ಸಿದ್ದೇಶ್ವರ ಶ್ರೀಗಳು ಲಿಂಗೈಕ್ಯ

ಶ್ರೀಗಳ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿರುವ ಸಿಎಂ ಬೊಮ್ಮಾಯಿ "ವಿಜಯಪುರದ ಜ್ಞಾನ ಯೋಗಾಶ್ರಮದ ಪರಮ ಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿಯವರು ಲಿಂಗೈಕ್ಯರಾದ ಸುದ್ದಿ ತಿಳಿದು ಅತ್ಯಂತ ದುಃಖವಾಗಿದೆ. ತಮ್ಮ ಪ್ರವಚನಗಳ ಮೂಲಕ ಮನುಕುಲದ ಉದ್ಧಾರಕ್ಕೆ ಶ್ರಮಿಸಿದ ಶ್ರೀಗಳ ಸೇವೆ ಅಮೋಘ ಹಾಗೂ ಅನನ್ಯವಾದುದು" ಎಂದು ಕಂಬನಿ ಮಿಡಿದಿದ್ದಾರೆ.

Written by - Zee Kannada News Desk | Last Updated : Jan 2, 2023, 10:42 PM IST
  • ಜ್ಞಾನಯೋಗಾಶ್ರಮದ ಸಿದ್ದೇಶ್ವರ ಶ್ರೀಗಳು ಅನಾರೋಗ್ಯದಿಂದಾಗಿ ತಮ್ಮ 82 ನೇ ವಯಸ್ಸಿನಲ್ಲಿ ಕೊನೆಯಿಸಿರೆಳೆದಿದ್ದಾರೆ.
  • ಶ್ರೀಗಳ ನಿಧನದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನಾಳೆ ಬೆಳಗ್ಗೆ 11 ಕ್ಕೆ ವಿಜಯಪುರಕ್ಕೆ ಪ್ರಯಾಣಿಸಲಿದ್ದಾರೆ.
  • ಜಿಲ್ಲೆಯಲ್ಲಿರುವ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆಯನ್ನು ಘೋಷಿಸಲಾಗಿದೆ.
 ಸಿದ್ದೇಶ್ವರ ಶ್ರೀಗಳು ಲಿಂಗೈಕ್ಯ title=
file photo

ವಿಜಯಪುರ: ಜ್ಞಾನಯೋಗಾಶ್ರಮದ ಸಿದ್ದೇಶ್ವರ ಶ್ರೀಗಳು ಅನಾರೋಗ್ಯದಿಂದಾಗಿ ತಮ್ಮ 82 ನೇ ವಯಸ್ಸಿನಲ್ಲಿ ಕೊನೆಯಿಸಿರೆಳೆದಿದ್ದಾರೆ.ಶ್ರೀಗಳ ನಿಧನದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನಾಳೆ ಬೆಳಗ್ಗೆ 11 ಕ್ಕೆ ವಿಜಯಪುರಕ್ಕೆ ಪ್ರಯಾಣಿಸಲಿದ್ದಾರೆ. ಜಿಲ್ಲೆಯಲ್ಲಿರುವ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆಯನ್ನು ಘೋಷಿಸಲಾಗಿದೆ.

ಶ್ರೀಗಳ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿರುವ ಸಿಎಂ ಬೊಮ್ಮಾಯಿ "ವಿಜಯಪುರದ ಜ್ಞಾನ ಯೋಗಾಶ್ರಮದ ಪರಮ ಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿಯವರು ಲಿಂಗೈಕ್ಯರಾದ ಸುದ್ದಿ ತಿಳಿದು ಅತ್ಯಂತ ದುಃಖವಾಗಿದೆ. ತಮ್ಮ ಪ್ರವಚನಗಳ ಮೂಲಕ ಮನುಕುಲದ ಉದ್ಧಾರಕ್ಕೆ ಶ್ರಮಿಸಿದ ಶ್ರೀಗಳ ಸೇವೆ ಅಮೋಘ ಹಾಗೂ ಅನನ್ಯವಾದುದು" ಎಂದು ಕಂಬನಿ ಮಿಡಿದಿದ್ದಾರೆ.

 

ಜಲ ಸಂಪನ್ಮೂಲ ಸಚಿವ ಗೋವಿಂದ್ ಕಾರಜೋಳ ಅವರು ಶ್ರೀಗಳ ನಿಧನಕ್ಕೆ ಸಂತಾಪ ಸೂಚಿಸುತ್ತಾ"   ಇಹಪರ ಎರಡೂ ಒಂದೆ ಎಂದು ಸಾರುತ್ತ ಅದರಂತೆ ನಡೆಯುತ್ತ ಇರುವ ಅಪರೂಪದ ಯೋಗಿಗಳು ಶ್ರೀ ಸಿದ್ದೇಶ್ವರ ಸ್ವಾಮೀಜಿ. ನಿಸರ್ಗವನ್ನು ಅತ್ಯಂತ ಹೆಚ್ಚಾಗಿ ಪ್ರೀತಿಸುತ್ತಿದ್ದ ಗುರುಗಳು ಇಂದು ನಮ್ಮನ್ನು  ಅಗಲಿರುವುದು ಅಪಾರ ದುಃಖ ತಂದಿದೆ.ಅವರ ಅವರ ಅಗಲುವಿಕೆಯಿಂದ ನಾಡಿನ ಆಧ್ಯಾತ್ಮಿಕ ಕೊಂಡಿಯೊಂದು ಕಳಚಿದಂತಾಗಿದೆ.ಸಿದ್ದೇಶ್ವರ ಸ್ವಾಮಿಜಿಗಳ ಅಗಲುವಿಕೆಯಿಂದ ಅವರ ಅಪಾರ ಭಕ್ತ ಸಮೂಹಕ್ಕೆ ಆಗಿರುವ ದುಃಖದಲ್ಲಿ ನಾನು ಭಾಗಿ.
ವಯಕ್ತಿಕವಾಗಿ ಪೂಜ್ಯರೊಂದಿಗೆ 50 ವರ್ಷಗಳ ಸುಧಿರ್ಘ ಒಡನಾಟ ಅಂತ್ಯ ಗೊಂಡಿದ್ದು ದುಃಖತಂದಿದೆ.ದಯಾಘನನಾದ ಭಗವಂತನು ಅವರ ಆತ್ಮಕ್ಕೆ ಚಿರಶಾಂತಿಯನ್ನು ನೀಡಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುವೆ" ಎಂದು ಕಂಬನಿ ಮಿಡಿದಿದ್ದಾರೆ.

ಸಕಲ ಸರ್ಕಾರೀ ಗೌರವಗಳೊಂದಿಗೆ ಸಾಯಂಕಾಲ ಐದು ಗಂಟೆಗೆ ಅಂತ್ಯಕ್ರಿಯೆ ಜರುಗಲಿದ್ದು, ಸೈನಿಕ ಶಾಲೆಯಲ್ಲಿ ಸಾರ್ವಜನಿಕರಿಗೆ ದರ್ಶನದ ವ್ಯವಸ್ಥೆಯನ್ನು ಮಾಡಲಾಗಿದೆ.ಸಿಎಂ ಜೊತೆ ಸಚಿವ ಸಂಪುಟದ ಸದಸ್ಯರು ಸಹಿತ ವಿಜಯಪುರಕ್ಕೆ ಪ್ರಯಾಣ ಬೆಳೆಸಲಿದ್ದಾರೆ ಎನ್ನಲಾಗಿದೆ.

ವಿಜಯಪುರ ಜ್ಞಾನಯೋಗಾಶ್ರಮದ ಪರಮ ಪೂಜ್ಯ ಶ್ರೀ ಸಿದ್ಧೇಶ್ವರ ಸ್ವಾಮೀಜಿಗಳು ಆಧ್ಯಾತ್ಮದ ಬಗ್ಗೆ ತುಂಬ ಆಳವಾದ ಅಧ್ಯಯನ ಚಿಂತನೆಗಳನ್ನು ನಡೆಸಿರುವ ಶ್ರೇಷ್ಠ ಅನುಭಾವಿಗಳೂ ಮಧುರ ಸ್ವಭಾವದವರೂ ಆಗಿದ್ದು ಕನ್ನಡ, ಸಂಸ್ಕೃತ,ಇಂಗ್ಲಿಷ್, ಮರಾಠಿ ಮತ್ತು ಹಿಂದಿ ಭಾಷೆಗಳಲ್ಲಿ ನಿಷ್ಣಾತರಾಗಿದ್ದರು.

Trending News