ಬೆಂಗಳೂರು : ಮಂಗಳೂರಿನ ಕಂಕನಾಡಿಯಲ್ಲಿ ನಡೆದ ಕುಕ್ಕರ್ ಬಾಂಬ್ ಸ್ಪೋಟದಲ್ಲಿ ಗಾಯಗೊಂಡಿದ್ದ ಶಂಕಿತ ಉಗ್ರ ಶಾರೀಕ್ ನನ್ನ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಕರೆತರಲಾಗಿದೆ. ಸ್ಫೋಟದ ವೇಳೆ ಗಾಯಗೊಂಡಿದ್ದ ಆರೋಪಿಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.
ಇಂದು ಮಂಗಳೂರಿನಿಂದ ಬಿಗಿ ಭದ್ರತೆಯಲ್ಲಿ ಆ್ಯಂಬುಲೆನ್ಸ್ ಮೂಲಕ ಬಿಗಿ ಭದ್ರತೆಯಲ್ಲಿ ಆರೋಪಿಯನ್ನ ವಿಕ್ಟೋರಿಯಾ ಆಸ್ಪತ್ರೆಗೆ ಕರೆತರಲಾಗಿದೆ. ಸದ್ಯ ವಿಕ್ಟೋರಿಯಾ ಆಸ್ಪತ್ರೆಯ ಸುಟ್ಟ ಗಾಯಗಳ ಚಿಕಿತ್ಸಾ ವಿಭಾಗದ ಸ್ಪೇಷಲ್ ವಾರ್ಡ್ ನಲ್ಲು ಆರೋಪಿ ಶಾರೀಕ್ ಗೆ ಚಿಕಿತ್ಸೆ ನಡೆದಿದೆ. ಶಾರೀಕ್ ಗೆ ಚಿಕಿತ್ಸೆ ನಡೆಯುತ್ತಿರುವ ವಾರ್ಡ್ ಬಳಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.
ಇದನ್ನೂ ಓದಿ: ʼಕೇಸರಿʼ ತೊಟ್ಟ ಸ್ವಾಮಿಗಳು ರೇಪ್ ಮಾಡ್ತಾರೆ : ದೀಪಿಕಾ ಬಟ್ಟೆ ಏನ್ ಮಾಡ್ತು..!
ವೈದ್ಯರು ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಮಾತ್ರ ವಾರ್ಡ್ ಗೆ ಎಂಟ್ರಿ ಕೊಡಲಾಗುತ್ತಿದೆ. ಇನ್ನೂ ಚಿಕಿತ್ಸೆ ಬಳಿಕ ಹೆಚ್ಚಿನ ವಿಚಾರಣೆಗಾಗಿ ಎನ್ಐಎ ತನಿಖಾಧಿಕಾರಿಗಳ ತಂಡ ಆರೋಪಿಯನ್ನ ವಶಕ್ಕೆ ಪಡೆಯಲಿದೆ. ಇನ್ನೂ ಒಂದು ವಾರಕ್ಕೂ ಹೆಚ್ಚು ಕಾಲ ಚಿಕಿತ್ಸೆ ನಡೆಸುವ ಸಾಧ್ಯತೆ ಇದ್ದು, ಆಸ್ಪತ್ರೆಯ ಸುತ್ತಮುತ್ತ ಸ್ಥಳಿಯ ಪೊಲೀಸರು ಬಿಗಿ ಭದ್ರತೆ ನೀಡಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.