ನವದೆಹಲಿ: 2023ರಲ್ಲಿ ನಡೆಯಲಿರುವ ಏಷ್ಯಾಕಪ್ ಟೂರ್ನಿಯಲ್ಲಿ ಭಾರತ ಹಾಗೂ ಪಾಕಿಸ್ತಾನ ಮತ್ತೆ ಮುಖಾಮುಖಿಯಾಗಲಿವೆ. ಹೌದು, ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯಕ್ಕಾಗಿ ಇಡೀ ವಿಶ್ವವೇ ಕಾತುರದಿಂದ ಕಾಯುತ್ತದೆ. ಅದೇ ರೀತಿ ಮತ್ತೊಮ್ಮೆ ಸಾಂಪ್ರದಾಯಿಕ ಬದ್ಧ ಎದುರಾಳಿಗಳ ನಡುವೆ ಭರ್ಜರಿ ಕಾಳಗಕ್ಕೆ ವೇದಿಕೆ ಸಜ್ಜಾಗುತ್ತಿದೆ.
ಏಷ್ಯನ್ ರಾಷ್ಟ್ರಗಳ 2023 ಮತ್ತು 2024ರ ವೇಳಾಪಟ್ಟಿಯನ್ನು ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಅಧ್ಯಕ್ಷ ಜೈ ಶಾ ಗುರುವಾರ ಪ್ರಕಟಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಮುಂದಿನ 2 ವರ್ಷಗಳಲ್ಲಿ ನಡೆಯಲಿರುವ ಮಹತ್ವದ ಕ್ರಿಕೆಟ್ ಟೂರ್ನಿಗಳ ಬಗ್ಗೆ ಸಂಪೂರ್ಣ ಮಾಹಿತಿ ನೀಡಿದ್ದಾರೆ. ಇತ್ತೀಚೆಗಷ್ಟೇ ಮುಕ್ತಾಯವಾದ ಏಷ್ಯಾಕಪ್ನಲ್ಲಿ ಭಾರತ ಮತ್ತು ಪಾಕ್ 2 ಬಾರಿ ಮುಖಾಮುಖಿಯಾಗಿದ್ದವು. ಗ್ರೂಪ್ ಹಂತದಲ್ಲಿ ಭಾರತ ಗೆದ್ದರೆ, ಸೂಪರ್ 4ರಲ್ಲಿ ಪಾಕಿಸ್ತಾನ ಗೆಲುವು ಸಾಧಿಸಿತ್ತು. ಭಾರತವನ್ನು ಸೋಲಿಸಿದ್ದ ಪಾಕ್ ಫೈನಲ್ ಪ್ರವೇಶಿಸಿತ್ತು. ಕೊನೆಗೆ ಪಾಕ್ ತಂಡವನ್ನು ಮಣಿಸಿದ ಶ್ರೀಲಂಕಾ ಚಾಂಪಿಯನ್ ಆಗಿ ಹೊರಹೊಮ್ಮಿತು.
ಆ ಬಳಿಕ ಭಾರತ ಮತ್ತು ಪಾಕ್ 2022ರ ಟಿ-20 ವಿಶ್ವಕಪ್ನಲ್ಲಿ ಮುಖಾಮುಖಿಯಾಗಿದ್ದವು. ಈ ರೋಚಕ ಪಂದ್ಯದಲ್ಲಿ ಭಾರತ ಭರ್ಜರಿ ಗೆಲುವು ದಾಖಲಿಸಿತ್ತು. ಇದೀಗ ಭಾರತ-ಪಾಕ್ ತಂಡಗಳ ನಡುವೆ ಮತ್ತೊಮ್ಮೆ ಸೆಣಸಾಟ ನಡೆಯಲಿದೆ. ಉಭಯ ತಂಡಗಳು 2023ರ ಏಷ್ಯಾಕಪ್ನಲ್ಲಿ ಮತ್ತೊಮ್ಮೆ ಕಣಕ್ಕಿಳಿಯಲಿವೆ. ಈ ಬಾರಿಯ ಏಷ್ಯಾಕಪ್ನಲ್ಲಿ ಒಟ್ಟು 6 ತಂಡಗಳು ಭಾಗವಹಿಸಲಿದ್ದು, ಈ ತಂಡಗಳನ್ನು 2 ಗುಂಪುಗಳಾಗಿ ವಿಂಗಡಿಸಲಾಗಿದೆ. ವಿಶೇಷವೆಂದರೆ ಭಾರತ ಮತ್ತು ಪಾಕ್ ಒಂದೇ ಗುಂಪಿನಲ್ಲಿವೆ.
ಇದನ್ನೂ ಓದಿ: ಭುವನೇಶ್ವರ್ ವೃತ್ತಿಜೀವನಕ್ಕೆ ಮುಳುವಾದ ಟೀಂ ಇಂಡಿಯಾದ ಈ ಆಟಗಾರ!
ಈ ಬಾರಿಯ ಏಷ್ಯಾಕಪ್ ಸೆಪ್ಟೆಂಬರ್ನಲ್ಲಿ ನಡೆಯಲಿದ್ದು, ಒಟ್ಟು 6 ತಂಡಗಳು ಟೂರ್ನಿಯಲ್ಲಿ ಆಡಲಿವೆ. ಈ ಬಾರಿಯ ಪಂದ್ಯಾವಳಿ ಏಕದಿನ ಮಾದರಿ ಅಂದರೆ 50 ಓವರ್ಗಳ ಪಂದ್ಯ ನಡೆಯಲಿದೆ. ಭಾರತ ಮತ್ತು ಪಾಕಿಸ್ತಾನ ತಂಡಗಳು ಗ್ರೂಪ್ 1ರಲ್ಲಿ ಸ್ಥಾನ ಪಡೆದಿದ್ದರೆ, ಅರ್ಹತಾ ಸುತ್ತಿನಲ್ಲಿ ಮೊದಲ ಸ್ಥಾನ ಪಡೆಯುವ ತಂಡ ಈ 2 ತಂಡಗಳೊಂದಿಗೆ ಮೊದಲನೇ ಗುಂಪಿನಲ್ಲಿ ಸ್ಥಾನ ಪಡೆಯಲ್ಲಿದೆ. ಇನ್ನು 2ನೇ ಗುಂಪಿನಲ್ಲಿ ಶ್ರೀಲಂಕಾ, ಅಫ್ಘಾನಿಸ್ತಾನ, ಬಾಂಗ್ಲಾದೇಶ ಸ್ಥಾನ ಪಡೆದಿವೆ. ಲೀಗ್ ಹಂತದಲ್ಲಿ ಒಟ್ಟು 6 ಪಂದ್ಯಗಳು ನಡೆಯಲಿದ್ದು, ನಂತರ ಸೂಪರ್-4ರ ಸುತ್ತಿನ ಪಂದ್ಯಗಳು ನಡೆಯಲಿವೆ.
Presenting the @ACCMedia1 pathway structure & cricket calendars for 2023 & 2024! This signals our unparalleled efforts & passion to take this game to new heights. With cricketers across countries gearing up for spectacular performances, it promises to be a good time for cricket! pic.twitter.com/atzBO4XjIn
— Jay Shah (@JayShah) January 5, 2023
ಈ ಬಾರಿಯ ಏಷ್ಯಾಕಪ್ನಲ್ಲಿ ಒಟ್ಟು 13 ಪಂದ್ಯಗಳು ನಡೆಯಲಿವೆ. ಭಾರತ, ಪಾಕಿಸ್ತಾನ ಮತ್ತು ಕ್ವಾಲಿಫೈಯರ್ ಪೈಕಿ ಒಂದು ತಂಡವು ಗುಂಪು ಹಂತದಲ್ಲಿಯೇ ಹೊರಬೀಳಲಿದೆ. ಸೂಪರ್ 4ರ ಸುತ್ತಿನಲ್ಲಿ ಒಟ್ಟು 6 ಪಂದ್ಯಗಳು ನಡೆಯಲಿದ್ದು, ಆ ಬಳಿಕ ಫೈನಲ್ ಆಡುವ 2 ತಂಡಗಳನ್ನು ನಿರ್ಧರಿಸಲಾಗುತ್ತದೆ.
ಭಾರತ-ಪಾಕಿಸ್ತಾನ 3 ಬಾರಿ ಮುಖಾಮುಖಿ?
ಏಷ್ಯಾಕಪ್ನಲ್ಲಿ ಭಾರತ ಮತ್ತು ಪಾಕಿಸ್ತಾನ 3 ಬಾರಿ ಮುಖಾಮುಖಿಯಾಗುವ ಸಾಧ್ಯತೆ ಇದೆ. ಮೊದಲನೆಯದಾಗಿ ಉಭಯ ತಂಡಗಳ ನಡುವಿನ ಪೈಪೋಟಿ ಲೀಗ್ ಸುತ್ತಿನಲ್ಲಿ ನಡೆಯಲಿದೆ. ಇದಾದ ಬಳಿಕ ಸೂಪರ್-4 ಸುತ್ತಿನಲ್ಲೂ ಉಭಯ ತಂಡಗಳು ಸೆಣಸಾಡಬಹುದು. ಬಳಿಕ ಪಾಯಿಂಟ್ ಪಟ್ಟಿಯಲ್ಲಿ ಉಭಯ ತಂಡಗಳು ಅಗ್ರ 2 ಸ್ಥಾನ ಪಡೆದರೆ, ಉಭಯ ತಂಡಗಳು ಫೈನಲ್ನಲ್ಲೂ ಹೋರಾಟ ನಡೆಸಲಿವೆ.
ಇದನ್ನೂ ಓದಿ: Team India : ಆಯ್ಕೆಗಾರರ ‘ಅನ್ಯಾಯ’ಕ್ಕೆ ಬಲಿಯಾದ ಟೀಂ ಇಂಡಿಯಾದ ಈ ಆಟಗಾರ!
ವರದಿಗಳ ಪ್ರಕಾರ 2023ರ ಏಷ್ಯಾಕಪ್ ಪಾಕಿಸ್ತಾನದಲ್ಲಿಯೇ ನಡೆಯಬೇಕಿತ್ತು. ಆದರೆ ACC ಮುಖ್ಯಸ್ಥ ಜೈ ಶಾ ಈ ಪಂದ್ಯಾವಳಿಯನ್ನು ಪಾಕಿಸ್ತಾನದ ನೆಲದಲ್ಲಿ ಆಯೋಜಿಸುವುದಿಲ್ಲವೆಂದು ಸ್ಪಷ್ಟಪಡಿಸಿದ್ದರು. ಉಗ್ರ ದಾಳಿಯ ಸಾಧ್ಯತೆ ಕಾರಣ ಆಟಗಾರರಿಗೆ ಭದ್ರತೆ ಒದಗಿಸುವುದು ಕಷ್ಟ. ಹೀಗಾಗಿ ಕೇಂದ್ರ ಸರ್ಕಾರ ಒಪ್ಪಿಗೆ ನೀಡುವವರೆಗೂ ನಾವು ಪಾಕಿಸ್ತಾನ ಪ್ರವಾಸ ಕೈಗೊಳ್ಳುವುದಿಲ್ಲವೆಂದು ಬಿಸಿಸಿಐ ಸ್ಪಷ್ಟಪಡಿಸಿದೆ. ‘ನೀವು ಪಾಕಿಸ್ತಾನಕ್ಕೆ ಏಷ್ಯಾಕಪ್ ಆಡಲು ಬರದಿದ್ದರೆ, ನಾವೂ ಸಹ ವಿಶ್ವಕಪ್ ಆಡಲು ಭಾರತಕ್ಕೆ ಬರುವುದಿಲ್ಲವೆಂದು ಪಿಸಿಬಿ ಹೇಳಿತ್ತು. ಹೀಗಾಗಿ 2023ನೇ ಸಾಲಿನ ಏಕದಿನ ಮಾದರಿಯ ಏಷ್ಯಾಕಪ್ ಟೂರ್ನಿಯನ್ನು ಎಲ್ಲಿ ಆಯೋಜಿಸಲಾಗುತ್ತದೆ ಅನ್ನೋದು ತೀವ್ರ ಕುತೂಹಲ ಮೂಡಿಸಿದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.