ಉಪಕುಲಪತಿ ಹುದ್ದೆಗೆ 5 ಕೋಟಿಗೆ ಮಾರಾಟ: ತನಿಖೆಗೆ ಡಿಕೆಶಿ ಆಗ್ರಹ

ಉಪಕುಲಪತಿ ಹುದ್ದೆಗೆ ಲಂಚ ನೀಡಬೇಕೆಂದು ಸಂಸದ ಪ್ರತಾಪ್ ಸಿಂಹ ಹೇಳಿಕೆ ಪ್ರತಿಕ್ರಿಯಿಸಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ್ ಈ ವಿಚಾರವಾಗಿ ಲೋಕಾಯುಕ್ತರು ಮಧ್ಯಪ್ರವೇಶಿಸಿ ತನಿಖೆ ನಡೆಸಬೇಕೆಂದು ಆಗ್ರಹಿಸಿದ್ದಾರೆ.

Written by - Zee Kannada News Desk | Last Updated : Dec 22, 2022, 12:02 AM IST
  • ಸರ್ಕಾರದಲ್ಲಿ ಯಾರಿಗೆ ಈ ಹಣ ತಲುಪಿದೆ? ಮಂತ್ರಿಗಳಿಗೆ ತಲುಪಿದೆಯೋ?
  • ಅಧಿಕಾರಿಗಳಿಗೆ ತಲುಪಿದೆಯೋ? ಎಂಬುದು ಚರ್ಚೆ ಆಗಬೇಕು.
  • ಅದಕ್ಕಾಗಿ ವಿಧಾನ ಪರಿಷತ್ ನಲ್ಲಿ ಈ ವಿಚಾರ ಪ್ರಸ್ತಾಪ ಮಾಡಲಾಗಿದೆ.
ಉಪಕುಲಪತಿ ಹುದ್ದೆಗೆ 5 ಕೋಟಿಗೆ ಮಾರಾಟ: ತನಿಖೆಗೆ ಡಿಕೆಶಿ ಆಗ್ರಹ  title=

ಬೆಂಗಳೂರು: ಉಪಕುಲಪತಿ ಹುದ್ದೆಗೆ ಲಂಚ ನೀಡಬೇಕೆಂದು ಸಂಸದ ಪ್ರತಾಪ್ ಸಿಂಹ ಹೇಳಿಕೆ ಪ್ರತಿಕ್ರಿಯಿಸಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ್ ಈ ವಿಚಾರವಾಗಿ ಲೋಕಾಯುಕ್ತರು ಮಧ್ಯಪ್ರವೇಶಿಸಿ ತನಿಖೆ ನಡೆಸಬೇಕೆಂದು ಆಗ್ರಹಿಸಿದ್ದಾರೆ.

ಈ ಕುರಿತಾಗಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು 'ಉಪಕುಲಪತಿ ಹುದ್ದೆಗೆ ಲಂಚ ನೀಡಬೇಕು ಎಂದು ಹೇಳಿಕೆ ನೀಡಿರುವ ಬಿಜೆಪಿ ನಾಯಕರು ಬಹಳ ಅನುಭವ ಹೊಂದಿರುವ ವಿದ್ಯಾವಂತರು. ಉಪಕುಲಪತಿಗಳ ಹುದ್ದೆಗೆ 5 ಕೋಟಿ ರು. ನೀಡಬೇಕು ಎಂದು ಈ ಸಂಸದರು ಹೇಳಿದ್ದಾರೆ 

ಇಡಿ, ಐಟಿ, ಸಿಬಿಐ, ಲೋಕಾಯುಕ್ತ ಸಂಸ್ಥೆಗಳು ಏನು ಮಾಡುತ್ತಿವೆ. ಈ ಸಂದರ್ಭದಲ್ಲಿ ರಾಜ್ಯಪಾಲರು ಹಾಗೂ ಅವರ ಕಚೇರಿ ಮೇಲೆ ಆರೋಪ ಮಾಡಲು ಆಗುವುದಿಲ್ಲ. ಅದು ಸರಿಯಲ್ಲ. ಉಪಕುಲಪತಿಗಳ ಹೆಸರನ್ನು ಸರ್ಕಾರ ಶಿಫಾರಸ್ಸು ಮಾಡಿದರೆ ರಾಜ್ಯಪಾಲರು ನೇಮಕ ಮಾಡುತ್ತಾರೆ. 

ಇದನ್ನೂ ಓದಿ: "ಬೇರೆ ಪಕ್ಷಗಳು ಸೋಲುತ್ತವೆ ಎಂದು ಆ ಪಕ್ಷಗಳಲ್ಲಿ ಟಿಕೆಟ್ ಆಕಾಂಕ್ಷಿಗಳು ಕಡಿಮೆ ಇದ್ದಾರೆ"

ಸರ್ಕಾರದಲ್ಲಿ ಯಾರಿಗೆ ಈ ಹಣ ತಲುಪಿದೆ? ಮಂತ್ರಿಗಳಿಗೆ ತಲುಪಿದೆಯೋ? ಅಧಿಕಾರಿಗಳಿಗೆ ತಲುಪಿದೆಯೋ? ಎಂಬುದು ಚರ್ಚೆ ಆಗಬೇಕು. ಅದಕ್ಕಾಗಿ ವಿಧಾನ ಪರಿಷತ್ ನಲ್ಲಿ ಈ ವಿಚಾರ ಪ್ರಸ್ತಾಪ ಮಾಡಲಾಗಿದೆ. ಕೂಡಲೇ ಲೋಕಾಯುಕ್ತ, ಇಡಿ ಈ ವಿಚಾರದಲ್ಲಿ ಮಧ್ಯಪ್ರವೇಶ ಮಾಡಬೇಕು. ನಮ್ಮ ಮೇಲೆ ದಾಳಿ ಮಾಡಿ ತನಿಖೆ ಮಾಡುವವರು ಇವರ ಹೇಳಿಕೆ ವಿಚಾರದಲ್ಲೂ ತನಿಖೆ ಮಾಡಬೇಕು. ಸಿಬಿಐನವರು ನನ್ನ ಜತೆ ವ್ಯವಹಾರ ಇಟ್ಟುಕೊಂಡವರಿಗೆಲ್ಲ ನೊಟೀಸ್ ನೀಡಿ ವಿಚಾರಣೆ ಮಾಡಿದ್ದಾರೆ. ಹೀಗಾಗಿ ಈ ವಿಚಾರದಲ್ಲಿ ನಾಳೆ ಚರ್ಚೆ ಆಗಬೇಕು ಎಂದು ಕಾಂಗ್ರೆಸ್ ಆಗ್ರಹಿಸುತ್ತದೆ.

ಇದನ್ನೂ ಓದಿ: DBoss ಮೇಲೆ ಚಪ್ಪಲಿ ಎಸೆತ : ನುಗುತ್ತಲೇ ʼಪರವಾಗಿಲ್ಲ ಬಿಡು ಚಿನ್ನʼ ಎಂದ ಯಜಮಾನ..!

ಶಿಕ್ಷಣ ವ್ಯವಸ್ಥೆಯ ಹುದ್ದೆ ಮಾರಾಟ ಭ್ರಷ್ಟಾಚಾರದ ವಿಚಾರವಾಗಿದ್ದು, ಬಿಜೆಪಿ ಸಂಸದರು ಹೇಳಿರುವ ವಿಚಾರವನ್ನು ನಾವು ಚರ್ಚೆ ಮಾಡದಿದ್ದರೆ ನಮ್ಮ ಕರ್ತವ್ಯದಲ್ಲಿ ಲೋಪ ಆಗಲಿದೆ. ಹೀಗಾಗಿ ಈ ವಿಚಾರ ತನಿಖೆ ಆಗಬೇಕು, ಜನರಿಗೆ ವಿಚಾರ ತಿಳಿಯಬೇಕು.'

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News