Weight Loss Habits: ತ್ವರಿತ ತೂಕ ಇಳಿಕೆಯ ಜೊತೆಗೆ ಫ್ಲಾಟ್ ಬೆಲ್ಲಿ ನಿಮ್ಮದಾಗಿಸಲು ಈ ಐದು ಅಭ್ಯಾಸಗಳನ್ನು ರೂಢಿಸಿಕೊಳ್ಳಿ

Weight Loss Habits: ತ್ವರಿತ ತೂಕ ಇಳಿಕೆಯ ಜೊತೆಗೆ ಫ್ಲಾಟ್ ಬೆಲ್ಲಿ ನಿಮ್ಮದಾಗಿಸಲು ಕೆಲವು ಆರೋಗ್ಯಕರ ಅಭ್ಯಾಸಗಳನ್ನು ರೂಢಿಸಿಕೊಳ್ಳುವುದು ಬಹಳ ಮುಖ್ಯ.

Weight Loss Habits: ಪ್ರತಿಯೊಬ್ಬರಿಗೂ ತೆಳ್ಳನೆಯ ಬಳುಕುವ ಸೊಂಟ ತಮ್ಮದಾಗಬೇಕು ಎಂಬ ಆಸೆ ಇರುತ್ತದೆ. ಇದಕ್ಕಾಗಿ ಹಲವು ಪ್ರಯತ್ನಗಳನ್ನು ಮಾಡಿದರೂ ಸಹ ಕೆಲವರಿಗೆ ಇದು ಸಾಧ್ಯವಾಗುವುದಿಲ್ಲ. ಆದರೆ, ಪ್ರತಿ ನಿತ್ಯ ಕೆಲವು ಆರೋಗ್ಯಕರ ಅಭ್ಯಾಸಗಳನ್ನು ರೂಢಿಸಿಕೊಳ್ಳುವ ಮೂಲಕ ತ್ವರಿತವಾಗಿ ತೂಕ ಇಳಿಸಿಕೊಳ್ಳಬಹುದು. ಮಾತ್ರವಲ್ಲ, ನಿಮ್ಮ ಬೆಲ್ಲಿ ಫ್ಯಾಟ್ ಅನ್ನು ಕೂಡ ಸುಲಭವಾಗಿ ಕರಗಿಸಬಹುದು ಎಂದು ಹೇಳಲಾಗುತ್ತದೆ. ಇದಕ್ಕಾಗಿ, ನಿಮ್ಮ ದಿನಚರಿ ಹೇಗಿರಬೇಕು ಎಂದು ತಿಳಿಯಿರಿ. 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /5

ಸಾಧ್ಯವಾದಷ್ಟು ಮನೆಯಲ್ಲಿ ತಯಾರಿಸಿದ ಆಹಾರವನ್ನೇ ಸೇವಿಸಿ: ತೂಕ ಇಳಿಕೆಯಲ್ಲಿ ಮಾಡಬೇಕಾದ ಮೊದಲ ಕೆಲಸ ಎಂದರೆ ಹೊರಗಿನ ಆಹಾರಗಳ ಸೇವನೆಯನ್ನು ತಪ್ಪಿಸಬೇಕು. ಬದಲಿಗೆ ಸಾಧ್ಯವಾದಷ್ಟು ಮನೆಯಲ್ಲಿ ತಯಾರಿಸಿದ ಆಹಾರವನ್ನೇ ಸೇವಿಸುವು ಒಳ್ಳೆಯದು. ಕಾರಣ, ಮನೆಯಲ್ಲಿ ತಯಾರಿಸಿದ ಆಹಾರವು ತಾಜಾವಾಗಿರುತ್ತದೆ. 

2 /5

ಕರಿದ ಆಹಾರಗಳನ್ನು ತಪ್ಪಿಸಿ: ಭಾರತೀಯ ಖಾದ್ಯಗಳಲ್ಲಿ ಎಣ್ಣೆಯುಕ್ತ ಆಹಾರಗಳನ್ನು ಹೆಚ್ಚಾಗಿ ತಯಾರಿಸಲಾಗುತ್ತದೆ. ತಿನ್ನಲು ರುಚಿಕರವಾಗಿರುವ ಈ ಆಹಾರಗಳನ್ನು ಹಿತಮಿತವಾಗಿ ಸೇವಿಸಿದರೆ ಒಳ್ಳೆಯದು. ಇಲ್ಲದಿದ್ದರೆ ಆರೋಗ್ಯವನ್ನು ಕೆಡಿಸುವಲ್ಲಿ ಇವು ಪ್ರಮುಖ  ಪಾತ್ರ ವಹಿಸುತ್ತದೆ. ಹಾಗಾಗಿ, ನೀವು ತೂಕ ಕಡಿಮೆ ಮಾಡಲು ಬಯಸಿದರೆ ನಿಮ್ಮ ದೈನಂದಿನ ಆಹಾರದಲ್ಲಿ ಕರಿದ ಆಹಾರಗಳ ಸೇವನೆಯನ್ನು ತಪ್ಪಿಸಿ.

3 /5

ಸಾಕಷ್ಟು ನಿದ್ರೆ ಮಾಡಿ: ಆರೋಗ್ಯವಾಗಿರಲು ಉತ್ತಮ ಆಹಾರದ ಜೊತೆಗೆ ನಿತ್ಯ ಸಾಕಷ್ಟು ನಿದ್ರೆ ಮಾಡುವುದು ಕೂಡ ಬಹಳ ಮುಖ್ಯ. ಸಂಶೋಧನೆಯ ಪ್ರಕಾರ ಅಗತ್ಯಕ್ಕಿಂತ ಕಡಿಮೆ ನಿದ್ರೆ ಮಾಡುವ ಜನರಲ್ಲಿ ತೂಕ ವೇಗವಾಗಿ ಹೆಚ್ಚಾಗುತ್ತದೆ. ವಾಸ್ತವವಾಗಿ, ಪ್ರತಿಯೊಬ್ಬರಿಗೂ ನಿತ್ಯ  8 ಗಂಟೆಗಳ ನಿದ್ರೆ ಬಹಳ ಮುಖ್ಯ. ಇಲ್ಲದಿದ್ದರೆ ಅದು ತೂಕ ಹೆಚ್ಚಳ ಮಾತ್ರವಲ್ಲದೆ ಆರೋಗ್ಯದ ಮೇಲೂ ಗಂಭೀರ ಪರಿಣಾಮ ಬೀರುತ್ತದೆ. 

4 /5

ಖಾಲಿ ಹೊಟ್ಟೆಯಲ್ಲಿ ಈ ತಪ್ಪನ್ನು ಮಾಡಬೇಡಿ: ನಮ್ಮಲ್ಲಿ ಕೆಲವರಿಗೆ ಬೆಳಿಗ್ಗೆ ಎದ್ದ ತಕ್ಷಣ ಟೀ ಅಥವಾ ಕಾಫಿ ಕುಡಿಯುವ ಅಭ್ಯಾಸವಿರುತ್ತದೆ. ಆದರೆ, ಇದು ಮಲಬದ್ಧತೆ ಸಮಸ್ಯೆಗೆ ಕಾರಣವಾಗುವುದು. ಮಾತ್ರವಲ್ಲ ಜೀರ್ಣಕ್ರಿಯೆ ಸಂಬಂಧಿತ ಸಮಸ್ಯೆಗಳಿಗೂ ಕಾರಣವಾಗಬಹುದು. ಇದರಿಂದ ತೂಕ ಇಳಿಕೆ ಕಷ್ಟವಾಗುತ್ತದೆ. ಇದನ್ನು ತಪ್ಪಿಸಲು ಬೆಡ್ ಟೀ/ಕಾಫಿ ತಪ್ಪಿಸಿ.

5 /5

ನಿತ್ಯ ಸಾಕಷ್ಟು ನೀರು ಕುಡಿಯಿರಿ: ನೀವು ತೂಕ ಇಳಿಸಿಕೊಳ್ಳುವ ಪ್ರಯತ್ನದಲ್ಲಿದ್ದರೆ ನಿತ್ಯ ಸಾಕಷ್ಟು ನೀರು ಕುಡಿಯಿರಿ. ಹಲವು ಸಂಶೋಧನೆಗಳ ಪ್ರಕಾರ ಆರೋಗ್ಯವಂತ ವಯಸ್ಕರು ನಿತ್ಯ ಕನಿಷ್ಠ 8 ಲೋಟ ನೀರು ಕುಡಿಯಬೇಕು. ಇದರಿಂದ ತೂಕ ನಿಯಂತ್ರಣವೂ ಸುಲಭವಾಗುತ್ತದೆ. ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು  ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಅದನ್ನು ಅಳವಡಿಸಿಕೊಳ್ಳುವ ಮೊದಲು, ತಜ್ಞರನ್ನು ಸಂಪರ್ಕಿಸಿ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.