ಬೆಂಗಳೂರು: ಐತಿಹಾಸಿಕ ಸ್ಟೋರಿ, ಸ್ಟಾರ್ ಡೈರೆಕ್ಟರ್, ಸ್ಟಾರ್ ತಾರಾಗಣ, ಅದ್ದೂರಿ ಮೇಕಿಂಗ್, ಸಂಗೀತ ಮಾಂತ್ರಿಕನ ಮ್ಯೂಸಿಕ್ ಇದೆಲ್ಲವೂ ಒಳಗೊಂಡ ಸಿನಿಮಾವೇ ‘ಪೊನ್ನಿಯಿನ್ ಸೆಲ್ವನ್’. ಸೆಪ್ಟೆಂಬರ್ 30ರಂದು ಮೊದಲ ಸೀಕ್ವೆಲ್ ರಿಲೀಸ್ ಆಗಿ ವರ್ಲ್ಡ್ ವೈಡ್ ಸೂಪರ್ ಸಕ್ಸಸ್ ಕಂಡ ಚಿತ್ರದಿಂದ ಇದೀಗ ಹೊಸ ಅಪ್ಡೇಟ್ ಹೊರಬಿದ್ದಿದೆ. ‘ಪೊನ್ನಿಯಿನ್ ಸೆಲ್ವನ್’ ಸೀಕ್ವೆಲ್ 2 ಬಿಡುಗಡೆಗೆ ಮುಹೂರ್ತ ಫಿಕ್ಸ್ ಆಗಿದ್ದು, 2023 ಏಪ್ರಿಲ್ 28ಕ್ಕೆ ಸಿನಿಮಾ ವರ್ಲ್ಡ್ ವೈಡ್ ರಿಲೀಸ್ ಆಗ್ತಿದೆ.
ಭಾರತೀಯ ಚಿತ್ರರಂಗದ ಖ್ಯಾತ ನಿರ್ದೇಶಕ ಮಣಿರತ್ನಂ ಡ್ರೀಮ್ ಪ್ರಾಜೆಕ್ಟ್ ‘ಪೊನ್ನಿಯಿನ್ ಸೆಲ್ವನ್’. ಕಾರ್ತಿ, ಐಶ್ವರ್ಯಾ ರೈ, ಚಿಯಾನ್ ವಿಕ್ರಮ್, ಜಯಂ ರವಿ, ತ್ರಿಶಾ, ಶರತ್ ಕುಮಾರ್, ಪ್ರಕಾಶ್ ರಾಜ್ರಂತಹ ದಿಗ್ಗಜ ಕಲಾವಿದರ ಸಮಾಗಮವಿರುವ ಈ ಚಿತ್ರ ಪ್ರೇಕ್ಷಕ ಮಹಾಶಯರಿಂದಲೂ ಬಹುಪರಾಕ್ ಪಡೆದುಕೊಂಡಿತ್ತು. ಈ ಸಿನಿಮಾಗೆ ಮಣಿರತ್ನಂ ನಿರ್ದೇಶನ ಒಂದು ಶಕ್ತಿಯಾದ್ರೆ, ಎ.ಆರ್.ರೆಹಮಾನ್ ಮ್ಯೂಸಿಕ್, ರವಿವರ್ಮನ್ ಕ್ಯಾಮೆರಾ ವರ್ಕ್, ಸ್ಟಾರ್ ಹಾಗೂ ಅನುಭವಿ ಕಲಾವಿದರ ನಟನೆ, ಅದ್ದೂರಿ ಮೇಕಿಂಗ್ ಎಲ್ಲವೂ ತೆರೆ ಮೇಲೆ ಕಮಾಲ್ ಮಾಡಿತ್ತು.
ಇದನ್ನೂ ಓದಿ: ಹುಟ್ಟುಹಬ್ಬಕ್ಕೆ ‘ಎಡಗೈಯೇ ಅಪಘಾತಕ್ಕೆ ಕಾರಣ ಎನ್ನುತ್ತಿದ್ದಾರೆ ದೂದ್ ಪೇಡ ದಿಗಂತ್..!
Let’s get those swords in the air as we await the 28th of April 2023!#CholasAreBack #PS1 #PS2 #PonniyinSelvan #ManiRatnam @arrahman @madrastalkies_ @LycaProductions @Tipsofficial @tipsmusicsouth @IMAX @primevideoIN pic.twitter.com/gqit85Oi4j
— Lyca Productions (@LycaProductions) December 28, 2022
‘ಪೊನ್ನಿಯಿನ್ ಸೆಲ್ವನ್’ ಚಿತ್ರಕ್ಕೆ ಎಲ್ಲೆಡೆ ಸಿಕ್ಕ ರೆಸ್ಪಾನ್ಸ್ ಚಿತ್ರತಂಡದ ಸಂಭ್ರಮವನ್ನು ಇಮ್ಮಡಿಗೊಳಿಸಿತ್ತು. ಇದೀಗ ಮತ್ತೊಮ್ಮೆ ತೆರೆ ಮೇಲೆ ಮ್ಯಾಜಿಕ್ ಸೃಷ್ಟಿಸಲು ಚಿತ್ರತಂಡ ರೆಡಿಯಾಗಿದೆ. ಸೀಕ್ವಲ್ 2 ಬಿಡುಗಡೆ ದಿನಾಂಕವನ್ನು ಅನೌನ್ಸ್ ಮಾಡಿದೆ.
ಲೇಖಕ ಹಾಗೂ ಸ್ವಾತಂತ್ರ್ಯ ಹೋರಾಟಗಾರ ಕಲ್ಕಿ ಕೃಷ್ಣಮೂರ್ತಿ ಬರೆದ ‘ಪೊನ್ನಿಯಿನ್ ಸೆಲ್ವನ್’ ಐತಿಹಾಸಿಕ ಕಾದಂಬರಿ ಆಧಾರಿತ ಚಿತ್ರ. ಸೆಪ್ಟೆಂಬರ್ 30ರಲ್ಲಿ ತೆರೆಕಂಡ ಮೊದಲ ಭಾಗ ವರ್ಲ್ ವೈಡ್ ಅಭೂತ ಪೂರ್ವ ರೆಸ್ಪಾನ್ಸ್ ಪಡೆದುಕೊಂಡಿತ್ತು. ಇದೀಗ ಆ ಗೆಲುವಿನ ಸಂಭ್ರಮದಲ್ಲೇ 2ನೇ ಸೀಕ್ವೆಲ್ ಬಿಡುಗಡೆಗೆ ದಿನಾಂಕ ಫಿಕ್ಸ್ ಮಾಡಿದೆ ಚಿತ್ರತಂಡ. ಏಪ್ರಿಲ್ 28ಕ್ಕೆ ‘ಪೊನ್ನಿಯಿನ್ ಸೆಲ್ವನ್’ ಸೀಕ್ವೆಲ್ 2 ತೆರೆಮೇಲೆ ಮ್ಯಾಜಿಕ್ ಸೃಷ್ಟಿಸಲು ಬರಲಿದೆ. ಲೈಕಾ ಪ್ರೊಡಕ್ಷನ್ಸ್ ಮತ್ತು ಮದ್ರಾಸ್ ಟಾಕೀಸ್ ಬ್ಯಾನರ್ನಡಿ ಈ ಅದ್ದೂರಿ ಸಿನಿಮಾ ನಿರ್ಮಾಣವಾಗಿದ್ದು, ಶ್ರೀಕರ್ ಪ್ರಸಾದ್ ಸಂಕಲನ ಚಿತ್ರಕ್ಕಿದೆ.
ಇದನ್ನೂ ಓದಿ: ಅಪ್ಪು ಅಭಿಮಾನಿಗಳ ಬೃಹತ್ ಪ್ರತಿಭಟನೆ : ವಿರೋಧಿಗಳಿಗೆ ಖಡಕ್ ವಾರ್ನಿಂಗ್ ರವಾನೆ..!
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.