ಜನಸಾಹಿತ್ಯ ಸಮ್ಮೇಳನದ ಪ್ರಮುಖ 9 ನಿರ್ಣಯಗಳು

ಸಾಹಿತ್ಯ ಸಮ್ಮೇಳನಗಳು ಸೇರಿದಂತೆ ಕನ್ನಡ ಸಾಹಿತ್ಯ ಪರಿಷತ್ ನಡೆಸುವ ಎಲ್ಲ ಕಾರ್ಯಕ್ರಮಗಳಲ್ಲಿ ಎಲ್ಲ ಸಮುದಾಯಗಳ ಒಳಗೊಳ್ಳಬೇಕು. ಅದರಲ್ಲಿಯೂ ದಲಿತರು, ದಮನಿತರು, ಆದಿವಾಸಿಗಳು, ಮಹಿಳೆಯರು, ಲೈಂಗಿಕ ಅಲ್ಪಸಂಖ್ಯಾತರು ಮತ್ತು ಅಲ್ಪಸಂಖ್ಯಾತ ಸಮುದಾಯಗಳ ಒಳಗೊಳ್ಳುವಿಕೆ ಇರಲೇಬೇಕು.

Written by - Zee Kannada News Desk | Last Updated : Jan 9, 2023, 08:23 AM IST
  • ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಗೆ ಸಂಬಂಧಿಸಿದ ಸಂಸ್ಥೆಗಳ ಸ್ವಾಯತ್ತತೆಯನ್ನು ಸರ್ಕಾರ ಕಾಪಾಡಿಕೊಳ್ಳಬೇಕು.
  • ಈ ಸಂಸ್ಥೆಗಳಿಗೆ ನೇಮಕ ಮಾಡುವಾಗ ವಿಶೇಷ ಎಚ್ಚರ ವಹಿಸಿ ಅರ್ಹರನ್ನು ನೇಮಿಸಬೇಕು
  • ಈ ನೇಮಕಾತಿಯು ಸಾಮಾಜಿಕ ನ್ಯಾಯ ಮತ್ತು ಪ್ರಾದೇಶಿಕ ಪ್ರಾತಿನಿಧ್ಯವನ್ನು ಆಧರಿಸಿರಬೇಕು
ಜನಸಾಹಿತ್ಯ ಸಮ್ಮೇಳನದ ಪ್ರಮುಖ 9 ನಿರ್ಣಯಗಳು title=

ಬೆಂಗಳೂರು:  ಭಾನುವಾರದಂದು ಹಾವೇರಿ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಪ್ರತಿರೋಧವಾಗಿ ಬೆಂಗಳೂರಿನಲ್ಲಿ ನಡೆದ ಜನಸಾಹಿತ್ಯ ಸಮ್ಮೇಳನದಲ್ಲಿ ಒಂಬತ್ತು ಪ್ರಮುಖ ನಿರ್ಣಯಗಳನ್ನು ಅಂಗೀಕರಿಸಲಾಗಿದೆ. ಆ ನಿರ್ಣಯಗಳು ಈ ಕೆಳಗಿನಂತಿವೆ.

1. ಸಾಹಿತ್ಯ ಸಮ್ಮೇಳನಗಳು ಸೇರಿದಂತೆ ಕನ್ನಡ ಸಾಹಿತ್ಯ ಪರಿಷತ್ ನಡೆಸುವ ಎಲ್ಲ ಕಾರ್ಯಕ್ರಮಗಳಲ್ಲಿ ಎಲ್ಲ ಸಮುದಾಯಗಳ ಒಳಗೊಳ್ಳಬೇಕು. ಅದರಲ್ಲಿಯೂ ದಲಿತರು, ದಮನಿತರು, ಆದಿವಾಸಿಗಳು, ಮಹಿಳೆಯರು, ಲೈಂಗಿಕ ಅಲ್ಪಸಂಖ್ಯಾತರು ಮತ್ತು ಅಲ್ಪಸಂಖ್ಯಾತ ಸಮುದಾಯಗಳ ಒಳಗೊಳ್ಳುವಿಕೆ ಇರಲೇಬೇಕು.

2 . ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಗೆ ಸಂಬಂಧಿಸಿದ ಸಂಸ್ಥೆಗಳ ಸ್ವಾಯತ್ತತೆಯನ್ನು ಸರ್ಕಾರ ಕಾಪಾಡಿಕೊಳ್ಳಬೇಕು.

3. ಈ ಸಂಸ್ಥೆಗಳಿಗೆ ನೇಮಕ ಮಾಡುವಾಗ ವಿಶೇಷ ಎಚ್ಚರ ವಹಿಸಿ ಅರ್ಹರನ್ನು ನೇಮಿಸಬೇಕು. ಈ ನೇಮಕಾತಿಯು ಸಾಮಾಜಿಕ ನ್ಯಾಯ ಮತ್ತು ಪ್ರಾದೇಶಿಕ ಪ್ರಾತಿನಿಧ್ಯವನ್ನು ಆಧರಿಸಿರಬೇಕು.

4. ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಯ ಅಧ್ಯಕ್ಷರ ನೇಮಕಾತಿ ಮತ್ತು ರಂಗಾಯಣ ನಿರ್ದೇಶಕರ ನೇಮಕಾತಿ ವಿಷಯದಲ್ಲಿ ಸರ್ಕಾರ ತಳೆದ ನಿಲುವಿಗೆ ಖಂಡನೆ

5. ಕರ್ನಾಟಕದಲ್ಲಿರುವ ಎಲ್ಲ ಭಾಷೆಗಳನ್ನು ಸಂರಕ್ಷಿಸಲು ಅಗತ್ಯ ಇರುವ ಸಮಗ್ರ ಭಾಷಾ ನೀತಿಯನ್ನು ರೂಪಿಸಲು ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು.

6. ಕನ್ನಡ ನೆಲದ ಮೇಲೆ ಹಿಂದಿ ಹೇರಿಕೆಯನ್ನು ನಾವು ವಿರೋಧಿಸುತ್ತೇವೆ. ಪ್ರಾಥಮಿಕ ಶಿಕ್ಷಣದಲ್ಲಿ ಕನ್ನಡವನ್ನು ಕಡ್ಡಾಯಗೊಳಿಸಬೇಕು.

7. ಕರ್ನಾಟಕ ಮತ್ತು ಮಹರಾಷ್ಟ್ರಗಳ ಗಡಿಗೆ ಸಂಬಂಧಿಸಿದಂತೆ ಯಥಾಸ್ಥಿತಿ ಕಾಪಾಡಿಕೊಳ್ಳಬೇಕೆಂದು ಹಾಗೂ ಗಡಿನಾಡ ಕನ್ನಡಿಗರ ರಕ್ಷಣೆ ಮಾಡಬೇಕು.

8. ಕೃಷ್ಣಾ, ಕಾವೇರಿ, ಮಹದಾಯಿ ನೀರಾವರಿ ಯೋಜನೆಗಳಿಗೆ ಸಂಬಂಧಿಸಿದ ಅಂತಾರಾಜ್ಯ ವ್ಯಾಜ್ಯಗಳಲ್ಲಿ ರಾಜ್ಯಕ್ಕೆ ಅನ್ಯಾಯವಾಗದಂತೆ ನ್ಯಾಯಾಂಗ ಹೋರಾಟ
ನಡೆಸಬೇಕು. ಈ ನದಿಗಳ ನೀರಿನ ಬಳಕೆಗೆ ಯೋಜನೆಗಳನ್ನು ರೂಪಿಸಿ ಅವುಗಳ ಅನುಷ್ಠಾನಕ್ಕೆ ಹಣ ಒದಗಿಸಬೇಕು.

9. ವಿವಿಧ ಬ್ಯಾಂಕುಗಳು, ನಂದಿನಿಯು ಸೇರಿದಂತೆ ಕರ್ನಾಟಕ ಕೇಂದ್ರಿಕೃತ ಸಂಸ್ಥೆಗಳನ್ನು ಉತ್ತರ ಭಾರತದ ಸಂಸ್ಥೆಗಳೊಂದಿಗೆ ವಿಲೀನಗೊಳಿಸುವ ಪ್ರಕ್ರಿಯೆಗೆ ವಿರೋಧ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

 

Trending News