Araga Jnanendra : 'ಸ್ಯಾಂಟ್ರೋ ರವಿ ವಶಕ್ಕೆ ಪಡೆಯಲು ಸೂಚನೆ ನೀಡಿದ್ದೇನೆ'

ಸ್ಯಾಂಟ್ರೋ ರವಿ ವಶಕ್ಕೆ ಪಡೆಯಲು ಸೂಚನೆ ನೀಡಿದ್ದೇನೆ. ಅಲ್ಲದೆ, ಮೈಸೂರು ಪೊಲೀಸರಿಗೆ ವಿಚಾರಣೆ ಮಾಡಲು ತಿಳಿಸಿದ್ದೇನೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. 

Written by - Channabasava A Kashinakunti | Last Updated : Jan 7, 2023, 04:13 PM IST
  • ಸ್ಯಾಂಟ್ರೋ ರವಿ ವಶಕ್ಕೆ ಪಡೆಯಲು ಸೂಚನೆ ನೀಡಿದ್ದೇನೆ
  • ಹೆಚ್.ಡಿ. ಕುಮಾರಸ್ವಾಮಿ ಜೊತೆ ಸಂಪರ್ಕ ಹೇಗೆ ಎಂಬುದು ಗೊತ್ತಾಗಬೇಕಿದೆ
  • ಎನ್ ಐಎ ತಂಡ ಕೂಲಂಕುಶವಾಗಿ ತನಿಖೆ ಮಾಡುತ್ತಿದೆ
Araga Jnanendra : 'ಸ್ಯಾಂಟ್ರೋ ರವಿ ವಶಕ್ಕೆ ಪಡೆಯಲು ಸೂಚನೆ ನೀಡಿದ್ದೇನೆ' title=

ಶಿವಮೊಗ್ಗ : ಸ್ಯಾಂಟ್ರೋ ರವಿ ವಶಕ್ಕೆ ಪಡೆಯಲು ಸೂಚನೆ ನೀಡಿದ್ದೇನೆ. ಅಲ್ಲದೆ, ಮೈಸೂರು ಪೊಲೀಸರಿಗೆ ವಿಚಾರಣೆ ಮಾಡಲು ತಿಳಿಸಿದ್ದೇನೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. 

ಈ ಬಗ್ಗೆ ಸುದ್ದಿಗಾರರ ಜೊತೆ ಮಾತನಾಡಿದ ಸಚಿವ ಆರಗ ಜ್ಞಾನೇಂದ್ರ, ಹೆಚ್.ಡಿ. ಕುಮಾರಸ್ವಾಮಿ ಜೊತೆ ಸಂಪರ್ಕ ಹೇಗೆ ಎಂಬುದು ಗೊತ್ತಾಗಬೇಕಿದೆ. ಅವರಿಗೆ ಇಷ್ಟೊಂದು ಫೋಟೊ ಸಿಗುತ್ತೆ ಗೊತ್ತಿಲ್ಲ. ಅವರಲ್ಲಿರುವ ಮಾಹಿತಿ ತನಿಖಾಧಿಕಾರಿಗೆ ಕೊಡಬೇಕು ಎಂದು ತಿಳಿಸಿದ್ದಾರೆ. 

ಇದನ್ನೂ ಓದಿ : Kantara Movie: ‘ಕಾಂತಾರ’ ಹೋಲುವ ಘಟನೆ: ದೈವಸ್ಥಾನ ವಿಚಾರದಲ್ಲಿ ಕೋರ್ಟ್ ಮೆಟ್ಟಿಲೇರಿದ ವ್ಯಕ್ತಿ ನಿಗೂಢ ಸಾವು!

ನಂತರ ಕಾಡು ಬಿಟ್ಟು ನದಿಗೆ ಬಂದಿರುವ ಆನೆ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಒಂದು ಆನೆ ತೀರ್ಥಹಳ್ಳಿ ಭಾಗದಲ್ಲಿ ಓಡಾಡುತ್ತಿದೆ. ಅದನ್ನು ಹಿಡಿಯಲು ಪ್ರಯತ್ನ ನಡೆದಿದೆ. ಮಾವುತರನ್ನು ಅದನ್ನು ಹಿಡಿಯಲು ಬಿಡಲಾಗಿದೆ ಎಂದು ತಿಳಿಸಿದ್ದಾರೆ. 

ಇನ್ನು ಸಂಪುಟ ವಿಸ್ತರಣೆ ಬಗ್ಗೆ ಪ್ರಕ್ರಿಯೆ ನೀಡಿದ ಅವರು, ಸಂಪುಟ ವಿಸ್ತರಣೆ ಬಗ್ಗೆ ಯಾವುದೇ ಮಾಹಿತಿ ಇಲ್ಲ.ಅದು ಮುಖ್ಯಮಂತ್ರಿ ವಿವೇಚನೆಗೆ ಬಿಟ್ಟ ವಿಚಾರ ಎಂದು ಹೇಳಿದ್ದಾರೆ. 

ಇನ್ನು ಸುದ್ದಿಗಾರರು ಗಡಿ ಜನರ ರಕ್ಷಣೆ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದೆ ಅವರು,  ಗಡಿ ಜನರ ರಕ್ಷಣೆಗೆ ಸರ್ಕಾರ ಬದ್ಧವಾಗಿದೆ. ಗಡಿ ವಿವಾದ ಕೋರ್ಟ್ ನಲ್ಲಿರುವುದರಿಂದ ಕಾನೂನು ಸುವ್ಯವಸ್ಥೆ ಕಾಪಾಡಲು ಅಮಿತ್ ಶಾ ಸೂಚಿಸಿದ್ದಾರೆ ಎಂದು ಹೇಳಿದ್ದಾರೆ.

ಶಿವಮೊಗ್ಗ ಟ್ರಯಲ್ ಬ್ಲಾಸ್ಟ್ ವಿಚಾರವಾಗಿ ಮಾತನಾಡಿದ ಅವರು, ಎನ್ ಐಎ ತಂಡ ಕೂಲಂಕುಶವಾಗಿ ತನಿಖೆ ಮಾಡುತ್ತಿದೆ. ಶಿವಮೊಗ್ಗ, ಹೊನ್ನಾಳಿ, ಉಡುಪಿ ಕಡೆಗಳಲ್ಲಿ ತನಿಖೆ ಮಾಡಿದ್ದಾರೆ. ಶಿವಮೊಗ್ಗ, ಉಡುಪಿಯಲ್ಲಿ ಮತ್ತಿಬ್ಬರನ್ನು ಬಂಧಿಸಿದ್ದಾರೆ. ಕಾಂಗ್ರೆಸ್ ಮುಖಂಡನ ಪುತ್ರ ಬಂಧಿತ ಅನ್ನೋದು ಗೊತ್ತಾಗಿದೆ. ಕಾಂಗ್ರೆಸ್ ಗೆ ಮುಸ್ಲಿಂರ ಓಟು ಬೇಕು. ಯಾರೇ ತಪ್ಪು ಮಾಡಿದರೂ ಖಂಡಿಸುವ ಶಕ್ತಿ ಅವರಿಗಿಲ್ಲ. ದೇಶದ ಜನರಿಗೆ ಇವೆಲ್ಲ ಅರ್ಥವಾಗಿದೆ. ಕರ್ನಾಟಕದಲ್ಲಿ ಸ್ವಲ್ಪ ಉಸಿರಾಡುತ್ತಿದ್ದಾರೆ. ಇಲ್ಲೂ ಕಾಂಗ್ರೆಸ್ ನಿರ್ನಾಮ ಆಗುತ್ತೆ ಎಂದು ಗುಡುಗಿದ್ದಾರೆ. 

ಸಿಎಂ ಬಗ್ಗೆ ಕೀಳು ಮಟ್ಟದ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಆರ್ ಎಸ್ ಎಸ್ ತೆಗಳಿದರೆ ಒಂದು ಕೋಮಿನ ಮತ ಸಿಗುತ್ತೆ ಎಂಬ ಭ್ರಮೆಯಲ್ಲಿದ್ದಾರೆ. ಅವರಿಗೆ ಮತದಾರರೇ ಬುದ್ದಿ ಕಲಿಸ್ತಾರೆ ಎಂದು ಹೇಳಿದ್ದಾರೆ. 

ಇದನ್ನೂ ಓದಿ : ಕರ್ನಾಟಕ ವಿಧಾನಸಭೆ ಚುನಾವಣೆ-2023: ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿ ಬಿಡುಗಡೆ

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News