ಬೆಳಗಾವಿ: ಬಿಇಎಂಎಲ್ ಸಂಸ್ಥೆಯ ಬಳಕೆ ಮಾಡದ 967 ಎಕರೆಜಾಗದಲ್ಲಿ ಕೈಗಾರಿಕೆ ಟೌನ್ ಶಿಪ್ ಮಾಡುವ ಕುರಿತು ದಿನಾಂಕ 28/04/ 2022 ರಂದು ಕೇಂದ್ರ ಕಲ್ಲಿದ್ದಲು ಹಾಗೂ ಗಣಿ ಸಚಿವರಿಗೆ ಪ್ರಸ್ತಾಪವನ್ನು ಸಲ್ಲಿಸಿದ್ದೇವೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾಸಚಿವ ಮುರುಗೇಶ್ ಆರ್ ನಿರಾಣಿ ವಿಧಾನಪರಿಷತ್‍ಗೆ ಮಂಗಳವಾರ ತಿಳಿಸಿದರು.
ಸದಸ್ಯ ಗೋವಿಂದರಾಜು ಪರವಾಗಿ ಕೆ.ಎ.ತಿಪ್ಪೇಸ್ವಾಮಿ ಅವರು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕೆಜಿಎಫ್ ತಾಲೂಕಿನ ಬಂಗಾರದ ಗಣಿ ಗ್ರಾಮದಲ್ಲಿ ರಾಜ್ಯ ಸರ್ಕಾರವು ಬಿಇಎಂಎಲ್ಕಾರ್ಖಾನೆ ಸ್ಥಾಪಿಸಲು ಸುಮಾರು 1870.30 ಎಕರೆ ಜಮೀನು ಉದ್ದೇಶಿತ ಸಂಸ್ಥೆಗೆ ಜಮೀನು ಉಪಯೋಗಿಸಿಕೊಂಡು ಬಾಕಿ ಉಳಿದಿರುವ 971.33 ಎಕರೆ ಜಮೀನನ್ನು ಕರ್ನಾಟಕ ಭೂ ಮಂಜುರಾತಿ ಅನ್ವಯ ಎಲ್ಲಾ ಋಣ ಭಾರದಿಂದ ಮುಕ್ತಗೊಳಿಸಿ ಕಂದಾಯ ಇಲಾಖೆಗೆ ವಶಪಡಿಸಿಕೊಳ್ಳಲು ಕೋಲಾರ ಜಿಲ್ಲಾಧಿಕಾರಿಗಳು ಆದೇಶ ನೀಡಿದ್ದಾರೆ ಎಂದು ನಿರಾಣಿ ಹೇಳಿದರು.
ಇದನ್ನೂ ಓದಿ: Halal certificate: ಹಲಾಲ್ ಪ್ರಮಾಣ ಪತ್ರ ನೀಡುತ್ತಿದ್ಯಾ ಸರ್ಕಾರ?? ಉತ್ತರ ಇಲ್ಲಿದೆ…
ಕೆಜಿಎಫ್‍ನಲ್ಲಿನ 13 ಸಾವಿರ ಎಕರೆ ಜಮೀನನ್ನು ಚಿನ್ನದಗಣಿಗಾರಿಕೆಗಾಗಿ ಕೇಂದ್ರ ಸರ್ಕಾರಕ್ಕೆ ಹಸ್ತಾಂತರ ಮಾಡಲಾಗಿತ್ತು. ಈಗ ಗಣಿ ಕಾರ್ಯನಿರ್ವಹಣೆ ಮಾಡುತ್ತಿಲ್ಲ. ಹೆಚ್ಚುವರಿಯಾಗಿ ಉಳಿದಿರುವಭೂಮಿಯನ್ನು ವಾಪಾಸ್ ಪಡೆದುಕೊಳ್ಳಲು ಕೇಂದ್ರ ಸರ್ಕಾರದ ಜೊತೆ ಸಂವಹನ ನಡೆಸಲಾಗಿತ್ತು. ಆರಂಭದಲ್ಲಿ 3500 ಎಕರೆಯನ್ನು ಮರಳಿಕೊಡುತ್ತೇವೆ ಎಂದು ಕೇಂದ್ರ ತಿಳಿಸಿತ್ತು. ಅದಕ್ಕೆ ಪೂರಕವಾಗಿ ಸ್ಪಷ್ಟವಾದ ಚಕ್ಕುಬಂದಿ ತಿಳಿಸಲು ಸೂಚಿಸಲಾಗಿತ್ತು. ರಾಜ್ಯ ಸರ್ಕಾರ ಸರ್ವೇ ನಡೆಸಿದಾಗ ಬಹಳಷ್ಟು ಭೂಮಿ ಒತ್ತುವರಿಯಾಗಿರುವುದು ಕಂಡುಬಂತು ಎಂದು ಸಚಿವ ನಿರಾಣಿ ಹೇಳಿದರು.
ಕೆಲವರು ಅಲ್ಲಿ ಮನೆಗಳನ್ನು ನಿರ್ಮಿಸಿರುವುದನ್ನು ಜಿಲ್ಲಾಧಿಕಾರಿ ಗುರುತಿಸಿದ್ದಾರೆ. ಸರ್ವೇ ವರದಿಯನ್ನು ಕೇಂದ್ರಕ್ಕೆ ಕಳುಹಿಸಿದಾಗ ಅಲ್ಲಿನ ಸಮಿತಿ ಚರ್ಚೆ ನಡೆಸಿ, ಕೇವಲ 3500 ಎಕರೆಯನ್ನಷ್ಟೇ ಅಲ್ಲ ಪೂರ್ತಿಭೂಮಿಯನ್ನು ವಾಪಾಸ್ ನೀಡುತ್ತೇವೆ. ಸಾಲದಹೊಣೆಗಾರಿಕೆಯೊಂದಿಗೆ ಭೂಮಿಯನ್ನು ವಾಪಾಸ್ ತೆಗೆದುಕೊಳ್ಳಿ ಎಂದು ಕೇಂದ್ರ ಸರ್ಕಾರ ತಿಳಿಸಿದೆ ಎಂದು ನಿರಾಣಿ ಹೇಳಿದರು.
ಇದನ್ನೂ ಓದಿ: ಅಶಾಂತಿ ಮೂಡಿಸಲು ಬಿಜೆಪಿ ಆಡುತ್ತಿರುವ ನಾಟಕ: ಡಿ ಕೆ ಶಿವಕುಮಾರ್
ಭೂಮಿಯ ಮೌಲ್ಯಕ್ಕಿಂತ ಸಾಲವೇ ಹೆಚ್ಚಿದೆ. ಅದಕ್ಕಾಗಿ ಒಮ್ಮೆಲೇ ಎಲ್ಲಾಭೂಮಿ ಬೇಡ. ಮೊದಲ ಹಂತದಲ್ಲಿ 3500 ಎಕರೆ ಮಾತ್ರ ನೀಡಿ. ನಂತರ ಎರಡನೇ ಹಂತದಲ್ಲಿ ಉಳಿದ ಭೂಮಿ ಪಡೆದುಕೊಳ್ಳುತ್ತೇವೆಎಂದು ರಾಜ್ಯ ಸರ್ಕಾರ ಸಲಹೆ ನೀಡಿದೆ. ಈ ಸಂವಹನದ ನಂತರ ಕೇಂದ್ರದಿಂದ ಪ್ರತಿಕ್ರಿಯೆ ಬಂದಿಲ್ಲ ಎಂದು ನಿರಾಣಿ ಸ್ಪಷ್ಟ ಪಡಿಸಿದರು.
ಬೆಮೆಲ್‍ನಲ್ಲಿ ಹೆಚ್ಚುವರಿಯಾಗಿ 967 ಎರಕೆ ಭೂಮಿ ಕಂದಾಯ ಇಲಾಖೆ ಅಧೀನದಲ್ಲಿದೆ. ಅದನ್ನು ವಾಪಾಸ್ ಪಡೆದು ಕೈಗಾರಿಕೆಗಳಿಗೆ ಹಂಚಿಕೆ ಮಾಡಲು ಸರ್ಕಾರ ಸಿದ್ಧವಿದೆ. ಆದರೆ ಕಂದಾಯಇಲಾಖೆಯಿಂದ ಈವರೆಗೂ ಭೂಮಿ ಹಸ್ತಾಂತರವಾಗಿಲ್ಲ. ಭೂಮಿನಮ್ಮ ಇಲಾಖೆಗೆ ಬರುತ್ತಿದ್ದಂತೆ ಕೈಗಾರಿಕೆಗಳಿಗೆ ಹಂಚಿಕೆ ಮಾಡಲು ಕ್ರಮಕೈಗೊಳ್ಳಲಾಗುವುದು ಎಂದು ನಿರಾಣಿ ಹೇಳಿದರು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.