Crime News: ಬೆಂಗಳೂರಿನಲ್ಲಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ..!

Bengaluru Crime News: ಯಶೋಧಾ ಗುಪ್ತಾರಿಗೆ ಸುಮನ್ ಗುಪ್ತಾ, ಅಪರ್ಣಾ ಗುಪ್ತಾ ಹಾಗೂ ನರೇಶ್ ಗುಪ್ತಾ ಮೂವರು ಮಕ್ಕಳಿದ್ದರು. ಕಳೆದ 4 ತಿಂಗಳಿನಿಂದ ಮಹಾಲಕ್ಷ್ಮಿ ಲೇಔಟ್ ನಲ್ಲಿ ವಾಸವಾಗಿದ್ದರಂತೆ.

Written by - Puttaraj K Alur | Last Updated : Dec 20, 2022, 11:38 AM IST
  • ಬೆಂಗಳೂರಿನಲ್ಲಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣು
  • ಹಣಕಾಸಿನ ಸಮಸ್ಯೆಯಿಂದ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ
  • ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಮಹಾಲಕ್ಷ್ಮಿ ಲೇಔಟ್ ಠಾಣೆ ಪೊಲೀಸರು
Crime News: ಬೆಂಗಳೂರಿನಲ್ಲಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ..! title=
ಒಂದೇ ಕುಟುಂಬದ ಮೂವರು ಆತ್ಮಹತ್ಯೆ!

ಬೆಂಗಳೂರು: ಬೆಂಗಳೂರಿನಲ್ಲಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಗರದ ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಆಂಜನೇಯ ದೇವಸ್ಥಾನದ ಬಳಿಯ ಮನೆಯಲ್ಲಿ ಸೋಮವಾರ ತಡರಾತ್ರಿ ಈ ಘಟನೆ ನಡೆದಿದೆ. ತಾಯಿ, ಮಗ ಹಾಗೂ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ತಾಯಿ ಯಶೋಧ (72), ಮಗಳು ಸುಮನ್ ಗುಪ್ತಾ(32) ಮತ್ತು ಮಗ ನರೇಶ್ ಗುಪ್ತಾ (36) ಆತ್ಮಹತ್ಯೆ ಮಾಡಿಕೊಂಡವರು. ಈ ಮೂವರು ಒಂದೇ ಮನೆಯಲ್ಲಿ ವಾಸವಾಗಿದ್ದರು, ಇಬ್ಬರು ಮಕ್ಕಳಿಗೂ ಮದುವೆ ಯಾಗಿರಲಿಲ್ಲವೆಂದು ತಿಳಿದುಬಂದಿದೆ. ಮಗ ನರೇಶ್ ಗುಪ್ತಾ ಕಾಂಟ್ರಾಕ್ಟ್ ಕೆಲಸವನ್ನು ಮಾಡುತ್ತಿದ್ದರು. ಮೇಲ್ನೋಟಕ್ಕೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಮಹಾಲಕ್ಷ್ಮಿ ಲೇಔಟ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: ತಮ್ಮ ಶಿಕ್ಷಣ ಸಂಸ್ಥೆಗಳ ಮೇಲೆ ಸಿಬಿಐ ದಾಳಿಗೆ ಡಿಕೆಶಿ ಹೇಳಿದ್ದೇನು ಗೊತ್ತೇ?

2 ದಿನಗಳ ಹಿಂದೆಯೇ ಆತ್ಮಹತ್ಯೆ?!

ಕಳೆದ 2 ದಿನಗಳ ಹಿಂದೆಯೇ ಮೂವರು ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಸೋಮವಾರ ರಾತ್ರಿ ಮೂವರು ಪೋನ್ ರಿಸಿವ್ ಮಾಡ್ತಾ ಇರಲಿಲ್ಲ. ಮತ್ತೊಬ್ಬ ಮಗಳು ಮೂವರಿಗೂ ಕಾಲ್ ಮಾಡಿದ್ರು ರಿಸೀವ್ ಮಾಡ್ತಾ ಇರಲಿಲ್ಲವಂತೆ. ಹೀಗಾಗಿ ಮನೆ ಬಳಿ ಹೋಗಿ ಪರಿಶೀಲನೆ ನಡೆಸಿದ ವೇಳೆ ಮೃತಪಟ್ಟಿರುವುದು ಬೆಳಕಿಗೆ ಬಂದಿದೆ. ನರೇಶ್ ಗುಪ್ತಾ ಕಾಂಟ್ರಾಕ್ಟರ್ ಆಗಿದ್ದು, ಸಾಲ ಮಾಡಿಕೊಂಡಿದ್ದರು ಎನ್ನಲಾಗಿದೆ. ಮೂವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ವೈಯಕ್ತಿಕ ಕಾರಣಕ್ಕೆ ಆತ್ಮಹತ್ಯೆ ಬಗ್ಗೆ ಪೊಲೀಸರಿಂದ ಮಾಹಿತಿ ದೊರೆತಿದೆ. ಸದ್ಯ ಮೂವರ ಮೃತದೇಹವನ್ನು ರಾಮಯ್ಯ ಆಸ್ಪತ್ರೆಗೆ ರವಾನಿಸಲಾಗಿದೆ.

ಆತ್ಮಹತ್ಯೆಗೆ ಹಣಕಾಸಿನ ಸಮಸ್ಯೆ ಕಾರಣವೇ?

ಯಶೋಧಾ ಗುಪ್ತಾರಿಗೆ ಸುಮನ್ ಗುಪ್ತಾ, ಅಪರ್ಣಾ ಗುಪ್ತಾ ಹಾಗೂ ನರೇಶ್ ಗುಪ್ತಾ ಮೂವರು ಮಕ್ಕಳಿದ್ದರು. ಕಳೆದ 4 ತಿಂಗಳಿನಿಂದ ಮಹಾಲಕ್ಷ್ಮಿ ಲೇಔಟ್ ನಲ್ಲಿ ವಾಸವಾಗಿದ್ದರಂತೆ. ಶನಿವಾರ ಈ ಮೂವರು ಅಪರ್ಣಾ ಜೊತೆ ಫೋನ್‍ನಲ್ಲಿ ಮಾತನಾಡಿದ್ದರಂತೆ. ಇದಾದ ಬಳಿಕ ಯಾರೂ ಫೋನ್ ಪಿಕ್ ಮಾಡಿಲ್ಲವಂತೆ. ಬಂದು ನೋಡಿದಾಗ ಮೂವರು ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದರು‌. ಸದ್ಯದ ಮಾಹಿತಿ ಪ್ರಕಾರ ಸಾವಿಗೆ ಹಣಕಾಸಿನ ಸಮಸ್ಯೆಯೇ ಕಾರಣ ಅಂತಾ ಹೇಳಲಾಗುತ್ತಿದೆ.

ಇದನ್ನೂ ಓದಿ: ಬೆಳಗಾವಿ ಅಧಿವೇಶನ: ಕಾಂಗ್ರೆಸ್ ಮೀಸಲಾತಿ ಅಸ್ತ್ರ; ಬಿಜೆಪಿ ಸುಳ್ಳು ಆರೋಪ!

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News