Heeraben Modi Health : ಕಳೆದ ಎರಡು ದಿನಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಮನೆಯಲ್ಲಿ ಎರಡು ಪ್ರಮುಖ ಘಟನೆಗಳು ನಡೆದಿವೆ. ಮೊದಲು ಅವರ ಸಹೋದರ ಪ್ರಹ್ಲಾದ್ ಮೋದಿ ಅವರು ಕಾರು ರಾಜ್ಯದ ಮೈಸೂರಿನಲ್ಲಿ ಅಪಘಾತವಾಗಿತ್ತು. ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬುಧವಾರ ಅವರ ತಾಯಿ ಹೀರಾಬೆನ್ ಅವರ ಆರೋಗ್ಯ ಇದ್ದಕ್ಕಿದ್ದಂತೆ ಹದಗೆಟ್ಟಿದೆ. ಅವರನ್ನು ಅಹಮದಾಬಾದ್‌ನ ಯುಎನ್ ಮೆಹ್ತಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ ಅವರನ್ನು ಅಹಮದಾಬಾದ್‌ನ ಯುಎನ್ ಮೆಹ್ತಾ ಇನ್‌ಸ್ಟಿಟ್ಯೂಟ್ ಆಫ್ ಕಾರ್ಡಿಯಾಲಜಿ ಮತ್ತು ರಿಸರ್ಚ್ ಸೆಂಟರ್‌ಗೆ ದಾಖಲಿಸಲಾಗಿದೆ. ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಆಸ್ಪತ್ರೆಯ ಆಡಳಿತ ಮಂಡಳಿ ಇತ್ತೀಚಿಗೆ ಬಿಡುಗಡೆ ಮಾಡಿದ ಹೆಲ್ತ್ ಬುಲೆಟಿನ್‌ನಲ್ಲಿ ಮಾಹಿತಿ ನೀಡಿದೆ. ಅನಾರೋಗ್ಯದಿಂದ ಬಳಲುತ್ತಿರುವ ತಮ್ಮ ತಾಯಿಯನ್ನು ಭೇಟಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಯುಎನ್ ಮೆಹ್ತಾ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ಆಸ್ಪತ್ರೆಗೆ ತಲುಪಿದ ಬಳಿಕ ವೈದ್ಯರ ಬಳಿ ತಾಯಿಯ ಆರೋಗ್ಯದ ಬಗ್ಗೆ ಮೋದಿ ಮಾಹಿತಿ ಪಡೆದುಕೊಂಡಿದ್ದಾರೆ.
ಇದನ್ನೂ ಓದಿ: PM Modi Mother Health : ಪ್ರಧಾನಿ ಮೋದಿಯವರ ತಾಯಿಯ ಆರೋಗ್ಯದಲ್ಲಿ ಏರುಪೇರು.. ಆಸ್ಪತ್ರೆಗೆ ದಾಖಲು!
#WATCH | PM Modi arrives at UN Mehta Institute of Cardiology & Research Centre in Ahmedabad where his mother Heeraben Modi is admitted
As per the hospital, her health condition is stable. pic.twitter.com/j9Yp3udunB
— ANI (@ANI) December 28, 2022
ವಾಸ್ತವವಾಗಿ, ಹೀರಾಬೆನ್ ಮೋದಿ ಅವರು ಕೊರೋನಾ ಸಮಯದಲ್ಲಿ ಲಸಿಕೆ ತೆಗೆದುಕೊಂಡು ಜನರಿಗೆ ಮಾದರಿಯಾದರು, ಕೋವಿಡ್ ಅವಧಿಯಲ್ಲಿ ಜನರು ಲಸಿಕೆಯನ್ನು ತೆಗೆದುಕೊಳ್ಳಲು ಹೆದರಿದಾಗ ಹೀರಾಬೆನ್ ಮೋದಿ ಲಸಿಕೆ ತೆಗೆದುಕೊಂಡಿದ್ದರು. ಹೀರಾಬೆನ್ ತೆಗೆದುಕೊಂಡ ನಂತರ, ಸಮಾಜದ ಅನೇಕ ಜನರು ಲಸಿಕೆ ತೆಗೆದುಕೊಳ್ಳಲು ಮುಂದೆ ಬಂದರು. ಮತ್ತೊಂದೆಡೆ ಮಂಗಳವಾರ ನಡೆದ ಕಾರು ಅಪಘಾತದಲ್ಲಿ ಪ್ರಧಾನಿ ಮೋದಿ ಅವರ ಕಿರಿಯ ಸಹೋದರ ಗಾಯಗೊಂಡಿದ್ದರು.
ಮಂಗಳವಾರ ಮುಂಜಾನೆ ಸಂಭವಿಸಿದ ಕಾರು ಅಪಘಾತದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಕಿರಿಯ ಸಹೋದರ ಪ್ರಹ್ಲಾದ್ ಮೋದಿ ಗಾಯಗೊಂಡಿದ್ದಾರೆ. ವರದಿಗಳ ಪ್ರಕಾರ, ಅವರು ತಮ್ಮ ಮಗ, ಸೊಸೆ ಮತ್ತು ಮೊಮ್ಮಗನೊಂದಿಗೆ ಬಂಡೀಪುರಕ್ಕೆ ತೆರಳುತ್ತಿದ್ದಾಗ ಕರ್ನಾಟಕದ ಮೈಸೂರು ಬಳಿ ಅವರ ಮರ್ಸಿಡಿಸ್ ಬೆಂಜ್ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ, ಪ್ರಹ್ಲಾದ್ ಮೋದಿ ಮತ್ತು ಅವರ ಕುಟುಂಬದವರಿಗೆ ಜೆಎಸ್ಎಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.