Rishabh Pant car accident : ಟೀಂ ಇಂಡಿಯಾದ ಸ್ಟಾರ್ ವಿಕೆಟ್ ಕೀಪರ್ ಮತ್ತು ಬ್ಯಾಟ್ಸ್ ಮನ್ ರಿಷಬ್ ಪಂತ್ ಕಾರು ಅಪಘಾತಕ್ಕೀಡಾಗಿದೆ. ರೂರ್ಕಿಯ ನರ್ಸನ್ ಗಡಿಯಲ್ಲಿರುವ ಹಮ್ಮದ್ಪುರ ಝಾಲ್ ಬಳಿ ಪಂತ್ ಅವರ ಕಾರು ರೇಲಿಂಗ್ಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಪಂತ್ ಗಂಭೀರವಾಗಿ ಗಾಯಗೊಂಡಿದ್ದಾರೆ. ತಲೆ, ಕಾಲು ಮತ್ತು ಬೆನ್ನಿಗೆ ಗಂಭೀರ ಗಾಯಗಳಾಗಿವೆ. ಈ ಅಪಘಾತಕ್ಕೆ ಸಂಬಂಧಿಸಿದ ಹಲವು ಫೋಟೋಗಳು ಮತ್ತು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ. ಇತ್ತೀಚೆಗಷ್ಟೇ ಪಂತ್ ಕಾರು ಅಪಘಾತಕ್ಕೆ ಮುಖ್ಯ ಕಾರಣ ಬಯಲಾಗಿದೆ.
ಸ್ವತಃ ರಿಷಭ್ ಪಂತ್ ಕಾರು ಚಲಾಯಿಸಿಕೊಂಡು ಬರುತ್ತಿದ್ದರು. ಕಾರು ಚಾಲನೆ ಮಾಡುವಾಗ ನಿದ್ರಿಸಿದ್ದಾರೆ. ಇದರಿಂದ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದೆ. ಅಲ್ಲದೆ, ರೇಲಿಂಗ್ಗೆ ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಹೊತ್ತಿಕೊಂಡಿದೆ. ಪಂತ್ ಕಾರಿನ ಗಾಜುಗಳನ್ನು ಒಡೆದು ಹೊರಗೆ ಹಾರಿದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದಾರೆ. ಪಂತ್ ಕಾರಿನಲ್ಲಿಯೇ ಇದ್ದಿದ್ದರೆ ದೊಡ್ಡ ಅಪಘಾತ ಸಂಭವಿಸುತ್ತಿತ್ತು ಎನ್ನುತ್ತಾರೆ ಸ್ಥಳೀಯರು. ಪಂತ್ ಶೀಘ್ರ ಗುಣಮುಖರಾಗಲಿ ಎಂದು ಕ್ರಿಕೆಟಿಗರು ಮತ್ತು ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ.
ಇದನ್ನೂ ಓದಿ: Rishabh Pant car Accident: ಭೀಕರ ಅಪಘಾತಕ್ಕೀಡಾಗಿ ಸುಟ್ಟು ಕರಕಲಾದ ರಿಷಬ್ ಪಂತ್ ಕಾರು: ಕ್ರಿಕೆಟಿಗನಿಗೆ ಗಂಭೀರ ಗಾಯ!
ಅಪಘಾತವಾದ ತಕ್ಷಣ ಪಂತ್ ಅವರನ್ನು ರೂರ್ಕಿಯ ಆಸ್ಪತ್ರೆಗೆ ದಾಖಲಿಸಲಾಗಿದೆ. ನಂತರ ಅವರನ್ನು ಡೆಹ್ರಾಡೂನ್ಗೆ ಕಳುಹಿಸಲಾಯಿತು. ಅಲ್ಲಿಂದ ದೆಹಲಿಗೆ ಶಿಫ್ಟ್ ಆಗಿರುವುದು ಗೊತ್ತಾಗಿದೆ. ಅವರ ಬಲಗಾಲಿಗೆ ಭಾರಿ ಹೊಡೆದ ಬಿದ್ದಿದೆ ಎಂದು ತಿಳಿದು ಬಂದಿದೆ. ಸದ್ಯ ಪಂತ್ ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ರಿಷಬ್ ಪಂತ್ ಈಗಾಗಲೇ ಮೊಣಕಾಲಿನ ಗಾಯದಿಂದ ಬಳಲುತ್ತಿದ್ದರು. ಇದರಿಂದ ಶ್ರೀಲಂಕಾ ಸರಣಿಯನ್ನು ಕಳೆದುಕೊಂಡಿದ್ದರು. ಇದೀಗ ಮುಂದಿನ ಕೆಲವು ತಿಂಗಳುಗಳ ಕಾಲ ಕ್ರಿಕೆಟ್ ಕ್ಷೇತ್ರದಿಂದ ಪಂತ್ ದೂರ ಉಳಿಯಬಹುದು.
ರಿಷಬ್ ಪಂತ್ 2022ರಲ್ಲಿ ಟೀಂ ಇಂಡಿಯಾ ಪರ ಒಟ್ಟು 7 ಟೆಸ್ಟ್ ಪಂದ್ಯಗಳನ್ನು ಆಡಿದ್ದಾರೆ. ಅವರು 61.81 ಸರಾಸರಿಯಲ್ಲಿ 680 ರನ್ ಗಳಿಸಿದರು. ಇತ್ತೀಚಿನ ಬಾಂಗ್ಲಾದೇಶ ಪ್ರವಾಸದ ವೇಳೆ ಟೆಸ್ಟ್ ಸರಣಿಯಲ್ಲಿಯೂ ಅವರು ಮ್ಯಾಚ್ ವಿನ್ನಿಂಗ್ ಇನ್ನಿಂಗ್ಸ್ ಆಡಿದ್ದರು. 12 ODIಗಳಲ್ಲಿ 37.33 ಸರಾಸರಿಯಲ್ಲಿ 336 ರನ್ ಗಳಿಸಿದ್ದಾರೆ. ಟಿ20 ಮಾದರಿಯಲ್ಲಿ 25 ಪಂದ್ಯಗಳನ್ನು ಆಡಿರುವ ಪಂತ್ 21.41ರ ಸರಾಸರಿಯಲ್ಲಿ 364 ರನ್ ಗಳಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.