಧಿನಗರದಲ್ಲಿ ಸಿಎಂ ಭೂಪೇಂದ್ರ ಪಟೇಲ್ ಹೊರತಾಗಿ ಹಲವು ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಹರ್ಷ ಸಾಂಘ್ವಿ, ಜಗದೀಶ್ ವಿಶ್ವಕರ್ಮ, ಪುರುಷೋತ್ತಮ್ ಸೋಲಂಕಿ, ಬಚುಭಾಯಿ ಖಬರ್, ಮುಖೇಶ್ ಪಟೇಲ್, ಪ್ರಫುಲ್ಲ ಪನ್ಶೇರಿಯಾ, ಭಿಖುಸಿಂಗ್ ಪರ್ಮಾರ್, ಕುಂವರ್ಜಿ ಹಳಪತಿ, ಕುಂವರ್ಜಿ ಬವಲಿಯಾ, ಮುಲುಭಾಯ್ ಬೇರಾ, ಕುಬೇರ್ ದಂಡೋರ್, ಭಾನುಬೆನ್ ಬಬಾರಿಯಾ, ಕನುಭಾಯಿ ಪಟೇಲ್, ಕನುಭಾಯಿ ದೇಸಾಯಿ, ರಾಜ್‌ಪೂತ್ ದೇಸಾಯಿ ಪ್ರಮಾಣ ವಚನ ಸ್ವೀಕರಿಸಿದರು.
ಇದನ್ನೂ ಓದಿ: ಸಂವಿಧಾನ ಉಳಿಸಲು ಪ್ರಧಾನಿ ಮೋದಿ ಹತ್ಯೆ ಮಾಡಿ!; ಕಾಂಗ್ರೆಸ್ ನಾಯಕನ ವಿವಾದಾತ್ಮಕ ಹೇಳಿಕೆ
ಗುಜರಾತ್‌ನಲ್ಲಿ ಬಿಜೆಪಿ ದಾಖಲೆಯ ಗೆಲುವು
ಗುಜರಾತ್ ಚುನಾವಣೆಯಲ್ಲಿ ಒಟ್ಟು 182 ವಿಧಾನಸಭಾ ಸ್ಥಾನಗಳ ಪೈಕಿ ಬಿಜೆಪಿ 156 ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ಮೂಲಕ ದಾಖಲೆ ನಿರ್ಮಿಸಿತು. ಕಾಂಗ್ರೆಸ್ 17, ಎಎಪಿ 5 ಮತ್ತು ಇತರ ಅಭ್ಯರ್ಥಿಗಳು 4 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದಾರೆ. ಇದು ಗುಜರಾತ್‌ನಲ್ಲಿ ಬಿಜೆಪಿಯ ಸತತ 7ನೇ ಗೆಲುವಾಗಿದೆ. ಭೂಪೇಂದ್ರ ಪಟೇಲ್ ಶುಕ್ರವಾರ ತಮ್ಮ ಇಡೀ ಸಂಪುಟದೊಂದಿಗೆ ರಾಜೀನಾಮೆ ನೀಡಿದ್ದರು. ನಂತರ ಗುಜರಾತ್‌ನಲ್ಲಿ ಹೊಸ ಸರ್ಕಾರ ರಚನೆಯಾಯಿತು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.