ಬೆಂಗಳೂರು: ಡೆತ್ ನೋಟ್ ಬರೆದಿಟ್ಟು ಬೆಂಗಳೂರು ತಾಂತ್ರಿಕ ವಿಶ್ವವಿದ್ಯಾಲಯದ ಕಟ್ಟಡದ ಮೇಲಿನಿಂದ ಹಾರಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ವಾಣಿ(23) ಮೃತ ದುರ್ದೈವಿಯಾಗಿದ್ದಾಳೆ.
ಪ್ರಕರಣದ ಹಿಂದೆ ಪ್ರೇಮ ವೈಫಲ್ಯ ಆಗಿರುವ ಶಂಕೆ ವ್ಯಕ್ತವಾಗಿದೆ. ಮೃತ ವಾಣಿ ಮೂಲತಃ ಬೆಂಗಳೂರಿನ ಬನಶಂಕರಿ ನಿವಾಸಿಯಾಗಿದ್ದಾಳೆ. ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ವಿವಿ ಪುರಂ ಠಾಣಾ ಪೊಲೀಸರು ಪರಿಶೀಲನೆ ನಡೆಸಿ ವಿದ್ಯಾರ್ಥಿನಿ ವಾಣಿ ಮೃತದೇಹವನ್ನು ಕಿಮ್ಸ್ ಆಸ್ಪತ್ರೆಗೆ ರವಾನಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
ಇದನ್ನೂ ಓದಿ: ಕರ್ನಾಟಕಕ್ಕೂ ನಿಮಗೂ ಸಂಬಂಧ ಏನು? ಏಕವಚನದಲ್ಲಿ ಕಿಡಿಕಾರಿದ ಹೆಚ್ಡಿಕೆ
ವಿಶ್ವೇಶ್ವರಯ್ಯಪುರ ಕಾಲೇಜ್ ಆಫ್ ಲಾ ಸಂಸ್ಥೆಯಲ್ಲಿ ಕಾನೂನು ಪದವಿ ವ್ಯಾಸಾಂಗ ಮಾಡುತ್ತಿದ್ದ ವಾಣಿ ಬೆಂಗಳೂರಿನ ತಾಂತ್ರಿಕ ವಿಶ್ವವಿದ್ಯಾಲಯದ ಇಂಜಿನಿಯರಿಂಗ್ ಕಾಲೇಜಿನ 6ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ನವೆಂಬರ್ 24 ರಿಂದ ಪ್ರಥಮ ವರ್ಷದ ಕಾನೂನು ಪದವಿ ವಿದ್ಯಾರ್ಥಿಗಳಿಗೆ ತರಗತಿಗಳು ಆರಂಭವಾಗಿತ್ತು. ನಿತ್ಯ ತರಗತಿಗೆ ಹಾಜರಾಗುತ್ತಿದ್ದ ವಿದ್ಯಾರ್ಥಿನಿ ವಾಣಿ, ಇಂದು ಗೈರಾಗಿದ್ದಳು.
ಅಲ್ಲದೇ ಒಂದು ಪುಟದ ಡೆತ್ ನೋಟು ಬರೆದಿಟ್ಟು ತಾಂತ್ರಿಕ ವಿಶ್ವವಿದ್ಯಾಲಯದ ಕಟ್ಟಡದಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಸದ್ಯ ಪ್ರಕರಣ ದಾಖಲಿಸಿಕೊಂಡಿರಯವ ವಿವಿಪುರಂ ಪೊಲೀಸರು ತನಿಖೆ ಮುಂದುವರೆಸಿದ್ದಾರೆ. ಬೆಂಗಳೂರಿನ ಬಿಐಟಿ ಕಾಲೇಜು ಕಾನೂನೂ ವಿದ್ಯಾರ್ಥಿನಿ ವಾಣಿ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿದೆ. ವಾಣಿ ಬರೆದಿರುವ ಡೆತ್ ನೋಟ್ ನಲ್ಲಿ ಆತ್ಮಹತ್ಯೆಗೆ ಕಾರಣವನ್ನು ಆಕೆಯೇ ಉಲ್ಲೇಖಿಸಿದ್ದಾಳೆ.
ಡೆತ್ ನೋಟ್ ನಲ್ಲಿ ಏನಿದೆ
ನನಗೆ ಚಂದ್ರಶೇಖರ್ ಎಂಬಾತನ ಜೊತೆಗೆ ನಿಶ್ಚಿತಾರ್ಥವಾಗಿತ್ತು. ಎಂಗೆಜ್ಮೆಂಟ್ ಆದಮೇಲೆ ಆತ ನನಗೆ ಹೊರಗೆ ಸುತ್ತಾಡಲು ಕರೆಯುತ್ತಿದ್ದ. ಆದರೆ ಹೊರಗೆ ಹೋಗಲು ನನಗೆ ಇಷ್ಟವಿರಲಿಲ್ಲ. ನಾನು ಬರೋದಿಲ್ಲ ಎಂದು ಆತನಿಗೆ ಹೇಳಿದ್ದೆ. ಹೀಗಿರುವಾಗ ಒಂದು ದಿನ ಆತ ಮನೆ ಬಳಿಗೆ ಬಂದಿದ್ದ.ನೀನು ನನ್ನ ಜೊತೆಗೆ ಸುತ್ತಾಡಲು ಬರುತ್ತಿಲ್ಲ.ನಿನಗೆ ಬೇರೆಯವರ ಜೊತೆ ಅಕ್ರಮ ಸಂಬಂಧ ಇದೆ. ಹಾಗಾಗಿ ನನ್ನ ಜೊತೆಗೆ ಸುತ್ತಾಡಲು ಬರ್ತಿಲ್ಲ ಎಂದು ನಿಂದಿಸಿದ್ದ. ಇದರಿಂದ ಸಾಕಷ್ಟು ಅವಮಾನಕ್ಕೆ ಒಳಗಾದೆ.ಏರಿಯಾದಲ್ಲಿ ಓಡಾಡಲು ಸಾಧ್ಯವಾಗುತ್ತಿಲ್ಲ. ನನ್ನನ್ನು ಕ್ಷಮಿಸಿ ಎಂದು ಡೆತ್ ನೋಟ್ ಬರೆದಿಟ್ಟು ವಾಣಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಇನ್ನೂ ಡೆತ್ ನೋಟ್ ಆಧಾರದಲ್ಲಿ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.