ಚಾಮರಾಜನಗರದಲ್ಲಿ ಮಾಜಿ ಸಿಎಂ BS Yadiyurappa ಫೋಟೋ ಇಲ್ಲದ್ದಕ್ಕೆ ಅಭಿಮಾನಿಗಳ ಆಕ್ರೋಶ!

ವೇದಿಕೆಯಲ್ಲಿ ಅಳವಾಡಿಸಿದ್ದ ಎಲ್ ಸಿ ಡಿ ಪರದೆಯಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಪೋಟೋ ಇಲ್ಲದ್ದಕ್ಕೆ ಕುಪಿತಗೊಂಡ ಅಭಿಮಾನಿಗಳು ಯಡಿಯೂರಪ್ಪಗೆ ಜೈಕಾರ ಹಾಕಿ ಫೋಟೋ ಹಾಕುವಂತೆ ಒತ್ತಾಯಿಸಿದರು. ಕೆಲಹೊತ್ತು ಇದು ಗೊಂದಲಕ್ಕೂ ಕಾರಣವಾಯಿತು.

Written by - Prashobh Devanahalli | Edited by - Bhavishya Shetty | Last Updated : Dec 13, 2022, 12:50 PM IST
    • ಎಲ್ ಸಿ ಡಿ ಪರದೆಯಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಪೋಟೋ ಇಲ್ಲದ್ದಕ್ಕೆ ಕುಪಿತ
    • ಅಭಿಮಾನಿಗಳು ಯಡಿಯೂರಪ್ಪಗೆ ಜೈಕಾರ ಹಾಕಿ ಫೋಟೋ ಹಾಕುವಂತೆ ಒತ್ತಾಯಿಸಿದರು
    • ಅಭಿಮಾನಿಗಳು ಅಸಮಾಧಾನ ಹೊರಹಾಕಿದ ಘಟನೆ ಚಾಮರಾಜನಗರದಲ್ಲಿ ನಡೆಯಿತು
ಚಾಮರಾಜನಗರದಲ್ಲಿ ಮಾಜಿ ಸಿಎಂ BS Yadiyurappa ಫೋಟೋ ಇಲ್ಲದ್ದಕ್ಕೆ ಅಭಿಮಾನಿಗಳ ಆಕ್ರೋಶ! title=
BS Yeddyurappa

ಚಾಮರಾಜನಗರ: ಸಾವಿರಾರು ಕೋಟಿ ರೂ. ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆಗೆ ಸಿಎಂ ಬಸವರಾಜ ಬೊಮ್ಮಾಯಿ ಚಾಮರಾಜನಗರಕ್ಕೆ ಆಗಮಿಸಲಿದ್ದು ಈ ವೇಳೆ ಬಿ.ಎಸ್.ಯಡಿಯೂರಪ್ಪ ಅಭಿಮಾನಿಗಳು ಅಸಮಾಧಾನ ಹೊರಹಾಕಿದ ಘಟನೆ ನಡೆದಿದೆ.

ಇದನ್ನೂ ಓದಿ: ಮೌಢ್ಯಕ್ಕೆ ಸಡ್ಡು ಹೊಡೆದ ಎರಡನೇ ಸಿಎಂ ಬಸವರಾಜ ಬೊಮ್ಮಾಯಿ!!

ವೇದಿಕೆಯಲ್ಲಿ ಅಳವಾಡಿಸಿದ್ದ ಎಲ್ ಸಿ ಡಿ ಪರದೆಯಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಪೋಟೋ ಇಲ್ಲದ್ದಕ್ಕೆ ಕುಪಿತಗೊಂಡ ಅಭಿಮಾನಿಗಳು ಯಡಿಯೂರಪ್ಪಗೆ ಜೈಕಾರ ಹಾಕಿ ಫೋಟೋ ಹಾಕುವಂತೆ ಒತ್ತಾಯಿಸಿದರು. ಕೆಲಹೊತ್ತು ಇದು ಗೊಂದಲಕ್ಕೂ ಕಾರಣವಾಯಿತು.

ಬಳಿಕ, ಗುಂಡ್ಲುಪೇಟೆ ಶಾಸಕ ಸಿ.ಎಸ್.ನಿರಂಜನಕುಮಾರ್ ವೇದಿಕೆ ಏರಿ 'ಇದು ಸರ್ಕಾರದ ಕಾರ್ಯಕ್ರಮವಾದ್ದರಿಂದ ಯಡಿಯೂರಪ್ಪ ಅವರ ಫೋಟೋ ಹಾಕಲಾಗಲ್ಲ. ಅವರ ಬಗ್ಗೆ ಅಪಾರ ಗೌರವ-ಪ್ರೀತಿ ಇದೆ. ಅಭಿಮಾನಿಗಳು ಅಸಮಾಧಾನಗೊಳ್ಳಬಾರದು ಎಂದು ಮನವಿ ಮಾಡಿಕೊಂಡರು. ಇದಾದ ನಂತರ ಬಿಎಸ್ ವೈ ಅಭಿಮಾನಿಗಳು ಶಾಂತವಾದರು.

ಇನ್ನು ಇದೇ ಸಂದರ್ಭದಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, ಚಾಮರಾಜನಗರ ಜಿಲ್ಲೆಯೂ ಕೂಡ 31 ಜಿಲ್ಲೆಗಳ ಪೈಕಿ ಮಹತ್ವದ ಜಿಲ್ಲೆ. ನಿಸರ್ಗಭರಿತ, ಐತಿಹಾಸಿಕ ಗಡಿ ಜಿಲ್ಲೆಯಾಗಿದೆ. ಅಭಿವೃದ್ಧಿಗೆ ಮಹತ್ವ ಕೊಟ್ಟೇ ಕೊಡುತ್ತೇವೆ ಎಂದು ತಿಳಿಸಿದರು. ಮುಖ್ಯಮಂತ್ರಿಯಾದ ನಂತರ ಮೂರನೇ ಬಾರಿಗೆ ಜಿಲ್ಲೆ ಭೇಟಿ ನೀಡುತ್ತಿದ್ದೇನೆ ಎಂದರು.

ಇದನ್ನೂ ಓದಿ: Mandous Cyclone : ಡಿಸೆಂಬರ್ 15ರವರೆಗೂ ರಾಜ್ಯದಲ್ಲಿ ವರುಣಾರ್ಭಟ

ಗಡಿ ವಿವಾದದ ಬಗ್ಗೆ ಚರ್ಚೆ:

ಕೇಂದ್ರ ಗೃಹ ಸಚಿವರು ಗಡಿ ವಿವಾದದ ಬಗ್ಗೆ ಚರ್ಚಿಸಲೆಂದೇ ಎರಡೂ ರಾಜ್ಯಗಳ ಮುಖ್ಯಮಂತ್ರಿಗಳನ್ನು ದೆಹಲಿಗೆ ಕರೆದಿದ್ದಾರೆ. ಅಲ್ಲಿ ನಮ್ಮ ನಿಲುವಿನ ಬಗ್ಗೆ ಹೇಳುತ್ತೇವೆ. ಈಗಾಗಲೇ ರಾಜ್ಯ ಪುನರ್ ವಿಂಗಡನಾ ಕಾಯ್ದೆ, ಪ್ರಕ್ರಿಯೆ, ಸುಪ್ರೀಂ ಕೋರ್ಟ್ ಪ್ರಕರಣ ಸೇರಿದಂತೆ ಎಲ್ಲಾ ಮಾಹಿತಿಯನ್ನು ಗೃಹ ಸಚಿವರಿಗೆ ನೀಡಲಿದ್ದೇನೆ. ಸಂವಿಧಾನದಲ್ಲಿನ ಅವಕಾಶಗಳು ಮತ್ತು 2004 ರ ಪ್ರಕರಣ ಸುಪ್ರೀಂ ಕೋರ್ಟ್ ಕೈಗೆತ್ತಿಕೊಂಡೇ ಇಲ್ಲ ಎಂಬ ಬಗ್ಗೆ ಗೃಹ ಕಾರ್ಯದರ್ಶಿಗಳಿಗೆ ಮನವಿ ಮಾಡಿಕೊಡಲಿದ್ದೇನೆ ಎಂದರು.

 

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News